ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

BJPಗೆ RSS ಬೆಂಬಲವಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಖತ್ ಇಲ್ಲ – ಸಿ ಎಮ್ ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

BJPಗೆ RSS ಬೆಂಬಲವಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಖತ್ ಇಲ್ಲ – ಸಿ ಎಮ್ ಸಿದ್ದರಾಮಯ್ಯ

ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು.. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್ ಎಸ್ ಎಸ್ ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಖತ್ ಇಲ್ಲ ಅಷ್ಟೆ‌ ಎಂದು ಮುಖ್ಯಮಂತ್ರಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿಎಂದು ಅವರು ಸವಾಲು ಹಾಕಿದ್ದಾರೆ.

ಅನಂತಕುಮಾರ ಹೆಗಡೆ ನಿರಂತರವಾಗಿ ಸಂವಿಧಾನದ ವಿರುದ್ಧ ಮಾತ್ರ ಹೇಳಿಕೆ ನೀಡಿದ್ದಲ್ಲ ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಹೇಳಿದ್ದಾರೆ, ದಲಿತರನ್ನು ನಾಯಿಗಳು ಎಂದು ದೂಷಿಸಿದ್ದಾರೆ. ಮನುಸ್ಮೃತಿಯನ್ನು ಬಹಿರಂಗವಾಗಿ ಸಮರ್ಥಿಸಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಗಲೂ ಬಿಜೆಪಿ ಹೆಗಡೆ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾಕೆಂದರೆ ಹೆಗಡೆ ಮಾತುಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ನ ಮನದ ಮಾತುಗಳೂ ಆಗಿತ್ತು ಎಂದು ಅವರು ಹೇಳಿದ್ದಾರೆ.

ಅನಂತಕುಮಾರ್ ಹೆಗಡೆ ಸಂವಿಧಾನದ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಅವರ ಬಿಜೆಪಿಯ ನಿಜವಾದ ‘‘ಹೈಕಮಾಂಡ್’’ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪೂರ್ಣ ಬೆಂಬಲ ಇದೆ. ಆರ್.ಎಸ್.ಎಸ್ ಬಹಿರಂಗವಾಗಿ ಸಂವಿಧಾನಕ್ಕೆ ಬದ್ಧತೆ ಸಾರಿದ್ದರೂ ಅಂತರಂಗದಲ್ಲಿ ಎಂದೂ ಸಂವಿಧಾನವನ್ನಾಗಲಿ, ಅದರ ರಚನಕಾರರಾದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿಲ್ಲ. ಹೆಗಡೆ ಹೇಳಿರುವುದನ್ನೇ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್.

ಸಂಸದನಾಗಿ ತಮ್ಮ ಸ್ವಂತ ಕ್ಷೇತ್ರಕ್ಕೆ ನಯಾಪೈಸೆಯಷ್ಟು ಕೆಲಸವನ್ನು ಮಾಡದ ಮತ್ತು ಲೋಕಸಭೆಯಲ್ಲಿ ಬಾಯಿ ಮುಚ್ಚಿಕೊಂಡೇ ಐದು ವರ್ಷಗಳನ್ನು ಪೂರ್ಣಗೊಳಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡದಾದ್ಯಂತ ಜನರಲ್ಲಿ ಆಕ್ರೋಶವಿದೆ. ಇದಕ್ಕಾಗಿ ಹಿಂದುತ್ವ ಅಪಾಯದಲ್ಲಿದೆ ಎಂಬ ಹುಸಿಭೀತಿಯನ್ನು ಜನರಲ್ಲಿ ಹುಟ್ಟಿಸಿ ಕೋಮುಭಾವನೆಯನ್ನು ಕೆರಳಿಸಿ ಮತಗಳ ಧ್ರುವೀಕರಣಗೊಳಿಸುವುದು ಅವರ ಉದ್ದೇಶವಾಗಿದೆ. ಇದಕ್ಕೆ ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಅವರು ಲೆಕ್ಕಕ್ಕಿಟ್ಟಿಲ್ಲ.

ಕಾರವಾರ ಕ್ಷೇತ್ರದಲ್ಲಿ ಹಿಂದುಳಿದ ಜಾತಿಗಳು, ಅಲ್ಪಸಂಖ್ಯಾತರು ಮತ್ತು ದಲಿತರು ಬಹುಸಂಖ್ಯೆಯಲ್ಲಿದ್ದಾರೆ. ಮೀಸಲಾತಿಯ ರದ್ದುಗೊಳಿಸುವ ದುರುದ್ದೇಶದಿಂದಲೇ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನದ ಬದಲಾವಣೆಯ ಬಗ್ಗೆ ವಕಾಲತು ಮಾಡುತ್ತಿದ್ದಾರೆ ಎಂಬ ಅರಿವು ಅವರಲ್ಲಿ ಮೂಡಬೇಕಾಗಿದೆ. ಹೆಗಡೆಯವರಿಗೆ ಮಾತ್ರವಲ್ಲ ಇಂತಹ ಮನುಷ್ಯ ವಿರೋಧಿ ನಡೆಯನ್ನು ಬೆಂಬಲಿಸುತ್ತಿರುವ ಬಿಜೆಪಿಗೂ ಸರಿಯಾದ ಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು