ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರಕಾರಿ ಶಾಲೆ ಉಳಿಸಿ ಬೆಳೆಸುವ ಅಭಿಯಾನ ಜಿಲ್ಲಾಡಳಿತಕ್ಕೆ ಮನವಿ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಸರಕಾರಿ ಶಾಲೆ ಉಳಿಸಿ ಬೆಳೆಸುವ ಅಭಿಯಾನ ಜಿಲ್ಲಾಡಳಿತಕ್ಕೆ ಮನವಿ


ಹಾಸನ : ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂದು ಅಭಿಯಾನದಲ್ಲಿ ವಂದೇ ಮಾತರಂ ಸೇವಾ ಟ್ರಸ್ಟ್ ಹಾಗೂ ಯುವ ಸಂಘ ಮಾತೃಭೂಮಿ ಉಚಿತ ವೃದ್ಧಾಶ್ರಮದಿಂದ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಇದೆ ವೇಳೆ ಟ್ರಸ್ಟ್ ಸಂಸ್ಥಾಪಕ ನಾಗಣ್ಣ ಜೈಹಿಂದ್ ಮಾಧ್ಯಮದೊಂದಿಗೆ ಮಾತನಾಡಿ, ದಿನೇ ದಿನೇ ನಮ್ಮ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಕಡಿಮೆಯಾಗುತ್ತಿದ್ದು, ಕಲಿಯುವ ಮಕ್ಕಳಿಲ್ಲದೆ ಮುಚ್ಚುತ್ತಿದೆ. ವಿದ್ಯಾಭ್ಯಾಸ ಖಾಸಗಿಕರಣಗೊಳ್ಳುತ್ತಿದೆ, ಖಾಸಗಿ ಶಾಲೆಗಳಲ್ಲಿ ದುಡ್ಡಿದವರಿಗೆ ಮಾತ್ರ ವಿದ್ಯಾಭ್ಯಾಸ ಸಿಗುತ್ತಿದೆ, ಮಕ್ಕಳಿಲ್ಲದೇ ಹಲವಾರು ಶಾಲೆಗಳು ಮುಚ್ಚುವ ಹಂತದಲ್ಲಿದೆ, ಆದ್ದರಿಂದ ಸರಕಾರವು ಈಗಲೇ ಎಚ್ಚೆತ್ತು ಕ್ರಮಕೈಗೊಳ್ಳದಿದ್ದಲ್ಲಿ ಶೀಘ್ರದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಬರುತ್ತದೆ, ಶಾಲೆಗಳನ್ನು ಉಳಿಸಿ ಬಡಮಕ್ಕಳಿಗೂ ವಿದ್ಯಾಭ್ಯಾಸ ಮಾಡಲು ವ್ಯವಸ್ಥೆ ಮಾಡಬೇಕಾಗಿದೆ ಎಂದರು. ಸರ್ಕಾರದಿಂದ ಸಿಗುವಂತಹ ಉಚಿತ ಸವಲತ್ತುಗಳು ಬೇಕು. ಆದರೆ ನಿಮ್ಮ ಮಕ್ಕಳಿಗೆ ಸರ್ಕಾರಿ ಶಾಲೆ ಬೇಡವೇ! ರಾಜ್ಯದ ಪ್ರತಿ ಒಂದು ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೇ ಸೂರಿನಡಿ, ಎಲ್.ಕೆ.ಜಿ. ಯಿಂದ 10ನೇ ತರಗತಿವರೆಗೆ ಇಂಗ್ಲೀಷ್ ಮತ್ತ ಕನ್ನಡ ಮಾಧ್ಯಮದಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪ್ರಾರಂಭವಾಗಬೇಕು. ಸರ್ಕಾರದಿಂದ ಬಿಟ್ಟಿ ಭಾಗ್ಯಗಳಾದಂತಹ ಕುಟುಂಬದ ಸದಸ್ಯರಿಗೆ ಸಿಗುವಂತಹ ಪಿಂಚಣಿ ಯೋಜನೆ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಹಾಗೂ ಕುಟುಂಬ ಮಹಿಳಾ ಮುಖ್ಯಸ್ಥೆಗೆ ಪ್ರತಿ ತಿಂಗಳು 2000 ರೂ. ಉಚಿತ ಪಡಿತರ ಅಕ್ಕಿ, ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಕುಟುಂಬದ ಪದವಿದರರಿಗೆ ನಿರುದ್ಯೋಗಿ ಭತ್ಯೆ. ಈ ಎಲ್ಲಾ ಬಿಟ್ಟಿ ಸವಲತ್ತುಗಳನ್ನು ತೆಗೆದುಕೊಂಡು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸದೆ, ಖಾಸಗಿ ಶಾಲೆಗೆ ಸೇರಿಸುವಂತವರ ಎಲ್ಲಾ ಸರ್ಕಾರಿ ಸವಲತ್ತುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಪಂಚಾಯಿತಿ ವ್ಯಾಪ್ತಿಗೆ ಒಂದರಂತೆ ಇಂಗ್ಲೀಷ್ ಮತ್ತು ಕನ್ನಡ ವಸತಿ ಶಾಲೆ ಪ್ರಾರಂಭಿಸಿ, ಈ ಶಾಲೆಗಳಿಗೆ ಅತ್ಯುನ್ನತ್ತ ಪರಿಣಿತ ಶಿಕ್ಷಕರನ್ನು ನೇಮಿಸಿ ಹಾಗೂ ಮಕ್ಕಳನ್ನು ಶಾಲೆಗೆ ಕರೆತರಲು ಬಸ್ಸಿನ ವ್ಯವಸ್ಥೆ ಕಲ್ಪಿಸುವುದು. ಮೊದಲು ಸರ್ಕಾರದ ಅನ್ನ ತಿನ್ನುವಂತಹ (ನೌಕರರು) ಪ್ರತಿಯೊಬ್ಬ ನೌಕರರು, ಮೊದಲು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸುವಂತಾಗಲು ಸರ್ಕಾರ ಆದೇಶ ಮಾಡಬೇಕು, ಯಾರು ಸರ್ಕಾರಿ ಶಾಲೆಯಲ್ಲಿ ಓದಿಸುವುದಿಲ್ಲವೋ ಅಂತವರ ಮುಂಬಡ್ತಿ ಹಾಗೂ ಇಂಕ್ರಿಮೆಂಟ್ ಕಡಿತ ಮಾಡಬೇಕು ಎಂದು ಆಗ್ರಹಿಸಿದರು.

ಇದೆ ವೇಳೆ ವಂದೇ ಮಾತರಂ ಸೇವಾ ಟ್ರಸ್ಟ್ ಕಾರ್ಯದರ್ಶಿ ವಿಕ್ರಂ ಜೈಹಿಂದ್, ಯುವ ಸಂಘದ ಪ್ರಧಾನ ಕಾರ್ಯದರ್ಶಿ ಸುಮಾ ವಿಕ್ರಂ, ರಂಗಭೂಮಿ ಕಲಾವಿದೆ ಲಕ್ಷ್ಮೀ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು