ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾನೂನುಬಾಹಿರ ಖಾಯಂ ನಿವಾಸಿ ಪ್ರಮಾಣಪತ್ರ ವಿತರಣೆಗೆ ತಡೆ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗದ ಮನವಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕಾನೂನುಬಾಹಿರ ಖಾಯಂ ನಿವಾಸಿ ಪ್ರಮಾಣಪತ್ರ ವಿತರಣೆಗೆ ತಡೆ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗದ ಮನವಿ

ರಾಜ್ಯ ಸರ್ಕಾರವು ‘ಖಾಯಂ ನಿವಾಸಿ ಪ್ರಮಾಣಪತ್ರ’ (Permanent Residence Certificate – PRC) ವಿತರಿಸಲು ಕೈಗೊಂಡಿರುವ ತೀರ್ಮಾನವನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಸಿ. ಟಿ. ರವಿ ಅವರನ್ನೊಳಗೊಂಡ ನಿಯೋಗವು ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿತು. ಸರ್ಕಾರದ ಈ ನಿರ್ಧಾರವು ಸಂಪೂರ್ಣವಾಗಿ “ಸಂವಿಧಾನ ವಿರೋಧಿ” ಕ್ರಮವಾಗಿದೆ ಎಂದು ನಿಯೋಗವು ತೀವ್ರವಾಗಿ ಖಂಡಿಸಿದೆ ಎಂದು ತಿಳಿದುಬಂದಿದೆ.

ರಾಜ್ಯಪಾಲರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರವು ಕೇವಲ ತನ್ನ “ವೋಟ್ ಬ್ಯಾಂಕ್” ಸೃಷ್ಟಿಸಿಕೊಳ್ಳಲು ಈ ರೀತಿ ಪಿಆರ್‌ಸಿಗಳನ್ನು ವಿತರಿಸಲು ಮುಂದಾಗಿದೆ ಎಂದು ಗಂಭೀರ ಆರೋಪ ಮಾಡಿದರು.

“ಕಾಂಗ್ರೆಸ್ ಸರ್ಕಾರವು ಪಿಆರ್‌ಸಿ ವಿತರಿಸುವುದನ್ನು ತಕ್ಷಣವೇ ತಡೆಯುವಂತೆ ನಾವು ರಾಜ್ಯಪಾಲರಲ್ಲಿ ವಿನಂತಿಸಿದ್ದೇವೆ. ರಾಜ್ಯದಲ್ಲಿ 10 ವರ್ಷಗಳಿಂದ ವಾಸಿಸುತ್ತಿರುವವರಿಗೆ ಪಿಆರ್‌ಸಿ ನೀಡುವ ಮೂಲಕ, ಅವರನ್ನು ರಾಜ್ಯದ ಖಾಯಂ ನಿವಾಸಿಗಳಂತೆ ಬಿಂಬಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆ ಮೂಲಕ ಅವರಿಗೆ ಪಡಿತರ ಚೀಟಿ (ರೇಷನ್ ಕಾರ್ಡ್), ಆರೋಗ್ಯ ಕಾರ್ಡ್ ಹಾಗೂ ಇನ್ನಿತರ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಸಂಚು ರೂಪಿಸಲಾಗಿದೆ” ಎಂದು ಅಶೋಕ್ ಕಿಡಿಕಾರಿದರು.

ಇದೇ ಸಂದರ್ಭದಲ್ಲಿ, ಮಾಲೂರು ಕ್ಷೇತ್ರದಲ್ಲಿ ರಾಜ್ಯಪಾಲರ ಹೆಸರಿನಲ್ಲೇ “ನಕಲಿ” ದಾಖಲೆಗಳನ್ನು ಸೃಷ್ಟಿಸಿ ಇತರರ ಹೆಸರಿಗೆ ಭೂಮಿ ವರ್ಗಾವಣೆ ಮಾಡಲಾಗಿರುವ ಹಗರಣದ ಬಗ್ಗೆ ತನಿಖೆ ನಡೆಸುವಂತೆ ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಮಂಜುನಾಥ್ ಅವರು ರಾಜ್ಯಪಾಲರನ್ನು ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಲೂರಿನಲ್ಲಿ ಭೂ ಪರಿವರ್ತನೆಯನ್ನೂ (ಲ್ಯಾಂಡ್ ಕನ್ವರ್ಷನ್) ಮಾಡಲಾಗಿದೆ. ಸುಮಾರು 100 ಎಕರೆ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಆಂಧ್ರಪ್ರದೇಶ ಮೂಲದ ಗಂಗಾಧರ್ ಎಂಬ ವ್ಯಕ್ತಿಯು ಕೆರೆ, ರಸ್ತೆ ಮತ್ತು ಸ್ಮಶಾನ ಸೇರಿದಂತೆ ಮೂರು ಎಕರೆ ಜಾಗವನ್ನು ಒತ್ತುವರಿ ಮಾಡಿಕೊಂಡು ಕಂಪೌಂಡ್ ನಿರ್ಮಿಸಿದ್ದಾನೆ. ಈ ಅಕ್ರಮಕ್ಕೆ ಜಿಲ್ಲಾಡಳಿತ, ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರು ಸಂಪೂರ್ಣ ಬೆಂಬಲ ನೀಡಿದ್ದಾರೆ” ಎಂದು ಆರೋಪಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು