ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ, ಸೆಪ್ಟೆಂಬರ್ 16: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ

ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ನಾಗಮಂಗಲ ಪ್ರಕರಣ- ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಅಮಾನತ್ತು

ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್ ಪೆಕ್ಟರ್ ನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು