ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಕ್ರಮ ದನ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಮೇತ ಆರು ಮಂದಿ ಬಂಧನ

P

Peepal Media Desk • ರಾಜ್ಯ

• 1 ನಿಮಿಷದ ಓದು

ಅಕ್ರಮ ದನ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಮೇತ ಆರು ಮಂದಿ ಬಂಧನ

ಬಿಜೆಪಿ ಪಕ್ಷದ ಕಾರ್ಯಕರ್ತರ ಮೇಲ್ವಿಚಾರಣೆಯಲ್ಲಿ 3 ವಾಹನಗಳಲ್ಲಿ ದನ ಕರುಗಳನ್ನು ಹಿಂಸಾತ್ಮಕ ರೂಪದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ, ಜು.13: ಬಿಜೆಪಿ ಕಾರ್ಯಕರ್ತದ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾದ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗಡ್ಡೆ ನಿವಾಸಿ ಪುಷ್ಪರಾಜ್‌ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ವಿವರ:

ಧಮ೯ಸ್ಥಳ ಠಾಣೆಯ ಎಸ್.ಐ ಅನಿಲಕುಮಾರ್‌ ತಂಡದವರು ಬುಧವಾರ  ಖಚಿತ ಮಾಹಿತಿಯಂತೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಸಿಬ್ಬಂದಿರವರುಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ರಾತ್ರಿ 8.45 ಗಂಟೆಗೆ ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಮೂರು ಪಿಕಪ್ ವಾಹನಗಳಾದ ಕೆಎ-21ಬಿ-7389 ಕೆಎ-70-0312 ಮತ್ತು ಕೆಎ670209 ನೇ ನೋಂದಣಿ ಸಂಖ್ಯೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಜಾನುವಾರು ಸಾಗಾಟದ ಪ್ರಕರಣ ಬೆಳಕಿಗೆ ಬಂದಿತ್ತು.

ಮೂರು ಪಿಕಪ್‌ ಗಾಡಿಗಳಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಶಪಡಿಸಿಕೊಂಡಿರುವ ಜಾನುವಾರುಗಳ ಮೌಲ್ಯವು 65,000 ರೂಪಾಯಿಗಳಾಗಿದ್ದರೆ, ವಾಹನಗಳ ಅಂದಾಜು ಮೊತ್ತ ಏಳು ಲಕ್ಷವೆನ್ನಲಾಗಿದೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೆಳ್ತಂಗಡಿ ಠಾಣೆಯ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version