ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪುಸ್ತಕ ವ್ಯಾಪಾರಿಗಳ ಗಮನಕ್ಕೆ! ಮೈಸೂರು ದಸರಾದಲ್ಲಿ ಪುಸ್ತಕದ ಅಂಗಡಿ ಹಾಕುವ ಹಾಗಿದ್ರೆ ಅವಕಾಶ ಇಲ್ಲಿದೆ!

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಪುಸ್ತಕ ವ್ಯಾಪಾರಿಗಳ ಗಮನಕ್ಕೆ! ಮೈಸೂರು ದಸರಾದಲ್ಲಿ ಪುಸ್ತಕದ ಅಂಗಡಿ ಹಾಕುವ ಹಾಗಿದ್ರೆ ಅವಕಾಶ ಇಲ್ಲಿದೆ!


ಬೆಂಗಳೂರು, ಸೆಪ್ಟೆಂಬರ್ 23: ಜಗತ್ತಿನ ಪ್ರಸಿದ್ದ ಮೈಸೂರು ದಸರಾ ಉತ್ಸವ-2024ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅ.03 ರಿಂದ ಅ.11 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024″ವನ್ನು ಸೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು ಇಲ್ಲಿ ಏರ್ಪಡಿಸಲಾಗುವುದು.


ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1000-00ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು.


ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಂಡು, ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆ.30 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.


ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, -560002 :080-22484516/22107704/05 ನ್ನು ಸಂಪರ್ಕಿಸುವುದು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು