ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾವೇರಿ ವಿವಾದ ಆಗಸ್ಟಿನಲ್ಲಿ ಅಖಂಡ ಕರ್ನಾಟಕ ಬಂದ್‌ – ವಾಟಾಳ್ ನಾಗರಾಜ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕಾವೇರಿ ವಿವಾದ  ಆಗಸ್ಟಿನಲ್ಲಿ ಅಖಂಡ ಕರ್ನಾಟಕ ಬಂದ್‌ – ವಾಟಾಳ್ ನಾಗರಾಜ್

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಆಗಸ್ಟ್‌ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕನ್ನಡ ಒಕ್ಕೂಟಗಳ ಸಭೆಯ ಬಳಿಕ ಮಾತನಾಡಿದ ಹೋರಾಟಗಾರ ವಾಟಾಳ್ ನಾಗರಾಜ್, ಆಸ್ಪತ್ರೆ ಮತ್ತು ಆಂಬುಲೆನ್ಸ್ ಸೇವೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಸಂಪೂರ್ಣ ಬಂದ್‌ಗೆ ಎಲ್ಲರೂ ಬೆಂಬಲ ನೀಡುವಂತೆ ಮನವಿ ಮಾಡಿದರು. ರೈತರು, ಕಾರ್ಮಿಕರು, ಹೋಟೆಲ್ ಸಂಘ, ಎಪಿಎಂಸಿ, ಲಾರಿ ಮಾಲೀಕರು, ಆಟೋ ಚಾಲಕರು, ಚಿತ್ರರಂಗ ಸೇರಿದಂತೆ ವಿವಿಧ ವಲಯಗಳ ಬೆಂಬಲ ಕೋರಲಾಗಿದೆ. ಜೊತೆಗೆ ಮಾಲ್‌ಗಳು, ಚಿತ್ರಮಂದಿರಗಳು, ಬಸ್‌ಗಳು, ಓಲಾ-ಉಬರ್ ಸೇವೆಗಳು ಹಾಗೂ ವಿಮಾನ ಸಂಚಾರವೂ ಬಂದ್‌ಗೆ ಬೆಂಬಲ ನೀಡಬೇಕೆಂದು ಒತ್ತಾಯಿಸಿದರು.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ನಡೆಯನ್ನು ಟೀಕಿಸಿದ ಅವರು, ರೈತರು ಹಾಗೂ ಕನ್ನಡಪರ ಸಂಘಟನೆಗಳೊಂದಿಗೆ ಮೊದಲು ಚರ್ಚೆ ನಡೆಸಬೇಕು ಮತ್ತು ತುರ್ತು ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ನಟ-ರಾಜಕಾರಣಿ ವಿಜಯ್ ಅವರ ಆಗಸ್ಟ್‌ 3ರ ಕರ್ನಾಟಕ ಭೇಟಿ ಕುರಿತು ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ನಿಲುವು ಸ್ಪಷ್ಟಪಡಿಸದಿದ್ದರೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಬಂದ್‌ಗೆ ಪದೇಪದೇ ಕರೆ ನೀಡುತ್ತಾರೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ತಾವು ಹಲವು ದಶಕಗಳಿಂದ ಕನ್ನಡ ಮತ್ತು ರೈತರ ಪರ ಹೋರಾಟ ನಡೆಸುತ್ತಿದ್ದು, ಹೋರಾಟವೇ ತಮ್ಮ ಬದ್ಧತೆಯಾಗಿದೆ ಎಂದು ಹೇಳಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು