ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಾಮರಾಜನಗರ ಎನ್‌ಕೌಂಟರ್‌ ವಿರುದ್ಧ ಮುಂದುವರಿದ ಸೇಡು: ಅರಣ್ಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು, 10 ಎಕರೆ ಅರಣ್ಯ ಭಸ್ಮ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಚಾಮರಾಜನಗರ ಎನ್‌ಕೌಂಟರ್‌ ವಿರುದ್ಧ ಮುಂದುವರಿದ ಸೇಡು: ಅರಣ್ಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು, 10 ಎಕರೆ ಅರಣ್ಯ ಭಸ್ಮ

ಕೊಳ್ಳೇಗಾಲ/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಆಗಸ್ಟ್ 15 ರಂದು ನಡೆದ ಎನ್‌ಕೌಂಟರ್ ಘಟನೆಗೆ ಸೇಡು ತೀರಿಸಿಕೊಳ್ಳುವ ಕೃತ್ಯಗಳು ಮುಂದುವರಿದಿದ್ದು, ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚಿದ ಪರಿಣಾಮ ಸುಮಾರು 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಬುಧವಾರ ರಾತ್ರಿ ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಬಳಿ ಈ ಘಟನೆ ನಡೆದಿದೆ. ಬೆಂಕಿ ಕ್ಷಿಪ್ರವಾಗಿ ಹರಡಲೆಂದು ಕಿಡಿಗೇಡಿಗಳ ಗುಂಪು ಪೆಟ್ರೋಲ್ ಅಥವಾ ಡೀಸೆಲ್ ಬಳಸಿ ಏಕಕಾಲಕ್ಕೆ 5-6 ಕಡೆಗಳಲ್ಲಿ ಬೆಂಕಿ ಹಚ್ಚಿದೆ ಎಂದು ಮೂಲಗಳು ತಿಳಿಸಿವೆ. ಸಕಾಲದಲ್ಲಿ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಸಂಭವಿಸಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.

ಮೂವರು ಶಂಕಿತ ಬೇಟೆಗಾರರು ಮೃತಪಟ್ಟ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ದಾರಿತಪ್ಪಿಸುವ ಉದ್ದೇಶದಿಂದ ಕಿಡಿಗೇಡಿಗಳು ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಹಿಂದೆ ಇದೇ ಪ್ರದೇಶದಲ್ಲಿದ್ದ ಸುಮಾರು 11 ಬೇಟೆ ತಡೆ ಶಿಬಿರಗಳನ್ನು (APC) ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟಿಸಿ ಧ್ವಂಸಗೊಳಿಸಲಾಗಿತ್ತು.

ಅರಣ್ಯ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪದಂತೆ ತಡೆಯಲು ಕಿಡಿಗೇಡಿಗಳು ಕಾಡುಗಳ್ಳ ವೀರಪ್ಪನ್ ಶೈಲಿಯನ್ನು ಅನುಸರಿಸುತ್ತಿದ್ದಾರೆ. ರಸ್ತೆಗಳಲ್ಲಿ ಬೃಹತ್ ಬಂಡೆಗಲ್ಲುಗಳು, ಮರದ ದಿಮ್ಮಿಗಳನ್ನು ಹಾಕುವುದು ಹಾಗೂ ಗುಂಡಿಗಳನ್ನು ತೋಡುವ ಮೂಲಕ ಅರಣ್ಯ ರಕ್ಷಕರ ಓಡಾಟಕ್ಕೆ ಅಡ್ಡಿಪಡಿಸುತ್ತಿದ್ದಾರೆ.

ಕಾಡಿಗೆ ಬೆಂಕಿ ಹಚ್ಚಿ ಸರ್ಕಾರಿ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುತ್ತಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯು ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಧಿಕೃತ ದೂರು ದಾಖಲಿಸಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು