ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕಾರ್ಯದರ್ಶಿ ಹುದ್ದೆ | ಸಿಎಂ ಕಚೇರಿಯಿಂದ ಕರೆ ಬಂದ ನಂತರ ನಿರ್ಧರಿಸುವೆ: ತನ್ವೀರ್‌ ಸೇಠ್ದೀಪಾವಳಿ ವೇಳೆ ಪಟಾಕಿ ಸಿಡಿಸಿದ ಪ್ರಕರಣ: ಪೊಲೀಸರ ವಿರುದ್ಧ MIT ವಿದ್ಯಾರ್ಥಿಗಳಿಂದ ಸಿಎಂಗೆ ದೂರುರವಿ ಹಂಜ್ ಬಂಧನ ಸ್ವಾಗತಾರ್ಹ; ಆತನ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಎ. ನಾರಾಯಣ ಗೌಡ ಆಗ್ರಹಡಾರ್ಕ್ ವೆಬ್‌ನಲ್ಲಿ ಅಗ್ನಿವೀರ್ ದತ್ತಾಂಶ ಮಾರಾಟಕ್ಕೆ ಯತ್ನ: 14 ವರ್ಷದ ಬಾಲಕನನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರುಬಸವ ಮಂಟಪ ಕೃತಿ ವಿವಾದ: ಲೇಖಕ ರವಿ ಹಂಜ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆಲಕ್ಷ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಆರ್‌ಎಫ್ ಅಧಿಕಾರಿ –  ಅರಣ್ಯಾಧಿಕಾರಿ ವಿಶ್ವನಾಥ್ ಲೋಕಾ ಬಲೆಗೆಕಿವೀಸ್‌ ವಿರುದ್ಧ ಕನ್ನಡಿಗ ಕೆ.ಎಲ್‌ ರಾಹುಲ್‌ ಅಬ್ಬರ, ಅಮೋಘ ಶತಕ – ಐತಿಹಾಸಿಕ ದಾಖಲೆಇ-ಕೆವೈಸಿ ಯಶಸ್ವಿಯಾದರೂ ‘ನಿಧನ’ ಎಂದು ತೋರಿಸಿದ ತಂತ್ರಾಂಶ – ಗೃಹಲಕ್ಷ್ಮಿ ಯೋಜನೆಯ ಮಹಾಲೋಪಡಿ.1ರೊಳಗೆ ರೈತರ ಖಾತೆಗೆ 5,000 ರೂ. ಬರ ಪರಿಹಾರ – ಡಾ. ಜಿ. ಪರಮೇಶ್ವರ್ಹೈದರಾಬಾದ್‌ ಕಾಂಗ್ರೆಸ್ ಖಾತೆ ನಿರ್ಬಂಧ ಮೆಟಾ ಕಚೇರಿ – ಧ್ವಂಸಗೊಳಿಸಿದ ಕಾರ್ಯಕರ್ತರುಹೊಸ ಪಾಸ್‌ಪೋರ್ಟ್‌ಗಾಗಿ ಶೇಖ್‌ ಹಸೀನಾ ಮತ್ತೊಮ್ಮೆ ಮನವಿ; ಬಾಂಗ್ಲಾದೇಶ ಸರ್ಕಾರಕ್ಕೆ ತುರ್ತು ಪತ್ರಐದನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: 15 ಸಾವಿರ ರೂ. ಗೌರವಧನಕ್ಕೆ ಲಿಖಿತ ಆದೇಶಕ್ಕೆ ಪಟ್ಟುಬಿಜೆಪಿ ಶಾಸಕರ ನಡೆಗೆ ವಿಜಯೇಂದ್ರ ಗರಂ: ಸಿಎಂ ಔತಣಕೂಟದಲ್ಲಿ ಭಾಗವಹಿಸಿದ್ದಕ್ಕೆ ಆಕ್ಷೇಪಕ್ಷೇತ್ರ ಪುನರ್ವಿಂಗಡಣೆಗೆ ಕಾಂಗ್ರೆಸ್ ನಾಲ್ಕು ಅಂಶಗಳ ಸೂತ್ರ; 543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿ, 25 ವರ್ಷ ಬದಲಾವಣೆಗೆ ವಿರಾಮ!ನನಗೂ ಮೊಹಮ್ಮದ್‌ ಸಿರಾಜ್‌ ಆಟ ಇಷ್ಟ, ಆದರೆ ನಮ್ಮ ಇಷ್ಟಕಷ್ಟಗಳಿಗೆ ಇಲ್ಲಿ ಬೆಲೆಯಿಲ್ಲ: ಕಪಿಲ್‌ ದೇವ್ಮಣಿಪುರದಲ್ಲಿ ಕಳ್ಳಭಟ್ಟಿ ದುರಂತ: 15 ಮಂದಿ ಸಾವು, 150ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು; ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕವಿವಾದಾತ್ಮಕ ಭಾಷಣ : ಪ್ರತಾಪ್ ಸಿಂಹಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಕ್ರಿಮಿನಲ್ ಪ್ರಕರಣ ರದ್ದತಿಗೆ ಅರ್ಜಿ ತಿರಸ್ಕಾರಕಾವೇರಿ ವಿವಾದ: ತಮಿಳುನಾಡಿನ ಹೆಚ್ಚುವರಿ ನೀರಿನ ಬೇಡಿಕೆಗೆ ಸುಪ್ರೀಂ ಕೋರ್ಟ್ ತಡೆAPEC ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯ ವಾಗ್ದಾಳಿ; ಭಾರತದ ಸದಸ್ಯತ್ವದ ಕಥೆ ಏನಾಯ್ತು?ಬಸವಣ್ಣನವರಿಗೆ ಅವಮಾನ ಮಾಡಿದರೇನಂತೆ; ಸೂರ್ಯನತ್ತ ಮುಖಮಾಡಿ ಉಗಿದಂತೆ

ಬಲಪ್ರಯೋಗದಿಂದ ಜನಧ್ವನಿ ಅಡಗಿಸಲಾಗದು: ಸಿಎಂ ಮನೆಗೆ ಮುತ್ತಿಗೆ ಯತ್ನಿಸಿದ ಬಿ.ವೈ. ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರ ಬಂಧನ!

ಕಾಂಗ್ರೆಸ್ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕಾಂಗ್ರೆಸ್ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಆರೋಪಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (ಸ್ವಾತಂತ್ರ್ಯ ಉದ್ಯಾನವನ) ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪಕ್ಷದ ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗಮಧ್ಯದಲ್ಲೇ ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಗುಡುಗಿರುವ ಬಿ.ವೈ. ವಿಜಯೇಂದ್ರ, “ಪೊಲೀಸ್ ಬಲಪ್ರಯೋಗದ ಮೂಲಕ ಜನಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ; ಬೆಲೆ ಏರಿಕೆಯಿಂದ ನಲುಗಿರುವ ಜನಸಾಮಾನ್ಯರಿಗೆ ನ್ಯಾಯ ಸಿಗುವವರೆಗೆ ಈ ಹೋರಾಟ ನಿಲ್ಲುವುದಿಲ್ಲ,” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯ ಕುರಿತು ಪೋಸ್ಟ್ ಹಂಚಿಕೊಂಡಿರುವ ವಿಜಯೇಂದ್ರ, “ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ನಡೆಸಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಅಂಗವಾಗಿ, ಜನಾಕ್ರೋಶದ ಅಭಿವ್ಯಕ್ತಿಯಾಗಿ ಮುಖ್ಯಮಂತ್ರಿ/ಉಪಮುಖ್ಯಮಂತ್ರಿಗಳ ನಿವಾಸದ ಮುತ್ತಿಗೆಗೆ ಹೊರಟಿದ್ದ ನಮ್ಮನ್ನು ಪೊಲೀಸರು ವಶಕ್ಕೆ ಪಡೆಯುವ ಮೂಲಕ ಸರ್ಕಾರ ಜನಧ್ವನಿಯನ್ನು ಹತ್ತಿಕ್ಕುವ ವಿಫಲ ಯತ್ನ ಮಾಡಿದೆ,” ಎಂದು ಆಕ್ಷೇಪಿಸಿದ್ದಾರೆ.

“ಬೃಹತ್ ಜನಾಕ್ರೋಶಕ್ಕೆ ಹೆದರಿ ಪ್ರತಿಭಟನೆಯನ್ನು ಹತ್ತಿಕ್ಕುವ ಮೂಲಕ ಪ್ರಜಾಸತ್ತಾತ್ಮಕ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿರುವ ಈ ತುಘಲಕ್ ಸರ್ಕಾರದ ಬೆದರಿಕೆಗಳಿಗೆ ನಾವು ಅಂಜುವ ಪ್ರಶ್ನೆಯೇ ಇಲ್ಲ. ಖಜಾನೆ ಲೂಟಿ ಮಾಡಿ ಜನರ ಮೇಲೆ ಬೆಲೆ ಏರಿಕೆಯ ಗದಾ ಪ್ರಹಾರ ನಡೆಸಿರುವ ಈ ಭ್ರಷ್ಟ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ,” ಎಂದು ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹಾಗೂ ಎಂಎಲ್‌ಸಿ ಸಿ.ಟಿ. ರವಿ, ಶಾಸಕರಾದ ಮುನಿರತ್ನ, ಚೆನ್ನಬಸಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಪಕ್ಷದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಸೇರಿದಂತೆ ಹಲವು ಶಾಸಕರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ: ಸೋನಿಯಾ ಗಾಂಧಿ ಆತ್ಮಚರಿತ್ರೆ ಹೇಳಿಕೆಗೆ ಅಣ್ಣಾ ಹಜಾರೆ ಪ್ರತಿಕ್ರಿಯೆ: ಸಂಕುಚಿತ ಮನಸ್ಥಿತಿ ಬಿಡಿ ಎಂದ ಗಾಂಧಿವಾದಿ

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು