ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ ಇರತ್ತೆ: ಕೆ.ವಿ.ಪ್ರಭಾಕರ್ ಭರವಸೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ ಇರತ್ತೆ: ಕೆ.ವಿ.ಪ್ರಭಾಕರ್ ಭರವಸೆ

ಬೀದರ್ ಫೆ 23: ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ‌ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪಿ ಕರೆ‌ ನೀಡಿದರು.‌

ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಮ್ಮೇಳನದ ವೆಬ್ ಸೈಟ್” ಉದ್ಘಾಟಿಸಿ ಮಾತನಾಡಿದರು.

ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ
ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಮ್ಮೇಳನಗಳು ಒಂದು ಅರ್ಥದಲ್ಲಿ “ಪಿಟ್ ಸ್ಟಾಪ್ಸ್” ಎಂದು ಹೇಳಬಹುದು.
ರೇಸಿಂಗ್ ಕಾರುಗಳು ತಮ್ಮ ಓಟದ ನಡುವೆ ಟೈರ್ ಗಳನ್ನು ಬದಲಾಯಿಸಲು, ಇಂಧನ ತುಂಬಿಸಿಕೊಳ್ಳಲು ಮಾರ್ಗಮಧ್ಯದಲ್ಲಿ ಇರುವ ನಿಲ್ದಾಣಗಳನ್ನು ಪಿಟ್ ಸ್ಟಾಪ್ಸ್ ಎಂದು ಕರೆಯುತ್ತಾರೆ.
ವೈರಲ್ ಸುದ್ದಿಗಳ ವೇಗದಲ್ಲಿ ಓಡುತ್ತಿರುವ ಉದ್ಯಮಕ್ಕೆ ಈಗ ಇಂಥಾ ಪಿಟ್ ಸ್ಟಾಪ್ಸ್ ಗಳ ಅಗತ್ಯ ತುಂಬ ಇದೆ ಎಂದು ವಿವರಿಸಿದರು.

ಈ ಸಮ್ಮೇಳನ ವೃತ್ತಿಪರರಿಗೆ ತಮ್ಮ ನೋಟಗಳನ್ನು, ಆಯ್ಕೆಗಳನ್ನು ಮತ್ತು ವೃತ್ತಿಪರತೆಯನ್ನು ತೀಕ್ಷ್ಣಗೊಳಿಸಿಕೊಳ್ಳಲು ಮತ್ತು ಅವರ ಆಂತರಿಕ ದಿಕ್ಸೂಚಿಯನ್ನು ಮರು ಚಿಂತನಗೆ ಒಳಪಡಿಸಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ ಎನ್ನುವ ಭರವಸೆ ಇದೆ ಎಂದು ಆಶಿಸಿದರು.‌

ಕೃತಕ ಬುದ್ದಿಮತ್ತೆ ತಂತ್ರಜ್ಞಾನ-ಚಾಲಿತ ಯುಗದಲ್ಲಿ ನಮ್ಮ ಕೌಶಲ್ಯಗಳನ್ನು ನವೀಕರಣಗೊಳಿಸಿಕೊಳ್ಳುವುದರ ಜೊತೆಗೆ‌
ಪತ್ರಿಕೋದ್ಯಮದ ಆದ್ಯತೆಗಳನ್ನೂ ಮರು ಪರಿಶೀಲನೆಗೆ ಚರ್ಚೆಗೆ ಒಳಪಡಿಸಬೇಕಿದೆ.
ಇವತ್ತಿನ ತಾಂತ್ರಿಕ ವೇಗ ಮತ್ತು ಹೊಸ ಹೊಸ ತಂತ್ರಜ್ಞಾನದ ವೇಗದಲ್ಲಿ ಬಹುತೇಕ ಪ್ರತಿ ಐದು ವರ್ಷಗಳಿಗೆ ಒಮ್ಮೆ ನಾವು ಕಲ್ಪಿಸಕೊಳ್ಳಲಾಗದ ತಂತ್ರಜ್ಞಾನ‌ ಹೊರಗೆ ಬರುತ್ತಿವೆ. ಹೊಸದಾಗಿ ಬಂದಿರುವ AI ತಂತ್ರಜ್ಞಾನದ ಸಾಧ್ಯತೆಗಳನ್ನು ಮತ್ತು ಅಪಾಯಗಳನ್ನು ನಾವು ಸರಿಯಾಗಿ ಗ್ರಹಿಸವ ಮೊದಲೇ ಹೊಸ ತಂತ್ರಜ್ಞಾನ‌ ಬಂದಿರುತ್ತದೆ. ಈಗಾಗಲೇ‌ AI ಕೂಡ ಹಳತಾಗಿ “Super AI” ಅಂತ ಬರುತ್ತಿದೆ ಎಂದು ಎಚ್ಚರಿಸಿದರು.‌

ಇವೆಲ್ಲವನ್ನೂ ಅರಿಯುವ ಮತ್ತು ಅಪಾಯಗಳನ್ನು ತಡೆಯುವ ಕಾರ್ಯಾಗಾರವಾಗಿ ಈ ಬಾರಿಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸುತ್ತೇನೆ ಎಂದರು.

ಡೀಪ್‌ಫೇಕ್‌ಗಳನ್ನು ಹೇಗೆ ಗುರುತಿಸುವುದು ಮತ್ತು ಸಾಮಾಜಿಕ ಮಾಧ್ಯಮ ಲೀಡ್‌ಗಳನ್ನು ಪರಿಶೀಲಿಸುವುದು ಹೇಗೆ ಎಂಬುದನ್ನು News room ಗಳು ಕಲಿಸಬೇಕಾಗಿದೆ.
ಮಾಧ್ಯಮ ಲೋಕದ ಕಾರ್ಪುರೇಟೀಕರಣದ ತಂದೊಡ್ಡಿರುವ ನೈತಿಕ ಸವಾಲುಗಳ ನಡುವೆಯೇ ಈಗ AI ಮತ್ತು ಆಧುನಿಕ ತಂತ್ರಜ್ಞಾನವೂ ಹೊಸ ಹೊಸ ನೈತಿಕ ಸವಾಲುಗಳನ್ನು ಮುಂದಿಟ್ಟಿದೆ.
ಹೀಗಾಗಿ, ನೈತಿಕ ಮತ್ತು ತಾಂತ್ರಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಗೆ ಸಮ್ಮೇಳನ ವೇದಿಕೆಯಾಗಲಿ ಎಂದು ನಾನು ಬಯಸುತ್ತೇನೆ ಎಂದರು.

ಈ ಬಜೆಟ್ ನಲ್ಲೂ ಬಂಪರ್

ಪತ್ರಕರ್ತ ಸಮುದಾಯಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನೆರಳಾಗಿ ನಿಂತಿದ್ದಾರೆ. ಈ ಬಾರಿಯ ಬಜೆಟ್ ನಲ್ಲೂ ಶ್ರಮಿಕ ಪತ್ರಕರ್ತ ಸಮುದಾಯಕ್ಕೆ ಉತ್ತಮ‌ಅನುಕೂಲಗಳು ಆಗುವ ಭರವಸೆ ಇದೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಈಶ್ವರ್ ಖಂಡ್ರೆ, ರಹೀಮ್ ಖಾನ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ್ ಗೌಡರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ ಸೇರಿ ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು