ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬುದ್ದ ಭಾರತಕ್ಕಲ್ಲದೆ ಇಡೀ ಜಗತ್ತಿಗೆ ಬೆಳಕು ನೀಡಿದ್ದಾರೆ: ಎಸ್ ಎನ್ ಚನ್ನಬಸಪ್ಪ

P

Peepal Media • ರಾಜ್ಯ

• 3 ನಿಮಿಷದ ಓದು

ಬುದ್ದ ಭಾರತಕ್ಕಲ್ಲದೆ ಇಡೀ ಜಗತ್ತಿಗೆ ಬೆಳಕು ನೀಡಿದ್ದಾರೆ: ಎಸ್ ಎನ್ ಚನ್ನಬಸಪ್ಪ

ಶಿವಮೊಗ್ಗ: ಬುದ್ದ ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಬೆಳಕು ನೀಡಿದ್ದು, ಆ ಮೂಲಕ ಶಾಂತಿ, ಸಹಬಾಳ್ವೆಯ ಮಾರ್ಗವನ್ನು ತೋರಿಸಿ ಕೊಟ್ಟಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಕುವೆಂಪು ರಂಗಮAದಿರದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ಬುದ್ದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ದೇಶಕ್ಕೆ ಬುದ್ದ, ಬಸವ, ಅಂಬೇಡ್ಕರ್ ಜ್ಞಾನದ ಶಕ್ತಿ ಕೊಟ್ಟಿದ್ದಾರೆ. ಇವರುಗಳು ಆಧ್ಯಾತ್ಮಿಕ, ವೈಚಾರಿಕತೆ ನೆಲೆಗಟ್ಟಿನ ಮಾರ್ಗ ತೋರಿಸಿದ್ದು, ಅದರಲ್ಲಿ ಬುದ್ದ ಸದಾ ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ. ಬುದ್ದನ ನಡುವಳಿಕೆ, ಪದ್ದತಿ ಈ ದೇಶಕ್ಕೆ ಪೂರಕವಾಗಿತ್ತು. ಅಂಬೇಡ್ಕರ್ ಬುದ್ದನನ್ನು ಅಪ್ಪಿಕೊಂಡರು ಎಂದರು.

ಬುದ್ದ ಈ ದೇಶಕ್ಕೆ ಶಾಂತಿಯನ್ನು ಸಾರಿದ್ದಾರೆ. ಆ ದಿಸೆಯಲ್ಲೆ ಬೆಳಗ್ಗೆ ಎದ್ದ ತಕ್ಷಣ ನಾವು ಬುದ್ದನನ್ನು ನೆನೆಯುತ್ತೇವೆ. ಆತ ಸಹಜವಾದ ಕುಟುಂಬದಿಂದ ಬಂದ ವ್ಯಕ್ತಿಯಾಗಿದ್ದು, ಇವತ್ತು ಇಡೀ ಜಗತ್ತೇ ಮಾತಾಡುವಂತಾಗಿದೆ. ನಾವೆಲ್ಲಾ ಆತನಂತೆ ದ್ವೇಷವನ್ನು ಬಿಟ್ಟು ಒಬ್ಬರಿಗೊಬ್ಬರು ಈ ದೇಶದಲ್ಲಿ ಶರಣಾಗಬೇಕು. ಬುದ್ದಂ ಶರಣಂ ಗಚ್ಚಾಮಿ ಎಂಬ ಆಶಯವನ್ನು ಪ್ರತಿಯೊಬ್ಬ ವ್ಯಕ್ತಿ ತಮ್ಮೊಳಗೆ ಅಳವಡಿಸಿಕೊಳ್ಳಬೇಕು. ಬುದ್ದ, ಬಸವ ಅಂಬೇಡ್ಕರ್ ಈ ದೇಶದ ತ್ರಿವೇಣಿ ಸಂಗಮ. ಈ ಮೂರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ನಡೆಯಬೇಕು ಎಂದರು.

ಶಿಕಾರಪುರದ ಹೊಸೂರಿನ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ರಘು ಆರ್.ಮಲ್ಲಣ್ಣರ್ ಮಾತನಾಡಿ, ಪ್ರಾಚೀನ ಕಾಲದಿಂದ ಇಲ್ಲಿಯವರೆಗೆ ಬುದ್ದನ ತತ್ವಗಳು ಅನೇಕ ರೀತಿಯಲ್ಲಿ ಪ್ರಚಾರವಾಗಿದೆ. ತತ್ವಶಾಸ್ತ್ರದ ಪ್ರತಿಪಾದಕದ ೯ ನೇ ದರ್ಶನವನ್ನು ಬುದ್ದ ದರ್ಶನವೆಂದು ವಿದ್ವಾಂಸರುಗಳು ಹೇಳಿದ್ದು, ಇದನ್ನು ಪ್ರತೀಕಾರದ ದರ್ಶನವೆಂದು ಸಹ ಕರೆದಿದ್ದಾರೆ. ಈ ದೇಶದ ಎಲ್ಲಾ ಧರ್ಮಕ್ಕೆ ರಾಜಾಶ್ರಯವಿದೆ. ಆದರೆ ಬುದ್ದನ ಧರ್ಮಕ್ಕೆ ಯಾವುದೇ ರಾಜಾಶ್ರಯವಿಲ್ಲ. ಆದರೆ ಇಡೀ ದೇಶವೇ ಬುದ್ದ ತತ್ವದ ಮಾರ್ಗವನ್ನು ಒಪ್ಪಿಕೊಂಡು ಮುನ್ನಡೆಯುತ್ತಿದೆ.

ಬುದ್ದನ ಕೃತಿ, ತತ್ವದ ಮೇಲೆ ಇಂದಿಗೂ ಅತ್ಯಧಿಕವಾಗಿ ಸಂಶೋಧನೆ ನಡೆಯುತ್ತಿದೆ. ಜಗತ್ತಿನಲ್ಲಿ ಅಷ್ಟು ಸಂಶೋಧನೆ ಯಾವ ಕೃತಿಯ ಮೇಲು ನಡೆದಿಲ್ಲ. ರಾಜ ಕುಟುಂಬದಲ್ಲಿ ಹುಟ್ಟಿದ್ದರೂ ಯುದ್ಧಾಭ್ಯಸದಲ್ಲಿ ತೊಡಗದೆ ಬಾಲ್ಯದಿಂದಲ್ಲೆ ಮನುಷ್ಯ ಪ್ರೀತಿ ಹೊಂದಿದ್ದ ಬುದ್ದ ಭವಿಷ್ಯದಲ್ಲಿ ಇಡೀ ಜಗತ್ತಿಗೆ ಮನುಷ್ಯ ಪ್ರೀತಿ ಹಾಗೂ ಶಾಂತಿಯನ್ನು ಸಾರಿದ. ರಾಜ ಕರ್ತವ್ಯವನ್ನು ತಿಳಿಸಿದ ತನ್ನ ತಾಯಿಗೆ ಮನುಷ್ಯ ಮನುಷ್ಯನನ್ನು ಕೊಲ್ಲುವುದು ಯಾವ ಕರ್ತವ್ಯವೆಂದು ಪ್ರಶ್ನಿಸಿದ. ತಂದೆ ಶುದ್ದೋಧನು ಕೂಡ ಬುದ್ದನಿಗೆ ಸಾಮಾಜಿಕ ಅರಿವು ಮೂಡಿಸಲು ಹೊಲಕ್ಕೆ ಕರೆದುಕೊಂಡು ಹೋಗುತ್ತಿದ್ದ, ಅಲ್ಲಿನ ರೈತರೊಂದಿಗೆ ಭೂಮಿಯಲ್ಲಿ ಉಳುಮೆ ಮಾಡುವುದು ಅವರೊಂದಿಗೆ ಸ್ನೇಹದೊಂದಿಗೆ ಬೆರೆಯುವುದನ್ನು ಕಲಿಸುತ್ತಿದ್ದ ಎಂದು ಹೇಳಿದರು.

ಬುದ್ದ ಅಂಡ್ ಇಸ್ ಧಮ್ಮದಲ್ಲಿ ಅಂಬೇಡ್ಕರ್, ರೋಹಿಣಿ ನದಿಯ ವಿವಾದದಲ್ಲಿ ಶಾಂತಿ ಸಂಧಾನ ಸಲಹೆ ನೀಡಿದ ಬುದ್ದ, ಆದರೆ ಕೋಸಲ ರಾಜ್ಯದ ಸೈನಿಕರು ಇದನ್ನು ಒಪ್ಪದೆ ಬುದ್ದನಿಗೆ ಸೈನಿಕರ ಒಮ್ಮತ ಅಭಿಪ್ರಾಯದಿಂದ ಯುದ್ದವನ್ನು ಒಪ್ಪಿಕೊಳ್ಳಬೇಕು, ಶುದ್ದೋಧನ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುತ್ತದೆ ಹಾಗೂ ಸಿದ್ದಾರ್ಥನನ್ನು ಬಹಿಷ್ಕಾರ ಮಾಡಲಾಗುತ್ತದೆ ಎಂಬ ಮೂರು ಷರತ್ತು ವಿಧಿಸುತ್ತಾರೆ. ಬುದ್ದ ತಾನು ಬಹಿಷ್ಕಾರಕ್ಕೆ ಒಳಾಗುವುದಕ್ಕೆ ಆಯ್ಕೆ ಮಾಡಿಕೊಂಡು ರಾಜ್ಯವನ್ನು ತೊರೆದು ಹೋಗುತ್ತಾನೆ. ಅಲ್ಲಿಂದ ಆರಂಭವಾದ ಆತನ ಸನ್ಯಾಸಿಯ ಬದುಕು ನಂತರ ಸಮಾಜದಲ್ಲಿ ಜಾತಿ ತಾರತಮ್ಯ, ಪ್ರಾಣಿಬಲಿ ಇಂತಹ ಹಲವಾರು ಸಮಸ್ಯೆಗಳನ್ನು ನಾಶ ಮಾಡಲು ಮಾರ್ಗ ಅಹಿಂಸೆ, ಶಾಂತಿಯ ತತ್ವ ಮಾರ್ಗವನ್ನು ಕಂಡುಕೊಳ್ಳುತ್ತಾನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೊಲೆ , ಸುಲಿಗೆ, ಅತ್ಯಾಚಾರಗಳಂತಹ ಅನಾಚಾರಗಳು ದೇಶದ ಉದ್ದಗಲಕ್ಕೂ ಹರಡಿದೆ. ಇದನ್ನು ನಾಶ ಮಾಡಲು ಬುದ್ದ ತತ್ವಗಳಿಂದ ಮಾತ್ರ ಸಾಧ್ಯ. ಈಗೀನ ಯುವಕರು ಕೆಟ್ಟಚಟಗಳಿಗೆ ದಾಸರಾಗಿ ಕಿನ್ನತೆ ಒಳಗಾಗುತ್ತಿದ್ದಾರೆ. ಇದರಿಂದ ಆಚೆ ಬರಲು ಬುದ್ದ ತತ್ವವೇ ಸರಿಯಾದ ಮಾರ್ಗ. ಹಾಗೂ ಜಾತಿ, ಧಾರ್ಮಿಕ ಸಂಘರ್ಷದಲ್ಲಿ ಬೆಳೆಯುತ್ತಿದ್ದಾರೆ. ಇದು ಭವಿಷ್ಯದ ಭಾರತಕ್ಕೆ ಮಾರಕವಾಗುತ್ತಿದೆ. ಇವರಿಗೆ ಬುದ್ದ, ಬಸವ, ಅಂಬೇಡ್ಕರ್ ಅವರ ತತ್ವಗಳ ತಿಳಿಸುವ ಮೂಲಕ ಶಾಂತಿ, ಸಹಬಾಳ್ವೆಯನ್ನು ಕಲಿಸಬೇಕು ಎಂದರು.

ಭಾರತ ದೇಶದವರು ಬುದ್ದನನ್ನು ಅಹಿಂಸೆ, ಶಾಂತಿ ತತ್ವಗಳ ಒಳಗೊಂಡಂತೆ ಕಂಡರೆ, ವಿದೇಶಿಯರು ಬುದ್ದನನ್ನು ಒಬ್ಬ ರಾಜಕೀಯ ತಜ್ಞನಂತೆ ನೋಡಿದ್ದಾರೆ. ಬುದ್ದ ದೇಶದಲ್ಲಿನ ಶಾಸ್ತ್ರ, ಪುರಾಣ, ವೇದಗಳಿಗೆಲ್ಲಾ ವೈಜ್ಞಾನಿಕವಾಗಿ ಉತ್ತರ ಕೊಟ್ಟಿದ್ದಾರೆ. ದೇವರ ಬಗ್ಗೆ ಪರಿಪೂರ್ಣ ಜ್ಞಾನ ಹೊಂದಿದ್ದ ಬುದ್ದ, ನಿನಗೆ ನೀನೇ ಬೆಳಕು ಎಂದು ಜಗತ್ತಿಗೆ ಸತ್ಯ ಸಾರಿದ. ಯಾವುದೇ ದೇವರಿಲ್ಲ, ನಮಗಾಗುವ ಸಂಕಷ್ಟಗಳಿಗೆ, ದುಃಖಗಳಿಗೆ ದೇವರ ಬಳಿ ಹೋದರೆ ಪರಹಾರ ಸಿಗುವುದಿಲ್ಲ. ನಮ್ಮ ದುಃಖಕ್ಕೆ ಕಾರಣವೆನೆಂಬುದು ನಾವೇ ಹುಡುಕಿಕೊಳ್ಳಬೇಕು. ಕಾರ್ಯ, ಕಾರಣ ಸಂಬಂಧ ಕುರಿತು ಅರಿವು ಮೂಡಿಸಿಕೊಳ್ಳಬೇಕು. ಇಂತಹ ಮನಸ್ಸು ಮಾಡಿದರೆ ನೀವು ಬುದ್ದರಾಗುತ್ತಿರಾ ಎಂದಿದ್ದಾರೆ.

ಅನೇಕ ವಿದ್ವಾಂಸರು ಬುದ್ದನನ್ನು ವಿಜ್ಞಾನಿ ಎಂದು ಕರೆದಿದ್ದಾರೆ. ಬುದ್ದ ಇಸ್ ಎ ಡಾಕ್ಟರ್, ಸಂಘ ಇಸ್ ಎ ನರ್ಸ್, ಧಮ್ಮ ಇಸ್ ಎ ಮೆಡಿಸನ್ ಸಾರಿದ್ದಾರೆ. ಮುಕ್ತತೆ, ಸ್ವಾತ್ರಂತ್ರ‍್ಯ ಬುದ್ದನ ಧರ್ಮದಲ್ಲಿ ಇದೆ. ಅದಕ್ಕೆ ಅನೇಕ ಜಗತ್ತು ಇವರನ್ನು ಒಪ್ಪಿಕೊಂಡಿದೆ. ವಿಜ್ಞಾನ ಮತ್ತು ಪ್ರಕೃತಿಯ ನೆಲೆಗಟ್ಟಿನಲ್ಲಿ ತತ್ವವನ್ನು ಕಟ್ಟಿ ಜಗತ್ತಿಗೆ ಶಾಂತಿ, ಸಹಬಾಳ್ವೆಯ. ನಮ್ಮ ಬದುಕಿನ ಘನತೆಗೆ ಬುದ್ದನ ಪಂಚಶೀಲ ತತ್ವ ಮುಖ್ಯವಾಗಿದೆ. ಈ ದೇಶವನ್ನು ಕಟ್ಟುವಲ್ಲಿ ಅದನ್ನು ಉಳಿಸಿಕೊಳ್ಳುವಲ್ಲಿ ಬುದ್ದನ ಅಷ್ಟಾಂಗ ಮಾರ್ಗಗಳು ಬೇಕು. ಇವುಗಳನ್ನು ೨೮ ಕ್ಕೂ ಹೆಚ್ಚು ರಾಷ್ಟ್ರ ಅಳವಡಿಸಿಕೊಂಡು ಶ್ರೀಮಂತರಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಸ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ರಾಮಣ್ಣ, ಭದ್ರಾವತಿಯ ಸಂವಕ್ ಬುದ್ಧ ಧರ್ಮಾಂಕುರ ಟ್ರಸ್ಟ್ ಉಪಾಧ್ಯಕ್ಷ ಸಾವಕ್ಕನವರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕ ಹೆಚ್.ಉಮೇಶ್ ಉಪಸ್ಥಿತರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version