ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರೇಸಿಸ್ಟ್‌ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

P

Peepal Media Desk • ರಾಜ್ಯ

• 1 ನಿಮಿಷದ ಓದು

ರೇಸಿಸ್ಟ್‌ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

ಶಿವಮೊಗ್ಗ: ಭಾಷಣವೊಂದರಲ್ಲಿ ತಮ್ಮ ನಾಲಿಗೆ ಹರಿಬಿಟ್ಟು ಪೇಚಿಗೆ ಸಿಲುಕಿದ ಬಿಜೆಪಿ ನಾಯಕ, ಮಾಜಿ ಸಚಿವ ಆರಗ ವಿರುದ್ಧ ಈಗ ತೀರ್ಥಹಳ್ಳಿಯಲ್ಲಿ ದೂರು ದಾಖಲಾಗಿದೆ.

ತೀರ್ಥಹಳ್ಳಿಯ ದಲಿತ ಮುಖಂಡರಾದ ಪಡುವಳ್ಳಿ ಹರ್ಷೇಂದ್ರ ಕುಮಾರ್‌ ಎನ್ನುವವರು ಈ ಕುರಿತು ದೂರು ನೀಡಿದ್ದಾರೆ.

“ರಾಷ್ಟ್ರೀಯ ಪಕ್ಷವೊಂದರ ನಾಯಕರ ಮೈಬಣ್ಣದ ಬಗ್ಗೆ ಕೀಳಾಗಿ ಮಾತನಾಡಿದ ಜ್ಞಾನೇಂದ್ರರ ಹೇಳಿಕೆಯಿಂದ ನನ್ನ ಮನಸ್ಸಿಗೆ ನೋವಾಗಿದೆ. ನನ್ನ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ, ಪರಿಶಿಷ್ಟ ಜಾತಿ ದೌರ್ಜನ್ಯ ಕಾಯ್ದೆಯನ್ವಯ ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆ ಮಾಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಕೂಡಲೇ ಶಾಸಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

“ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..”  ಎಂದು ಭಾಷಣವೊಂದರಲ್ಲಿ ವರ್ಣ ಭೇದದ ಮಾತನಾಡಿದ ಆರಗ ಜ್ಞಾನೇಂದ್ರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version