ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಾಮರಾಜನಗರದಲ್ಲಿ ಅಸ್ಪೃಶ್ಯತೆ ಆಚರಣೆ : FIR ದಾಖಲು

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಚಾಮರಾಜನಗರದಲ್ಲಿ ಅಸ್ಪೃಶ್ಯತೆ ಆಚರಣೆ : FIR ದಾಖಲು

ಚಾಮರಾಜನಗರ: ಇಲ್ಲಿಗೆ ಸಮೀಪದ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮೂರು ದಿನಗಳ ಹಿಂದೆ ಇಲ್ಲಿ ನಡೆದಿದ್ದ ಅಸ್ಪೃಶ್ಯತೆ ಆಚರಣೆಗೆ ಸಂಬಂಧಿಸಿದಂತೆ ಭಾನುವಾರ ಸಂಜೆ FIR ದಾಖಲಾಗಿದೆ. ಸೊಕಾಲ್ಡ್‌ ಮೇಲ್ಜಾತಿಗೆ ಸೇರಿದ ತೊಂಬೆ(ಟ್ಯಾಂಕರ್)‌ಯಲ್ಲಿ ದಲಿತರು ನೀರು ಕುಡಿದು ಮಲಿನ ಮಾಡಿದ್ದರು ಎಂದು ಆರೋಪಿಸಿ ಜಾತಿ ನಿಂದನೆ ಮಾಡಲಾಗಿತ್ತಲ್ಲದೆ, ಆ ಟ್ಯಾಂಕರನ್ನು ಗೋಮೂತ್ರ ಸಿಂಪಡಿಸಿ ಶುದ್ದೀಕರಿಸುವ ವೈದಿಕ ಆಚರಣೆಯನ್ನೂ ನಡೆಸಲಾಗಿತ್ತು. ಈ ಕುರಿತಂತೆ ಹೆಗ್ಗೋಠಾರ ಗ್ರಾಮದ ಗಿರಿಯಪ್ಪ ಎಂಬುವವರು ಚಾಮರಾಜನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದು FIR ನಲ್ಲಿ ಕೆಳಗಿನಂತೆ ದಾಖಲಾಗಿದೆ.

FIR ನಲ್ಲಿ ಏನಿದೆ?

ಚಾಮರಾಜನಗರ ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಜನಾಂಗದ ಕುಟುಂಬದಲ್ಲಿ ನವೆಂಬರ್‌ 18ರಂದು ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಮದುವೆಗೆ ಆಗಮಿಸಿದ್ದ ಸಂಬಂಧಿಕರು ಸುಮಾರು ಒಂದು ಗಂಟೆಯ ಸಮಯದಲ್ಲಿ ಊಟ ಮುಗಿಸಿ, ಟೆಂಪೋ ಹತ್ತಲು ಹೊರಡುವಾಗ ಹುಡುಗಿ ಕಡೆಯ ಮಹಿಳೆ ಶಿವಮ್ಮ ಎಂಬುವವರು ಬಾಯಾರಿಕೆಯಾಗಿ ನೀರು ಕುಡಿಯಲು ಕೃಷ್ಣದೇವರಾಯ ದೇವಾಲಯದ ಬಳಿ ಇದ್ದ ಟ್ಯಾಂಕರ್‌ನಲ್ಲಿ ನೀರು ಕುಡಿದಾಗ ಮಹಿಳೆಗೆ ಜಾತಿ ನಿಂದನೆ ಆಗಿದೆ ಎಂದು FIR ನಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆ ನೀರು ಕುಡಿಯುವುದು ಗಮನಿಸಿದ ವೀರಶೈವ ಮುಖಂಡನಾದ ಮಹದೇವಪ್ಪ(ಪಟ್ಟವಾಡಿ) ಎಂಬ ವ್ಯಕ್ತಿಯು, ʼನೀನು ಯಾವ ಜನಾಂಗದ ಮಹಿಳೆʼ ಎಂದು ಕೇಳಿದಾಗ ʼನಾನು ಪರಿಶಿಷ್ಟ ಜನಾಂಗದ ಮಹಿಳೆʼ ಎಂದು ಉತ್ತರಿಸಿದ್ದು, ʼಇದು ವೀರಶೈವರಿಗೆ ಸೇರಿದ ತೊಂಬೆ. ನೀವು ದಲಿತರು. ಇಲ್ಲಿಗೆ ಬಂದು ನೀರು ಕುಡಿದು ನಮ್ಮ ತೊಂಬೆಗಳನ್ನು ಮಲೀನ ಮಾಡಿದ್ದೀರಾʼ ಎಂದು ಗಲಾಟೆ ಮಾಡಿ ಜಾರಿ ನಿಂದನೆ ಮಾಡಿದ್ದಾರೆಂದು FIR ನಲ್ಲಿ ಪ್ರಸ್ತಾಪಿಸಿದ್ದಾರೆ.

ಇದರ ಬಗ್ಗೆ ಕಾನೂನು ರೀತಿಯ ಕ್ರಮ ಜರುಗಿಸಿ ಶೋಷಣೆಗೊಳಗಾದ ಮಹಿಳೆಗೆ ನ್ಯಾಯ ದೊರಕಿಸಿ ರಕ್ಷಣೆ ಕೊಡಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು