ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ: ಕಠಿಣ ಕ್ರಮಕ್ಕೆ ಸಿಎಂ ಆಗ್ರಹ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ: ಕಠಿಣ ಕ್ರಮಕ್ಕೆ ಸಿಎಂ ಆಗ್ರಹ

ಬೆಂಗಳೂರು ಜು 8: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಗರಂ ಆದ ಮುಖ್ಯಮಂತ್ರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ಆಗ್ರಹಿಸಿದರು.

DC-CEO ಗಳ ಸಭೆಯಲ್ಲಿ ಸಚಿವ ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಶರಣಪ್ರಕಾಶ್ ಪಾಟೀಲ್ ಮುಂತಾದವರು ಪರ್ಮಿಟ್ ಪಡೆಯದೆ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಗಮನ ಸೆಳೆದರು.

ಸಚಿವ ಸಂತೋಷ್ ಲಾಡ್ ಅವರು ಮಾತನಾಡುತ್ತಾ ಕ್ವಾರಿ ಗಣಿಗಾರಿಕೆಯಲ್ಲಿ 50 ಲಕ್ಷ ಟನ್ ಗೆ ಪರಿಸರ ತೀರುವಳಿ ಪಡೆದರೆ, 20 ಲಕ್ಷ ಟನ್ ಗೆ ಮಾತ್ರ ಪರ್ಮಿಟ್ ಪಡೆಯುತ್ತಾರೆ. ಹಾಗಿದ್ದರೆ ಹೆಚ್ಚಿನ ಮಟ್ಟದ ಪರಿಸರ ತೀರುವಳಿ ಪಡೆದದ್ದು ಏತಕ್ಕೆ? ರಾಜ್ಯದಲ್ಲಿ ಪರಿಸರ ತೀರುವಳಿ ಪಡೆದಿರುವುದಕ್ಕೂ, ಪರ್ಮಿಟ್ ಪಡೆದಿರುವುದಕ್ಕೂ ಅರ್ಧಕರ್ಧ ಕಡಿಮೆ ಇದೆ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು.

ಸಂತೋಷ್ ಲಾಡ್ ಅವರ ಮಾತಿಗೆ ಹಲವು ಸಚಿವರು ಧ್ವನಿಗೂಡಿಸಿದರು.

ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ ಸಿಎಂ ಇದನ್ನೆಲ್ಲಾ ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ಬಗ್ಗೆ ಅಗತ್ಯವಿದ್ದರೆ ಸರ್ಕಾರದಿಂದ ಹೊಸ ನೀತಿಯನ್ನೇ ರೂಪಿಸೋಣ ಎಂದರು.

ಇತರೆ ಹೈಲೈಟ್ಸ್…

ಡೀಮ್ಡ್‌ ಅರಣ್ಯ:
ಯಾವುದೇ ಜಮೀನನ್ನು ತಪ್ಪಾಗಿ ಡೀಮ್ಡ್‌ ಅರಣ್ಯ ಪಟ್ಟಿಗೆ ಸೇರಿಸಿದ್ದರೆ, ಅಂತದ್ದನ್ನು ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ತಿಂಗಳ ಒಳಗಾಗಿ ಜಂಟಿ ಸಮೀಕ್ಷೆ ನಡೆಸಿ. ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚಿಸಿದರು.

ಅಕ್ರಮ ಗಣಿಗಾರಿಕೆಗೆ ತಡೆಗೆ ಕಟ್ಟುನಿಟ್ಟಿನ ಕ್ರಮ
ಅಕ್ರಮ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಕುರಿತು ಹಲವಾರು ದೂರುಗಳು ಬರುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆ ಮಾಡುವ ಮರಳು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಗ್ರಾಮ ಪಂಚಾಯತ್‌ ಮೂಲಕ ಮರಳು ಪೂರೈಕೆ ಮಾಡಲು ಈಗಾಗಲೇ ಗುರುತಿಸಲಾಗಿರುವ ಮರಳು ಬ್ಲಾಕ್‌ಗಳ ಮೂಲಕ ಮರಳು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಒಟ್ಟು 372 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದ್ದು, 102 ಮರಳು ಬ್ಲಾಕ್‌ಗಳು ಕಾರ್ಯ ಪ್ರಾರಂಭಿಸಿವೆ. ಇನ್ನೂ 270 ಮರಳು ಬ್ಲಾಕ್‌ಗಳು ಕಾರ್ಯಾರಂಭ ಮಾಡಬೇಕು ಎಂದು ಹೇಳಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು