ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿಎಂ ಭೇಟಿ ಮಾಡಿದ ಭಾರತದ ಬ್ರಿಟಿಷ್ ಹೈ-ಕಮಿಷನರ್ ಅಲೆಕ್ಸ್ ಎಲ್ಲಿಸ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸಿಎಂ ಭೇಟಿ ಮಾಡಿದ ಭಾರತದ ಬ್ರಿಟಿಷ್ ಹೈ-ಕಮಿಷನರ್ ಅಲೆಕ್ಸ್ ಎಲ್ಲಿಸ್

ಬೆಂಗಳೂರು: ಯು.ಕೆ. ಹೂಡಿಕೆದಾರರು ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆ ಮಾಡುವಂತೆ ಆಹ್ವಾನ ನೀಡಿದ್ದರಿಂದ, ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡಿರುವ ಚಂದ್ರು ಅಯ್ಯರ್‌ರವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುನ್ನು ಭೇಟಿಯಾಗಿದ್ದು, ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿಯವರು, ಕರ್ನಾಟಕ ರಾಜ್ಯವು ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೂ ಹೊಸ ನೀತಿಯನ್ನು ಜಾರಿಗೆ ತರಲಾಗಿದೆ. ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಅವರು ಯುಕೆ ಹಾಗೂ ಕರ್ನಾಟಕ ನಡುವಿನ ಬಾಂಧವ್ಯ ವಿಶೇಷವಾದುದು. ಕರ್ನಾಟಕದಲ್ಲಿರುವ ಯು.ಕೆ. ಕಂಪೆನಿಗಳ ಸಂಖ್ಯೆ ಗಣನೀಯವಾದುದು. ಒಂದು ವರದಿಯ ಪ್ರಕಾರ ಭಾರತದಲ್ಲಿರುವ 618 ಬ್ರಿಟಿಷ್ ಮಾಲೀಕತ್ವದ ಕಂಪೆನಿಗಳಲ್ಲಿ ಶೇ. 14 ರಷ್ಟು ಕರ್ನಾಟಕದಲ್ಲಿದ್ದು, ದಕ್ಷಿಣ ಭಾರತದಲ್ಲಿಯೇ ಇದು ಅತಿ ಹೆಚ್ಚು ಎಂದು ಗಮನ ಸೆಳೆದರು. ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಅಯನ ರಿನ್ಯೂವೇಬಲ್ ಪವರ್ ಲಿ. ಯುಕೆಯ ಅತಿ ವೇಗವಾಗಿ ಬೆಳೆಯುತ್ತಿರುವ ಕಂಪೆನಿಯಾಗಿದೆ ಎಂದು ಅವರು ವಿವರಿಸಿದರು.

ಈಸ್ ಆಫ್ ಡೂಯಿಂಗ್ ಬಿಸಿನೆಸ್, ವಿದ್ಯುತ್ ಚಾಲಿತ ವಾಹನ ಬಳಕೆಯ ಕುರಿತ ಜಾಗೃತಿ, ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಯುಕೆ ಹಾಗೂ ಕರ್ನಾಟಕದ ಸಹಯೋಗದ ಕುರಿತು ಚರ್ಚಿಸಲಾಯಿತು. ಯುಕೆಯಲ್ಲಿನ ಕನ್ನಡಿಗರ ಕೊಡುಗೆ, ಹಾಗೂ ಅವರು ಭಾರತ ಹಾಗೂ ಯು.ಕೆ. ನಡುವೆ ಬಾಂಧವ್ಯ ಬಲಪಡಿಸುತ್ತಿರುವ ಕುರಿತು ಉಭಯತ್ರರೂ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಬ್ರಿಟಿಷ್ ಹೈ-ಕಮಿಷನ್ ಸಲಹೆಗಾರ ಮಂಜುನಾಥ್ ಕೆ.ಎಸ್. ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು