ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಂಡಲ್ ವರದಿಗೆ ವಿರುದ್ಧವಾಗಿ ಕಮಂಡಲ ಚಳವಳಿಗೆ ಚಾಲನೆ ನೀಡಿದ ಬಿಜೆಪಿಗೆ ಮೀಸಲಾತಿ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ಮಂಡಲ್ ವರದಿಗೆ ವಿರುದ್ಧವಾಗಿ ಕಮಂಡಲ ಚಳವಳಿಗೆ ಚಾಲನೆ ನೀಡಿದ ಬಿಜೆಪಿಗೆ ಮೀಸಲಾತಿ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಮಾಡುವ ಪ್ರತಿಭಟನೆ, ‘‘ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ’’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ರಾಹುಲ್‌ ಗಾಂಧಿಯವರ ಮೀಸಲಾತಿ ಹೇಳಿಕೆಯನ್ನು ತಿರುಚಿ ಪ್ರತಿಭಟನೆ ಮಾಡುತ್ತಿರುವ ವಿರೋಧ ಪಕ್ಷಗಳ ನಡೆಯನ್ನು ಪ್ರಶಿಸಿ ಅವರು ಇಂದು ತಮ್ಮ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ.

ಅವರು ತಮ್ಮ ಹೇಳಿಕೆಯಲ್ಲಿ “ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಇಂತಹ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ?” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಮೀಸಲಾತಿ ವಿರೋಧವನ್ನು ರಕ್ತಗತವಾಗಿಸಿಕೊಂಡಿರುವ ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಅರ್ಥಮಾಡಿಕೊಳ್ಳುವ ಜ್ಞಾನವಾಗಲಿ, ವ್ಯವಧಾನವಾಗಲಿ ಇಲ್ಲದಿರುವುದು ಆಶ್ಚರ್ಯವೇನಲ್ಲ. ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ ನಾನೂ ಹೇಳುತ್ತೇನೆ. ಇದು ಹೇಗೆ ಮೀಸಲಾತಿ ವಿರೋಧಿ ಹೇಳಿಕೆ ಆಗುತ್ತದೆ?

ಸರ್ವರಿಗೂ ಶಿಕ್ಷಣ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸಮಾನ ಪಾಲು ಸಿಗಬೇಕೆಂಬ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿ ನೀತಿಯನ್ನು ಸಂವಿಧಾನದಲ್ಲಿ ಅಳವಡಿಸಿದ್ದರು. ಆದರೆ ಮೀಸಲಾತಿಯ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮಾನ ಅವಕಾಶ ಇನ್ನೂ ಸಿಕ್ಕಿಲ್ಲ, ಸಾಮಾಜಿಕ ಅಸಮಾನತೆ ಕಡಿಮೆಯಾಗಿಲ್ಲ. ಇದಕ್ಕೆ ಬಿಜೆಪಿ ನಾಯಕರಂತಹ ಜಾತಿ ಪಟ್ಟಭದ್ರರು ಕಾರಣ ಎನ್ನುವುದು ಗೋಡೆ ಬರಹದಷ್ಟು ಸ್ಪಷ್ಟ.

ಬಿಜೆಪಿಯ ಮಾತೃ ಸಂಸ್ಥೆಯಾದ ಆರ್ ಎಸ್ ಎಸ್ ಹುಟ್ಟಿನಿಂದಲೆ ವರ್ಣವ್ಯವಸ್ಥೆಯನ್ನು ಸಮರ್ಥಿಸಿಕೊಂಡು ಬಂದಿರುವುದಕ್ಕೆ ಇತಿಹಾಸವೇ ಸಾಕ್ಷಿ. ಸಾಮಾಜಿಕ ನ್ಯಾಯದಾನದ ಅವಕಾಶಗಳು ತೆರೆದುಕೊಂಡಾಗೆಲ್ಲ ಅದರ ವಿರುದ್ಧ ಹೋರಾಟ ನಡೆಸಿರುವುದು ಬಿಜೆಪಿ. ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ವಿರೋಧಿಸಿ ದಿವಂಗತ ನ್ಯಾ.ರಾಮ ಜೋಯಿಸ್‌ರಿಂದ ಸುಪ್ರೀಂ ಕೋರ್ಟ್ ಗೆ ಕಟ್ಲೆ ಹಾಕಿಸಿದ್ದ ಬಿಜೆಪಿ ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಮೀಸಲಾತಿಯನ್ನು ವಿರೋಧಿಸಿ ಚಳುವಳಿ ನಡೆಸಿದೆ ಎಂದು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೀಸಲಾತಿ: ರಾಹುಲ್‌ ಗಾಂಧಿ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಿದ ಬಿಜೆಪಿ ಮಡಿಲುಗುನ್ನಿ ಮಾಧ್ಯಮಗಳು ಮತ್ತು NDA ಒಕ್ಕೂಟ

https://peepalmedia.com/bjp-and-nda-tries-to-twist-rahul-gandhis-statements/

ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರು ಮಂಡಲ್ ವರದಿ ಜಾರಿಗೊಳಿಸಿದ್ದಾಗ ಅಮಾಯಕ ವಿದ್ಯಾರ್ಥಿಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರಕ್ಕೆ ಪ್ರಚೋದಿಸಿದ್ದ ಬಿಜೆಪಿ, ಮಂಡಲ್ ವರದಿಗೆ ವಿರುದ್ಧವಾಗಿ ಕಮಂಡಲ ಚಳವಳಿಗೆ ಚಾಲನೆ ನೀಡಿ ಜನರ ತಲೆಯಲ್ಲಿ ಧರ್ಮದ ಅಫೀಮು ತುಂಬುವ ಪ್ರಯತ್ನ ಮಾಡಿತ್ತು. ಕೋಮುವಾದದ ಗುರಿ ಕೇವಲ ಅಲ್ಪಸಂಖ್ಯಾತರಲ್ಲ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಶವೂ ಅದರ ಗುರಿಯಾಗಿದೆ.

ಮೀಸಲಾತಿ ಫಲಾನುಭವಿಗಳಲ್ಲಿನ್ನ ಜಾಗೃತಿಯಿಂದಾಗಿ ಮೀಸಲಾತಿಯನ್ನು ನೇರವಾಗಿ ವಿರೋಧಿಸುವ ದಮ್ಮ-ತಾಕತ್ತು ಇಂದಿನ ಬಿಜೆಪಿ ನಾಯಕರಿಗೆ ಇಲ್ಲ. ಇದಕ್ಕಾಗಿ ಒಂದೆಡೆ ಮೀಸಲಾತಿಗೆ ಕಾನೂನಿನ ರಕ್ಷಣೆ ನೀಡಿರುವ ಸಂವಿಧಾನವನ್ನೇ ಬದಲಾಯಿಸುವ ಪ್ರಯತ್ನ ಮಾಡಿದರೆ ಇನ್ನೊಂದೆಡೆ ಮೀಸಲಾತಿ ಫಲಾನುಭವಿಗಳ ನಡುವೆಯೆ ಅಂತಃಕಲಹ ಏರ್ಪಡಿಸಿ ಸಾಮಾಜಿಕ ನ್ಯಾಯದ ಅಸ್ತ್ರವನ್ನು ಮೊಂಡಾಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಮೀಸಲಾತಿಯ ಫಲಾನುಭವಿಗಳಾದ ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಸಮುದಾಯ ಇಂದು ಜಾಗೃತವಾಗಿದೆ. ಯಾರು ತಮ್ಮ ಶತ್ರುಗಳು ಮತ್ತು ಮಿತ್ರರು ಎನ್ನುವುದನ್ನು ಅವರು ಅರಿತುಕೊಂಡಿದ್ದಾರೆ. ಮೀಸಲಾತಿ ವಿರೋಧವನ್ನು ಅಂತರ್ಯದಲ್ಲಿ ಅಡಗಿಸಿಕೊಂಡು ಬಹಿರಂಗವಾಗಿ ಮೀಸಲಾತಿ ಪರ ಘೋಷಣೆ ಕೂಗಿದರೆ ನಂಬುವಷ್ಟು ನಮ್ಮ ಜನ ದಡ್ಡರಲ್ಲ. ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದಾನದ ಅವಕಾಶಗಳನ್ನು ಕಾಲಕಾಲಕ್ಕೆ ಹೇಗೆ ಬಿಜೆಪಿ ಮತ್ತು ಸಂಘ ಪರಿವಾರ ಚಿವುಟಿಹಾಕಿದೆ ಎನ್ನುವುದನ್ನು ನಮ್ಮ ಜನ ನೋಡಿ, ಅನುಭವಿಸಿ ತಿಳಿದುಕೊಂಡಿದ್ದಾರೆ. ನಿಮ್ಮ ಹುಸಿ ಸಾಮಾಜಿಕ ನ್ಯಾಯದ ಘೋಷಣೆಗೆ ಅವರು ಮರುಳಾಗುವವರಲ್ಲ.

ಸಮಾನ ಅವಕಾಶ ಸಿಕ್ಕಿದೆಯೇ, ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲಿಕ್ಕಾಗಿಯೇ ಸುಪ್ರೀಂ ಕೋರ್ಟ್ ಜಾತಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕೆಂದು ಹೇಳಿದ್ದು. ಅದನ್ನು ನಮ್ಮ ಸರ್ಕಾರ ಕರ್ನಾಟಕದಲ್ಲಿ ಮಾಡಿ ತೋರಿಸಿದೆ. ಬಿಜೆಪಿ ನಾಯಕರಿಗೆ ಮತ್ತು ಕೇಂದ್ರದಲ್ಲಿರುವ ಅವರ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಮೊದಲು ಜಾತಿಗಣತಿಯನ್ನು ಶೀಘ್ರವಾಗಿ ದೇಶಾದ್ಯಂತ ನಡೆಸಿ ಮುಗಿಸಲಿ. ಮೀಸಲಾತಿ ಸಮಾಜದ ಕಟ್ಟಕಡೆಯ ಮನುಷ್ಯನನ್ನು ತಲುಪಿದೆಯೇ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ಇದು ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು