ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹತ್ವಾಕಾಂಕ್ಷಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ಸಮ್ಮತಿ : ಹರ್ಷ ವ್ಯಕ್ತಪಡಿಸಿದ ಸಚಿವ ಜಾರ್ಜ್

PPeepal Media Desk

Peepal Media Desk • ದೇಶ, ರಾಜ್ಯ, ವಿಶೇಷ

• 1 ನಿಮಿಷದ ಓದು

ಮಹತ್ವಾಕಾಂಕ್ಷಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ಸಮ್ಮತಿ : ಹರ್ಷ ವ್ಯಕ್ತಪಡಿಸಿದ ಸಚಿವ ಜಾರ್ಜ್

ಒಮ್ಮೆ ಹರಿದುಹೋಗಿ ವಿದ್ಯುತ್ ಉತ್ಪಾದನೆ ಮಾಡಿದ ನೀರನ್ನೇ ಮತ್ತೆ ಮೇಲಕ್ಕೆ ಪಂಪ್ ಮಾಡಿ ಅದೇ ನೀರಿನಿಂದ ಎರಡನೇ ಬಾರಿ ವಿದ್ಯುತ್ ಉತ್ಪಾದನೆ ಮಾಡುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದಿಂದ ಅನುಮತಿ ಸಿಕ್ಕಿದೆ.

ಕರ್ನಾಟಕ ವಿದ್ಯುತ್ ನಿಗಮ ಅನುಷ್ಠಾನಗೊಳಿಸುತ್ತಿರುವ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಯೋಜನೆಗೆ ದಾಖಲೆ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ವಿದ್ಯುತ್ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಲಿಂಗನಮಕ್ಕಿ ಜಲಾಶಯದ ಕೆಳಭಾಗದಲ್ಲಿರುವ ಶಿವಮೊಗ್ಗದ ತಲಕಳಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಜಲಾಶಯಗಳ ಮಧ್ಯ ಭಾಗದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.

ಇಂತಾದ್ದೊಂದು ಯೋಜನೆಗೆ ನೀರನ್ನು ಮೇಲಕ್ಕೆ ಪಂಪ್ ಮಾಡಲು ಸ್ವಲ್ಪ ಮಟ್ಟಿಗಿನ ವಿದ್ಯುತ್ ವೆಚ್ಚವಾಗುತ್ತದೆಯೇ ಹೊರತು ಮತ್ತೇನೂ ಬೇಕಿಲ್ಲ. ಒಮ್ಮೆ ವಿದ್ಯುತ್ ಉತ್ಪಾದನೆ ಮಾಡಿದ ನೀರನ್ನೇ ಹಲವಾರು ಬಾರಿ ಬಳಕೆ ಮಾಡಿ ವಿದ್ಯುತ್ ಉತ್ಪಾದನೆ ಮಾಡುವ ಮಹತ್ವಾಕಾಂಕ್ಷಿ ಯೋಚನೆ ಇದಾಗಿದೆ. ಇದಕ್ಕೆ ಯಥೇಚ್ಛವಾದ ನೀರಿನ ಅಗತ್ಯ ಇಲ್ಲದುದರಿಂದ ಮಿತ ನೀರಿನ ಬಳಕೆಯಲ್ಲೇ ಇದನ್ನು ಮಾಡಬಹುದಾಗಿದೆ.

ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಗೆ ಶರತಾವತಿ ಯೋಜನೆ ಅನಿವಾರ್ಯವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ವಿದ್ಯುತ್ಛಕ್ತಿ ಪ್ರಾಧಿಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಧನ್ಯವಾದ ತಿಳಿಸಿದ್ದಾರೆ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ತ್ವರಿತ ಕ್ರಮಗಳನ್ನು ಕೈಗೊಂಡು ಕೇಂದ್ರದಿಂದ ಅಗತ್ಯ ಅನುಮತಿಗಳನ್ನು ಪಡೆಯಲು ಪ್ರಸ್ತಾವನೆಗಳನ್ನು ಕಳುಹಿಸಲಾಗಿತ್ತು. ಇದೀಗ, ಕೇಂದ್ರದ ಪ್ರಾಧಿಕಾರ ರಾಜ್ಯದ ಡಿಪಿಆರ್‌ಗೆ ಒಪ್ಪಿಗೆ ನೀಡಿರುವುದು ನಮ್ಮ ಪ್ರಯತ್ನಕ್ಕೆ ಸಿಕ್ಕ ಫಲ. ಇನ್ನುಳಿದ ಅನುಮತಿಗಳನ್ನು ಶೀಘ್ರದಲ್ಲೇ ಪಡೆದು ಯೋಜನೆಯ ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧ ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು