ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕಾಂಗ್ರೆಸ್ ರಚಿಸಿದ ಜನಪರ ಕಾಯ್ದೆಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ: ಸಿಎಂ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ಕಾಂಗ್ರೆಸ್ ರಚಿಸಿದ ಜನಪರ ಕಾಯ್ದೆಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ, ಫೆಬ್ರವರಿ 23:ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ‘ಮನರೇಗಾ ವನ್ನು ಉಳಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನ್ಲದಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾ ವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿಅವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು.ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.

ಮನರೇಗಾ ಅಡಿ 12.16 ಕೋಟಿ ಜನರಿಗೆ ಉದ್ಯೋಗ:
ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ , 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53 % ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11 % ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದರು.

ಗ್ರಾಮಸ್ವರಾಜ್ಯ ಪರಿಕಲ್ಪನೆಗೆ ಶಕ್ತಿ ತುಂಬಿದ್ದ ಮನರೇಗಾ
ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಗ್ರಾಮಪಂಚಾಯತಿ ಮತ್ತು ಗ್ರಾಮಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ , ಅನುಮತಿ ಇಲ್ಲದೇ , ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಸಾಧ್ಯ. ಆದ್ದರಿಂದ ಮನರೇಗಾ ವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾ ದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿಜಿರಾಮ್ ಜಿ ರದ್ದುಪಡಿಸಿ, ಮನರೇಗಾ ವನ್ನು ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದರು.

ಬೇಡಿಕೆ ಈಡೇರುವವರೆಗೂ ಹೋರಾಟ
ನಮ್ಮ ಬೇಡಿಕೆಗಳು: ವಿಬಿಜಿರಾಮ್ ಜಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಮನರೇಗಾ ವನ್ನು ಮರು ಜಾರಿಗೊಳಿಸಬೇಕು. ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ, ದಿನಕ್ಕೆ 400 ರೂ.ಗಳ ಕನಿಷ್ಠ ವೇತನವನ್ನು ದೇಶಾದ್ಯಂತ ನೀಡಬೇಕು. ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದರು. ರೈತವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು. ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್ ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು