ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಸಿಇಸಿ ಸಭೆಯಲ್ಲಿ ಚರ್ಚೆಯಾಗಿಲ್ಲ: ಯಡಿಯೂರಪ್ಪ

P

Peepal Media Desk • ರಾಜ್ಯ

• 1 ನಿಮಿಷದ ಓದು

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಸಿಇಸಿ ಸಭೆಯಲ್ಲಿ ಚರ್ಚೆಯಾಗಿಲ್ಲ: ಯಡಿಯೂರಪ್ಪ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಕೇಸರಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

ಹೊಸದಿಲ್ಲಿಯಿಂದ ಆಗಮಿಸಿದ ಬಳಿಕ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜಿ20 ಶೃಂಗಸಭೆಯ ಯಶಸ್ಸಿನ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದರು.

”ದೆಹಲಿಯಲ್ಲಿನ ಉನ್ನತ ನಾಯಕರ ಜೊತೆ ರಾಜಕೀಯ ವಿಷಯಗಳನ್ನು ಚರ್ಚಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನಸ್ಸಿನಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ಈ ನಿಟ್ಟಿನಲ್ಲಿ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ” ಎಂದರು.

“ಈ ಬಗ್ಗೆ ಯಾವುದೇ ವೈಯಕ್ತಿಕ ಅಭಿಪ್ರಾಯವಿಲ್ಲ. ಅವರು ಮೈತ್ರಿ ವಿಚಾರವನ್ನು ಚರ್ಚೆಗೆ ತಂದಿಲ್ಲ ಮತ್ತು ನಾನೂ ಕೇಳಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನಿರ್ಧರಿಸುತ್ತಾರೆ. ಕೇಂದ್ರ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಒಮ್ಮತವಿದೆ. ನಾನು ವಿಷಯವನ್ನು ನಿರ್ಧರಿಸಲು ಸಾಧ್ಯವಿಲ್ಲ, ಎಲ್ಲವನ್ನೂ ನವದೆಹಲಿಯಲ್ಲಿ ನಿರ್ಧರಿಸಬೇಕು,” ಎಂದು ಅವರು ಹೇಳಿದರು.

ಕಾವೇರಿ ವಿವಾದ ಕುರಿತು ಮಾತನಾಡಿದ ಯಡಿಯೂರಪ್ಪ, ತಮಿಳುನಾಡಿಗೆ ಒಂದು ಹನಿ ನೀರು ಬಿಡಬಾರದು. ತಮಿಳುನಾಡಿಗೆ ನೀರು ಬಿಡುವ ಮೂಲಕ ರಾಜ್ಯ ಸರ್ಕಾರ ದೊಡ್ಡ ಅಪರಾಧ ಮಾಡಿದ್ದು, ಕೂಡಲೇ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾವೇರಿ ನೀರಿನ ಮೇಲೆ ಅವಲಂಬಿತವಾಗಿರುವ ಪ್ರದೇಶಗಳ ವಾಸ್ತವತೆಯನ್ನು ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಮಂಡಿಸಬೇಕು. ಕರ್ನಾಟಕದ 195 ತಾಲ್ಲೂಕುಗಳಲ್ಲಿ ಬರದ ಪರಿಸ್ಥಿತಿಯಿದ್ದು, ಅದನ್ನು ಎದುರಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version