ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೋಮು ಪ್ರಚೋದನೆ ವಿಡಿಯೋ ವೈರಲ್: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ವಿರುದ್ಧ ಪ್ರಕರಣ ದಾಖಲು

P

Peepal Media • ರಾಜ್ಯ

• 1 ನಿಮಿಷದ ಓದು

ಕೋಮು ಪ್ರಚೋದನೆ ವಿಡಿಯೋ ವೈರಲ್: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳುತ್ತಾ, ಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತು ಹಾಕಬೇಕು ಮತ್ತು 8 ದಿನಗಳಲ್ಲಿ ‘ಲವ್ ಜಿಹಾದ್’ ಆರೋಪಿಗಳನ್ನು ಸಾಯಿಸಬೇಕು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಣಿಕಂಠ ರಾಠೋಡ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಕಲಬುರಗಿಯಲ್ಲಿ ಪೊಲೀಸರನ್ನು ಕೇವಲ 15 ನಿಮಿಷಗಳ ಕಾಲ ತಡೆದರೆ ಮುಸ್ಲಿಮರನ್ನು ಸಾಮೂಹಿಕವಾಗಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಲಂಬಾಣಿ ಭಾಷೆಯಲ್ಲಿ ಮಾಡಿದ ಈ ವಿಡಿಯೋದಲ್ಲಿ, ಧರ್ಮಗಳ ನಡುವೆ ಜಗಳ ಹುಟ್ಟಿಸುವ ರೀತಿಯಲ್ಲಿ ಕೋಮು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಹೇಳಿಕೆಗಳ ವಿರುದ್ಧ ಸಯ್ಯದ್ ಅಲಿಮ್ ಇಲಾಹಿ ಎಂಬುವರು ದೂರು ದಾಖಲಿಸಿದ ಬಳಿಕ, ಕಲಬುರಗಿಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಘಟನೆಯ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ರಾಠೋಡ್‌ನನ್ನು ತಕ್ಷಣ ಬಂಧಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಇದಕ್ಕೂ ಮುಂಚೆ, ಕೆಲ ದಿನಗಳ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ರಾಠೋಡ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಣಿಕಂಠ ರಾಠೋಡ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚಿತ್ತಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ ವಿರುದ್ಧ ಸೋಲು ಕಂಡಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version