ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೆಪಿಎಸ್‌ಸಿ ಹಗರಣ ಬಯಲಾದರೆ ಡಿಕೆ ಸಂಪುಟದ ಹಲವು ಸಚಿವರು ಜೈಲಿಗೆ ಹೋಗುತ್ತಾರೆ: ಛಲವಾದಿ ನಾರಾಯಣಸ್ವಾಮಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕೆಪಿಎಸ್‌ಸಿ ಹಗರಣ ಬಯಲಾದರೆ ಡಿಕೆ ಸಂಪುಟದ ಹಲವು ಸಚಿವರು ಜೈಲಿಗೆ ಹೋಗುತ್ತಾರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣದ ಸಂಪೂರ್ಣ ಸತ್ಯಾಂಶ ಹೊರಬಂದರೆ ರಾಜ್ಯ ಸರ್ಕಾರದ ಹಲವು ಸಚಿವರು ಜೈಲು ಪಾಲಾಗಲಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗುರುವಾರ ಹೇಳಿದ್ದಾರೆ. ಈ ಹೇಳಿಕೆಯು ಕಲಾಪದಲ್ಲಿ ಕೆಲಕಾಲ ತೀವ್ರ ಗದ್ದಲಕ್ಕೆ ಕಾರಣವಾಯಿತು.

ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಕೆಪಿಎಸ್‌ಸಿ ಹಗರಣದ ಕುರಿತು ಚರ್ಚೆಗೆ ಪ್ರಸ್ತಾಪಿಸಿದ ಛಲವಾದಿ ನಾರಾಯಣಸ್ವಾಮಿ, ಈ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳದಿಂದ (ಎಸ್‌ಐಟಿ) ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಸದನದಲ್ಲಿ ಈ ವಿಷಯದ ಕುರಿತು ಸಮಗ್ರ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ ಅವರು, ಎಸ್‌ಐಟಿ ತನಿಖೆಯಿಂದ ನ್ಯಾಯ ಸಿಗಲು ಸಾಧ್ಯವಿಲ್ಲದಿದ್ದರೆ ತಕ್ಷಣವೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದರು. ಇದೇ ವೇಳೆ ಕೆಪಿಎಸ್‌ಸಿ ಸಂಸ್ಥೆಯನ್ನು ಯಾವ ಕಾನೂನಿನ ಅಡಿಯಲ್ಲಿ ಮುಚ್ಚಲು ಸಾಧ್ಯ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿ, ಸಭಾಪತಿ ಸಲೀಂ ಅಹ್ಮದ್ ಅವರ ಬಳಿ ಈ ವಿಷಯದ ಚರ್ಚೆಗೆ ಸ್ಪಷ್ಟನೆ ಕೋರಿದರು.

ಆದರೆ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ, ಪ್ರಕರಣ ನ್ಯಾಯಾಲಯದ ವ್ಯಾಪ್ತಿಯಲ್ಲಿರುವುದರಿಂದ (ಸಬ್-ಜ್ಯುಡಿಸ್) ಸದನದಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಕಾರ್ಯಕಲಾಪಗಳ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಕೆಪಿಎಸ್‌ಸಿ ವಿಷಯದ ಬಗ್ಗೆ ಯಾವುದೇ ಪ್ರಸ್ತಾಪ ಬಂದಿರಲಿಲ್ಲ, ಕೇವಲ ಬರ ಪರಿಸ್ಥಿತಿ ಮತ್ತು ಕಲಾಪವನ್ನು ಒಂದು ದಿನ ವಿಸ್ತರಿಸುವ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಹೇಳಿದ ಸಭಾಪತಿಗಳು ಬಿಜೆಪಿ ಸದಸ್ಯರ ಬೇಡಿಕೆಯನ್ನು ಪರಿಗಣಿಸಲಿಲ್ಲ. ಮುಖ್ಯಮಂತ್ರಿಗಳು ಸದನಕ್ಕೆ ಬಂದಾಗ ಈ ವಿಚಾರವನ್ನು ಪ್ರಸ್ತಾಪಿಸಬಹುದು ಎಂದು ಸಭಾಪತಿಗಳು ಸೂಚಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ, ಬಿಎಸಿ ಸಭೆಯಲ್ಲೇ ಎಲ್ಲ ನಿರ್ಧಾರಗಳು ಅಂತಿಮವಾಗುವುದಿಲ್ಲ, ಕೆಪಿಎಸ್‌ಸಿ ಹಗರಣವು ಅತ್ಯಂತ ಮಹತ್ವದ ವಿಷಯವಾಗಿದ್ದು ಇದರ ಮೇಲೆ ಚರ್ಚೆಗೆ ಸಭಾಪತಿಗಳ ಪೀಠದಿಂದಲೇ ನೇರ ತೀರ್ಮಾನ ಬರಬೇಕು ಎಂದು ಪಟ್ಟುಹಿಡಿದರು. ಇತರ ಬಿಜೆಪಿ ಸದಸ್ಯರು ಇದಕ್ಕೆ ಬೆಂಬಲ ವ್ಯಕ್ತಪಡಿಸಿ, ಮೊದಲು ಬರ ಪರಿಸ್ಥಿತಿಯ ಚರ್ಚೆ ಮುಗಿಸಿ ನಂತರ ಕೆಪಿಎಸ್‌ಸಿ ವಿಷಯ ಕೈಗೆತ್ತಿಕೊಳ್ಳಲು ಕೋರಿದರು. ಆದರೆ ಸಭಾಪತಿಗಳು ಬರ ಪರಿಸ್ಥಿತಿಯ ಮೇಲಿನ ಚರ್ಚೆಯನ್ನು ಮುಂದುವರಿಸಿದಾಗ, ಸಭಾಪತಿಗಳು ಮತ್ತು ಛಲವಾದಿ ನಾರಾಯಣಸ್ವಾಮಿ ನಡುವೆ ಕೆಲಕಾಲ ತೀವ್ರ ವಾಗ್ವಾದ ನಡೆಯಿತು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು