ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಡಿಪಾರು ಪ್ರಕ್ರಿಯೆ ವಿರುದ್ಧ ಆಕ್ಷೇಪ ; ದ.ಕ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮಾಡಿದ ಬಿಜೆಪಿ ನಿಯೋಗ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಗಡಿಪಾರು ಪ್ರಕ್ರಿಯೆ ವಿರುದ್ಧ ಆಕ್ಷೇಪ ; ದ.ಕ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮಾಡಿದ ಬಿಜೆಪಿ ನಿಯೋಗ

ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ನೇತೃತ್ವದ ಬಿಜೆಪಿಯ ನಿಯೋಗವು ಮಂಗಳೂರು ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ಕೆ. ಅವರನ್ನು ಭೇಟಿ ಮಾಡಿ 36 ಮಂದಿ ಗಡಿಪಾರು ಪ್ರಕ್ರಿಯೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿ ಹಿಂದುತ್ವ ಕಾರ್ಯಕರ್ತರ ಗುರಿಯಾಗಿಸಿ ಮಾಡಿದ ಪಟ್ಟಿ ಇದು ಎಂದು ಬಿಜೆಪಿ ನಿಯೋಗ ಆರೋಪಿಸಿದೆ.

ಗಡೀಪಾರು ಮಾಡಲು ನೋಟಿಸ್ ನೀಡಿದ್ದು ಸರಿಯಲ್ಲ. ಹಿಂದುತ್ವಕ್ಕಾಗಿ ದುಡಿಯುತ್ತಿರುವವರನ್ನು ಕ್ರಿಮಿನಲ್‌ ರೀತಿ ಬಿಂಬಿಸುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದೇವೆ. ಕಾರ್ಯಕರ್ತರ ಮನೆಗೆ ಪೊಲೀಸರು ವಿಚಾರಣೆ ನೆಪದಲ್ಲಿ ರಾತ್ರಿ ಹೊತ್ತಿನಲ್ಲಿ ಭೇಟಿ ನೀಡುವುದನ್ನು ನಿಲ್ಲಿಸಬೇಕು. ಈ ರೀತಿ ಮಾಡುವುದರಿಂದ ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆ ಆಗದು ಎಂದು ಬಿಜೆಪಿ ನಿಯೋಗ ಆಕ್ಷೇಪ ವ್ಯಕ್ತಪಡಿಸಿದೆ.

‘ಇಂತಹ ಕ್ರಮ ಕೈಗೊಳ್ಳುವುದಕ್ಕೆ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿನ ಜನಪ್ರತಿನಿಧಿಗಳ ಜೊತೆ ಚರ್ಚಿಸಬೇಕಿತ್ತು. ಹಿಂದೆಲ್ಲ ಅಹಿತಕರ ಘಟನೆ ನಡೆದಾಗ ಸಚಿವರು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸಾಮಾಜಿಕ ಮುಖಂಡರ ಜೊತೆ ಸಮಾಲೋಚನೆ ನಡೆಸುತ್ತಿದ್ದರು. ಈ ಸಲ ಅಂತಹ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಈ ಗಡಿಪಾರು ಪ್ರಕ್ರಿಯೆ ಮತ್ತು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲು ಮಾಡಿರುವುದೂ ಸಹ ಜಿಲ್ಲೆಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತಿದೆ ಎಂದು ಬಿಜೆಪಿ ನಿಯೋಗ ಆಕ್ಷೇಪ ವ್ಯಕ್ತಪಡಿಸಿದೆ.

ಸಂಘ ಪರಿವಾರದ ಕಾರ್ಯಕರ್ತರ ಮನೋಬಲ ಕುಗ್ಗಿಸಲು ಸರ್ಕಾರ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಮಾನತು ಪಟ್ಟಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕಛೇರಿಯಲ್ಲಿ ಸಿದ್ಧವಾಗಿದೆ. ಇದು ಕಾಂಗ್ರೆಸ್ ನ ದ್ವೇಷಪೂರಿತ ನಡೆ. ಇದನ್ನು ನಿಲ್ಲಿಸದಿದ್ದರೆ ಹೋರಾಟ ಅನಿವಾರ್ಯ. ಈ ಬಗ್ಗೆ ಪರಿವಾರದ ಸಂಘಟನೆಗಳು ಮತ್ತು ಬಿಜೆಪಿ ಜೊತೆಯಾಗಿ ನಿರ್ಧಾರ ತೆಗೆದುಕೊಳ್ಳಲಿದೆ. ಅಮಾಯಕರು, ಸಂಘ ಪರಿವಾರದ ಕಾರ್ಯಕರ್ತರ ಜತೆಯಲ್ಲಿ ಪಕ್ಷ ಸದಾ ನಿಲ್ಲಲಿದೆ ಎಂದು ನಿಯೋಗ ಹೇಳಿದೆ.

ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್ ಉಳಿಪಾಡಿ, ಹರೀಶ್ ಪೂಂಜ, ಭಾಗಿರಥಿ ಮುರುಳ್ಯ, ಬಿಜೆಪಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಮತ್ತಿತರರು ನಿಯೋಗದಲ್ಲಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು