ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯಡಿಯೂರಪ್ಪ-ಸಿದ್ದರಾಮಯ್ಯ ತುಂಬಾ ಕ್ಲೋಸ್ ಎನ್ನುವವರು, ಅದೇ ಸಿದ್ದರಾಮಯ್ಯ ಸರ್ಕಾರ ಬಿಎಸ್‌ವೈ ವಿರುದ್ಧ 35 ಕೇಸ್ ಹಾಕಿರುವುದನ್ನು ಮರೆಯಬಾರದು: ಬಿ ವೈ ವಿಜಯೇಂದ್ರ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಯಡಿಯೂರಪ್ಪ-ಸಿದ್ದರಾಮಯ್ಯ ತುಂಬಾ ಕ್ಲೋಸ್ ಎನ್ನುವವರು, ಅದೇ ಸಿದ್ದರಾಮಯ್ಯ ಸರ್ಕಾರ ಬಿಎಸ್‌ವೈ ವಿರುದ್ಧ 35 ಕೇಸ್ ಹಾಕಿರುವುದನ್ನು ಮರೆಯಬಾರದು: ಬಿ ವೈ ವಿಜಯೇಂದ್ರ

ವಿಧಾನ ಪರಿಷತ್ ಚುನಾವಣೆಯಲ್ಲಿ ಉಂಟಾದ ಹಿನ್ನಡೆ ಹಾಗೂ ಅಡ್ಡ ಮತದಾನದ ಬೆಳವಣಿಗೆಗಳ ಬಳಿಕ ತಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ದೊಡ್ಡ ಷಡ್ಯಂತ್ರ ನಡೆಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೆಲವರು ರಾಜಕೀಯ ಚಪಲ ಹಾಗೂ ಹಣದ ಅಹಂನಿಂದ ವಿಧಾನ ಪರಿಷತ್‌ಗೆ ಬರಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರಜಾಪ್ರಭುತ್ವದ ದೇಗುಲವಾದ ವಿಧಾನ ಸೌಧಕ್ಕೆ ಕೇವಲ ಯೋಗ್ಯ ವ್ಯಕ್ತಿಗಳು ಮಾತ್ರ ಬರಬೇಕು ಎಂದ ಅವರು, ಈ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿ ಕೇವಲ ಎರಡು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿರುವುದು ಮನಸ್ಸಿಗೆ ಬೇಸರ ಮೂಡಿಸಿದೆ ಎಂದು ಒಪ್ಪಿಕೊಂಡರು.

ಹಿಂದೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮದೇ ಸರ್ಕಾರ ಉತ್ತಮ ಆಡಳಿತ ನೀಡಿತ್ತು ಎಂದ ವಿಜಯೇಂದ್ರ, ಕಾಂಗ್ರೆಸ್ ಪಕ್ಷವು ಮಾಡಿದ ’40 ಪರ್ಸೆಂಟ್’ ಭ್ರಷ್ಟಾಚಾರದ ಆರೋಪವನ್ನು ಸರಿಯಾಗಿ ಎದುರಿಸಲು ಸಾಧ್ಯವಾಗದೆ ಮತ್ತು ನಮ್ಮದೇ ಆಂತರಿಕ ಸಮಸ್ಯೆಗಳಿಂದಾಗಿ ಇಂದು ನಾವು ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ ಎಂದು ವಿಶ್ಲೇಷಿಸಿದರು.

ಇದೇ ವೇಳೆ ಬಿ.ಎಸ್.ವೈ–ಸಿದ್ದರಾಮಯ್ಯ ಮತ್ತು ವಿಜಯೇಂದ್ರ–ಡಿ.ಕೆ.ಶಿವಕುಮಾರ್ ಆತ್ಮೀಯರು ಎಂಬ ಅಪಪ್ರಚಾರವನ್ನು ಸ್ವತಃ ಪಕ್ಷದ ನಾಯಕರೇ ಮಾಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಅವರ ಗೌರವಕ್ಕೆ ಚ್ಯುತಿ ತರುವ ಇಂತಹ ಹುನ್ನಾರಗಳನ್ನು ದೇವರು ಕೂಡ ಮೆಚ್ಚುವುದಿಲ್ಲ ಎಂದರು.

ತಮ್ಮ ಮೇಲಿನ ಹೊಂದಾಣಿಕೆ ರಾಜಕಾರಣದ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ ವಿಜಯೇಂದ್ರ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಯಡಿಯೂರಪ್ಪ ಅವರ ವಿರುದ್ಧ 35 ಪ್ರಕರಣಗಳು ದಾಖಲಾಗಿವೆ ಎಂಬುದನ್ನು ನೆನಪಿಸಿದರು. ಅಲ್ಲದೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿ.ಕೆ. ಸುರೇಶ್ ವಿರುದ್ಧ ಡಾ. ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವ ರಾಜಕೀಯ ಕಾರ್ಯತಂತ್ರ ಹೆಣೆದಿದ್ದೇ ನಾನು, ಹೀಗಿರುವಾಗ ಹೊಂದಾಣಿಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೊನೆಯದಾಗಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ತಾರಕಕ್ಕೇರಿದ್ದು, ಸಚಿವ ಸಂಪುಟ ವಿಸ್ತರಣೆ ಮಾಡಲಾಗದೆ ಡಿ.ಕೆ. ಶಿವಕುಮಾರ್ ಕಾಲಹರಣ ಮಾಡುತ್ತಿದ್ದಾರೆ. ಈ ಸರ್ಕಾರದ ಅವಧಿ ಮುಗಿಯುವ ಮುನ್ನವೇ ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅಚ್ಚರಿ ಇಲ್ಲ ಎಂದು ಅವರು ಭವಿಷ್ಯ ನುಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು