ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತನ್ನಿ – ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತನ್ನಿ – ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ “ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ” ಎಂದು ಸವಾಲು ಹಾಕಿದ್ದಾರೆ

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ.

ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ. ಪ್ರಧಾನಿ ನರೇಂದ್ರ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.8,616 ಕೋಟಿಯಾಗಿದ್ದರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.15,894 ಕೋಟಿ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ, ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಅವರು ಸಂಕಿ-ಸಂಖ್ಯೆಗಳ ಸಮೇತ ವಿವರಗಳನ್ನು ನೀಡಿದ್ದಾರೆ.

ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ.

ನರೇಂದ್ರ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು