ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ.07: ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಡತನ ನಿವಾರಣೆ ಕಾರ್ಯಕ್ರಮ ರೂಪಿಸುವಾಗ ಸಮ ಸಮಾಜ ನಿರ್ಮಾಣ ಮಾಡಬೇಕು. ಸ್ವಾತಂತ್ರ್ಯ ಬಂದು 76 ವರ್ಷಗಳ ನಂತರ ಈಗ ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು.

ನಮ್ಮದು ಜಾತಿ ವ್ಯವಸ್ಥೆಯ ಸಮಾಜ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಎದುರಿಸುತ್ತಿರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ- ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ನವೆಂಬರ್ ನಲ್ಲಿ ಜಾತಿ ಸಮೀಕ್ಷೆ ವರದಿ ಸಲ್ಲಿಕೆ

ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಸಲ್ಲಿಸಿದ ವರದಿಯನ್ನು ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ವೀಕರಿಸಿರಲಿಲ್ಲ. ಈಗ ಅಧ್ಯಕ್ಷರು ಬದಲಾಗಿದ್ದು, ಅವರಿಗೆ ಕಾಂತರಾಜು ಮಾದರಿಯ ವರದಿಯನ್ನು ಸಲ್ಲಿಸುವಂತೆ ಹೇಳಿದ್ದೇನೆ. ಅವರು ಇದಕ್ಕೆ ಸ್ಪಂದಿಸಿದ್ದು, ಅವರು ನವೆಂಬರ್ ತಿಂಗಳಿನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದರು.

ಪ್ರತ್ಯೇಕ ವರ್ಗ; ಸಮೀಕ್ಷೆ ವರದಿ ಬಂದ ನಂತರ ಪರಿಶೀಲನೆ

ಬಹಳ ಹಿಂದುಳಿದವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕ ವರ್ಗಬೇಕೆನ್ನುವ ಕುರಿತು ಕರ್ನಾಟಕದಲ್ಲಿ ಬೇಡಿಕೆಯಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಅದನ್ನು ಮಾಡಲು ಮೊದಲು ಹಿಂದುಳಿದ ವರ್ಗಗಳ ಸಮೀಕ್ಷೆ ವರದಿ ಬರಬೇಕು. ಅದು ಬಂದ ನಂತರ ಆ ಕುರಿತು ಪರಿಶೀಲಿಸಲಾಗುವುದು” ಎಂದು ತಿಳಿಸಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು