ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಜಿಲ್ಲಾಧಿಕಾರಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಜಿಲ್ಲಾಧಿಕಾರಿ

ಕಾರವಾರ, ಏ.01:- ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಮ್ ಮತ್ತು ಏಪ್ರಿಲ್ 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷಿಪ್ರಿಯಾ ಸೂಚಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏಪ್ರಿಲ್ 14 ರಂದು ನಡೆಯುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಲಾರ್ಪಣೆ, ಪುಷ್ಪ ನಮನ ಮತ್ತು ಪೂಜೆ ಸಲ್ಲಿಸಿ, ಭಾವಚಿತ್ರಗಳನ್ನು ತರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಿಜೃಂಭಣೆಯ ಮೆರವಣಿಗೆ ಆಯೋಜಿಸುವಂತೆ ತಿಳಿಸಿದರು.

ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು ಮತ್ತು ಮಜ್ಜಿಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾತಂಡಗಳನ್ನು ಪ್ರಾಯೋಜಿಸುವಂತೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಮಹಿಳೆಯರಿಂದ ಕುಂಭಮೇಳದ ಮೆರವಣಿಗೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು, ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪ.ಜಾತಿ ಮತ್ತು ಪ.ಪಂಗಡದ ಪ್ರತಿಭಾನ್ವಿತರಿಗೆ , ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.

ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು, ಪೊಲೀಸ್ ಇಲಾಖೆವತಿಯಿಂದ ಮೆರವಣಿಗಗೆ ಸೂಕ್ತ ಪೊಲೀಸ್ ಭದ್ರತೆ ಮತ್ತು ಪೊಲೀಸ್ ಬ್ಯಾಂಡ್ ಒದಗಿಸಬೇಕು ಎಂದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಸಮುದಾಯದ ಮುಖಂಡರಾದ ದೀಪಕ್ ಕುಡಾಲಕರ್, ಹನುಮಂತ ತಳವಾರ್, ಮಾಲ ಪ್ರದೀಪ್ ಹುಲಸ್ವಾರ, ಶ್ಯಾಮ್ ಸುಂದರ್ ಗೋಕರ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು