ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಕ್ಷಿಣ ಕನ್ನಡದಲ್ಲಿ SDPI ಕೈ ಹಿಡಿದ BJP: ರಾಜ್ಯಾದ್ಯಂತ ತೀವ್ರ ಮುಖಭಂಗ ಎದುರಿಸುತ್ತಿರುವ ಬಿಜೆಪಿ

P

Peepal Media Desk • ರಾಜ್ಯ

• 1 ನಿಮಿಷದ ಓದು

ದಕ್ಷಿಣ ಕನ್ನಡದಲ್ಲಿ SDPI ಕೈ ಹಿಡಿದ BJP: ರಾಜ್ಯಾದ್ಯಂತ ತೀವ್ರ ಮುಖಭಂಗ ಎದುರಿಸುತ್ತಿರುವ ಬಿಜೆಪಿ

ಮಂಗಳೂರು: ತಲಪಾಡಿ ಗ್ರಾಪಂ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ತಮ್ಮ ಬದ್ಧ ರಾಜಕೀಯ ವೈರಿ ಎಸ್ ಡಿಪಿಐ ಅಭ್ಯರ್ಥಿಗೆ ಬೆಂಬಲ ನೀಡಿರುವ ಬಿಜೆಪಿ ಸದಸ್ಯರು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲುವಂತೆ ಮಾಡಿದ್ದಾರೆ. ಈ ಸಮಬಲದ ಪೈಪೋಟಿಯಲ್ಲಿ ಟಾಸ್‌ ಗೆಲ್ಲುವ ಮೂಲಕ ತಲಪಾಡಿ ಗ್ರಾಪಂನ ಅಧ್ಯಕ್ಷ ಸ್ಥಾನವು SDPI ಗೆ ಒಲಿದಿದೆ.

ರಾಜಕೀಯ ರಂಗದಲ್ಲಿ ಪಂಚಾಯತ್‌ ಮಟ್ಟದ ರಾಜಕಾರಣದಷ್ಟು ಕುತೂಹಲ ಹುಟ್ಟಿಸುವ ರಾಜಕಾರಣ ಇನ್ಯಾವುದೂ ಇಲ್ಲ. ಈಗ ಅಂತಹದ್ದೇ ಒಂದು ಘಟನೆ ದಕ್ಷಿಣಕನ್ನಡದಲ್ಲಿ ನಡೆದಿದ್ದು, ಇದರಿಂದಾಗಿ ಬಿಜೆಪಿ ರಾಜ್ಯಾದ್ಯಂತ ಮುಜುಗರ ಎದುರಿಸುತ್ತಿದೆ.

ಈ ಗ್ರಾಪಂನಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದು, 1 ಕಾಂಗ್ರೆಸ್ ಹಾಗೂ 10 ಎಸ್ ಡಿಪಿಐ ಬೆಂಬಲಿತ ಸದಸ್ಯರಿದ್ದಾರೆ. ಆದರೆ ಇಂದು ನಡೆದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ವೈಭವ್ ಶೆಟ್ಟಿ ಮತ್ತು SDPI ಬೆಂಬಲಿತ ಹಬೀಬಾ ಡಿ.ಬಿ ಹಾಜರಾಗಿದ್ದರು. SDPI ಅಭ್ಯರ್ಥಿ ಟಿ.ಇಸ್ಮಾಯಿಲ್ ಮತ್ತು ಬಿಜೆಪಿಯ ಸತ್ಯರಾಜ್ ನಡುವೆ ಅಧ್ಯಕ್ಷ ಸ್ನಾನಕ, ಪೈಪೋಟಿಯಿತ್ತು. ಆದರೆ ಇಬ್ಬರು ಬಿಜೆಪಿ ಸದಸ್ಯರು SDPI ಅಭ್ಯರ್ಥಿ ಪರ ಮತ ಚಲಾಯಿಸಿದ್ದಾರೆ. ಪರಿಣಾಮSDPI ಹಾಗೂ ಬಿಜೆಪಿ ಸಮಬಲದ ಮತಪಡೆದುಕೊಂಡಿದೆ. ಬಳಿಕ ಚುನಾವಣಾಧಿಕಾರಿಗಳು ಅಧ್ಯಕ್ಷ ಗಾದಿಗೆ ಬೀಟಿ ಎತ್ತುವ ಪ್ರಕ್ರಿಯೆ ನಡೆಸಿದ್ದು ಇದರಲ್ಲಿ ಟಿ.ಇಸ್ಮಾಯಿಲ್ ಗೆಲುವು ಸಾಧಿಸಿದ್ದಾರೆ.

ತನ್ನ ಪಕ್ಷದ ಅಭ್ಯರ್ಥಿ ಗೆಲ್ಲುವ ಭರವಸೆಯಲ್ಲಿ ಹೂವಿನ ಹಾರ, ಸಿಹಿಯೊಂದಿಗೆ ಬಂದಿದ್ದ ಪಕ್ಷದ ಕಾರ್ಯಕರ್ತರು ತೀವ್ರ ಮುಖಭಂಗ ಹಾಗೂ ಮುಜುಗರದೊಂದಿಗೆ ಮರಳಿದ್ದಾರೆ. ಬಹುಮತವಿದ್ದೂ ಗೆಲ್ಲಲಾಗದ ಕುರಿತು ಬಿಜೆಪಿ ಬೆಂಬಲಿಗರು ತೀವ್ರ ಹತಾಶೆ ವ್ಯಕ್ತಪಡಿಸುತ್ತಾ ಮನೆಗೆ ಮರಳಿದ್ದಾರೆ.

ಇತ್ತ ಸೋಷಿಯಲ್‌ ಮೀಡಿಯಾದಲ್ಲಿ ಬಿಜೆಪಿ ಟ್ರೋಲ್‌ಗೆ ಒಳಗಾಗುತ್ತಿದ್ದು ಉತ್ತರಿಸಲಾಗದೆ ಒದ್ದಾಡುತ್ತಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version