ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಂದನಕೆರೆ-ಯಡೇಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರತಿಭಟನೆ ಅಂತ್ಯಗೊಳಿಸಲು ಜಿಲ್ಲಾಧಿಕಾರಿಗಳಿಂದ ಮನವಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಚಂದನಕೆರೆ-ಯಡೇಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರತಿಭಟನೆ ಅಂತ್ಯಗೊಳಿಸಲು ಜಿಲ್ಲಾಧಿಕಾರಿಗಳಿಂದ ಮನವಿ

ಶಿವಮೊಗ್ಗ: ಜುಲೈ 31; (ಕರ್ನಾಟಕ ವಾರ್ತೆ): ಹೊಳೆಹೊನ್ನೂರು ಚಂದನಕೆರೆ ಸರ್ವೆ ನಂ. 12 ಎಂ.ಪಿ.ಎಂ. ನೆಡುತೋಪು ಮತ್ತು ಯಡೇಹಳ್ಳಿ ಸರ್ವೆ ನಂ. 66 ರಲ್ಲಿನ ಅರಣ್ಯ ಪ್ರದೇಶದಲ್ಲಿ ಮಂಜೂರಾದ ಹಕ್ಕುಪತ್ರಗಳನ್ನು ವಜಾ ಮಾಡಿರುವ ವಿರುದ್ಧ ದಲಿತ ಸಂಘಟನೆಗಳು ಹಾಗೂ ಮಾನವ ಹಕ್ಕು ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ನಿರ್ದೇಶಕರು ಅರಣ್ಯ ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ತಂಡವು ಪ್ರತಿಭಟನೆ ಅಂತ್ಯಗೊಳಿಸುವಂತೆ ಮನವಿ ಮಾಡಿದರು.


ಚಂದನಕೆರೆ ಸ.ನಂ.12ರಲ್ಲಿ 1980 ರಿಂದ ಎಂ.ಪಿ.ಎಂ. ರವರ ಸ್ವಾಧೀನದಲ್ಲಿದ್ದು, ನೀಲಗಿರಿ ನೆಡುತೋಪು ಇರುತ್ತದೆ. 2012-13 ರಲ್ಲಿ ಭದ್ರಾವತಿ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಸ್ವಾಧೀನ ಕೋರಿದ ಪ್ರಕರಣಗಳು ವಜಾ ಆಗಿದ್ದು, ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಪ್ರತಿಭಟನಾಕಾರರ ಮನವಿಯನ್ನು ವಿಲೇ ಮಾಡಲು ಕಷ್ಟಸಾಧ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರು ಪ್ರತಿಭಟನಾಕಾರರಿಗೆ ತಿಳುವಳಿಕೆ ನೀಡಿದರು.


ಪ್ರತಿಭಟನೆ ಮಾಡುತ್ತಿರುವ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳು ಓಡಾಡುವ ಸ್ಥಳವಾಗಿದ್ದು, ಮಳೆಗಾಲ ಆಗಿದ್ದರಿಂದ ಗುಡುಗು ಮಿಂಚಿಗೆ ಪ್ರಾಣ ಹಾನಿಯಾಗುವ ಸಂಭವವಿರುತ್ತದೆ. ಇದು ಪ್ರತಿಭಟನೆ ಮಾಡಲು ಸೂಕ್ತ ಸ್ಥಳವಲ್ಲದ್ದರಿಂದ ಈ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ದಕ್ಕೆ ಆಗುವ ಸಂಭವವಿರುತ್ತದೆ. ಮತ್ತು ಅರಣ್ಯ ಪ್ರದೇಶದಲ್ಲಿ ಮರಗಳನ್ನು ಕಡಿಯುವುದು ಅಪರಾಧವಾಗಿರುತ್ತದೆ ಆದ್ದರಿಂದ ಪ್ರತಿಭಟನೆಯನ್ನು ಬೇರೆಡೆಗೆ ಸ್ಥಳಾಂತರಿಸಿ ಪ್ರತಿಭಟನೆಯನ್ನು ಕೈ ಬಿಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.


ಚಂದನಕೆರೆ ಸ. ನಂ. 12 ಎಂ.ಪಿ.ಎಂ. ನೆಡುತೋಪು ಪ್ರದೇಶವಾಗಿದ್ದು, ತೀವ್ರತರವಾದ ಅರಣ್ಯ ಪ್ರದೇಶವನ್ನು ಹೊಂದಿದೆ. ಅರಣ್ಯ ನಾಶವು ಉಪಗ್ರಹ ಆಧಾರಿತವಾಗಿ ಗುರುತಿಸಿ ದಾಖಲಾಗಿರುತ್ತದೆ. ಯಡೇಹಳ್ಳಿ ಸ.ನಂ.66 ಕಿರು ಅರಣ್ಯ ಪ್ರದೇಶವಾಗಿದ್ದು, ಅರಣ್ಯ ಪ್ರದೇಶದಲ್ಲಿ ಮಂಜೂರಾದ ಹಕ್ಕು ಪತ್ರಗಳನ್ನು ಪ್ರಾದೇಶಿಕ ನ್ಯಾಯಾಲಯವು ವಜಾ ಮಾಡಿರುತ್ತದೆ. ಅರಣ್ಯ ಪ್ರದೇಶದಲ್ಲಿ ಮಂಜೂರಾತಿ ಮತ್ತು ಸಾಗುವಳಿ ನೀಡುವುದು ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಅನ್ವಯ ನಿಷಿದ್ಧವಾಗಿರುತ್ತದೆ. ಹಾಗೂ ಉಚ್ಛ ನ್ಯಾಯಾಲಯ ಮತ್ತು ಸರ್ವೋಚ್ಛ ನ್ಯಾಯಾಲಯಗಳು ಅರಣ್ಯ ಪ್ರದೇಶಗಳಲ್ಲಿ ಮಂಜೂರಾತಿ ವಿರುದ್ಧ ನೀಡಿದ ತೀರ್ಪುಗಳನ್ನು ಉಲ್ಲೇಖಿಸಿ ಸಾಗುವಳಿ ಮಾಡುವುದು ತಪ್ಪಾದ ಕ್ರಮವಾಗಿದೆ ಎಂದು ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರತಿಭಟನಾ ನಿರತರಿಗೆ ವಿವರಿಸಿದರು.


ಚಂದನಕೆರೆ ಮತ್ತು ಯಡೇಹಳ್ಳಿ ಪ್ರದೇಶವು ಎಂ.ಪಿ.ಎಂ. ನೆಡುತೋಪು ಮತ್ತು ಅರಣ್ಯ ಪ್ರದೇಶವಾಗಿದ್ದು, ಈ ಪ್ರದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪುಗಳು ಇರುವುದರಿಂದ ಮಂಜೂರಾತಿಗಳನ್ನು ಕಾನೂನುಗಳ ವ್ಯಾಪ್ತಿಯಲ್ಲಿ ಪರಿಶೀಲಿಸಲಾಗುವುದು. ಆದ್ದರಿಂದ ಪ್ರತಿಭಟನೆಯನ್ನು ಕೈಬಿಡುವಂತೆ ಜಿಲ್ಲಾಡಿಳಿತದವರು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಭದ್ರಾವತಿ ತಹಶೀಲ್ದಾರರು ಮತ್ತು ತಾಲೂಕಿನ ಕಂದಾಯ, ಅರಣ್ಯ, ಎಂ.ಪಿ.ಎಂ. ಮತ್ತು ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು