ರೇಸಿಸ್ಟ್ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು
ಲಿಂಕ್ ನಕಲಿಸಲಾಗಿದೆ ✓
ಶಿವಮೊಗ್ಗ: ಭಾಷಣವೊಂದರಲ್ಲಿ ತಮ್ಮ ನಾಲಿಗೆ ಹರಿಬಿಟ್ಟು ಪೇಚಿಗೆ ಸಿಲುಕಿದ ಬಿಜೆಪಿ ನಾಯಕ, ಮಾಜಿ ಸಚಿವ ಆರಗ ವಿರುದ್ಧ ಈಗ ತೀರ್ಥಹಳ್ಳಿಯಲ್ಲಿ ದೂರು ದಾಖಲಾಗಿದೆ.
ತೀರ್ಥಹಳ್ಳಿಯ ದಲಿತ ಮುಖಂಡರಾದ ಪಡುವಳ್ಳಿ ಹರ್ಷೇಂದ್ರ ಕುಮಾರ್ ಎನ್ನುವವರು ಈ ಕುರಿತು ದೂರು ನೀಡಿದ್ದಾರೆ.
“ರಾಷ್ಟ್ರೀಯ ಪಕ್ಷವೊಂದರ ನಾಯಕರ ಮೈಬಣ್ಣದ ಬಗ್ಗೆ ಕೀಳಾಗಿ ಮಾತನಾಡಿದ ಜ್ಞಾನೇಂದ್ರರ ಹೇಳಿಕೆಯಿಂದ ನನ್ನ ಮನಸ್ಸಿಗೆ ನೋವಾಗಿದೆ. ನನ್ನ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ, ಪರಿಶಿಷ್ಟ ಜಾತಿ ದೌರ್ಜನ್ಯ ಕಾಯ್ದೆಯನ್ವಯ ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆ ಮಾಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಕೂಡಲೇ ಶಾಸಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
“ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ. ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎಂದು ಭಾಷಣವೊಂದರಲ್ಲಿ ವರ್ಣ ಭೇದದ ಮಾತನಾಡಿದ ಆರಗ ಜ್ಞಾನೇಂದ್ರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
Peepal Media Desk
Peepal Media · ರಾಜ್ಯ ವಿಭಾಗ