ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚಿಕ್ಕಪೇಟೆಗೆ ಬಿಡುಗಡೆಯಾದ ಅನುದಾನದ ಲೆಕ್ಕ ಕೇಳಿ AAPಯಿಂದ ʼಪರಿಶೋಧನಾ ಯಾತ್ರೆʼ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಚಿಕ್ಕಪೇಟೆಗೆ ಬಿಡುಗಡೆಯಾದ ಅನುದಾನದ ಲೆಕ್ಕ ಕೇಳಿ AAPಯಿಂದ ʼಪರಿಶೋಧನಾ ಯಾತ್ರೆʼ

ಬೆಂಗಳೂರು : ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ ಹಾಗೂ ಖರ್ಚಾಗಿರುವ ಮೊತ್ತದ ಕುರಿತು ಶಾಸಕರು ಲೆಕ್ಕ ನೀಡಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ಇಂದು ಬಸವನಗುಡಿಯ ರಾಮಕೃಷ್ಣ ಆಶ್ರಮ ಸಮೀಪದ ವಿವೇಕಾನಂದ ಪ್ರತಿಮೆ ಮುಂಭಾಗದಿಂದ ʼʼಪರಿಶೋಧನಾ ಯಾತ್ರೆ ಹಮ್ಮಿಕೊಂಡಿದೆ.

ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಅಧಿಕಾರಾವಧಿಯಲ್ಲಿ ಚಿಕ್ಕಪೇಟೆ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಕಂಡುಬಂದಿದ್ದು, ಈ ವಿರುದ್ದ ಆಮ್‌ ಆದ್ಮಿ ಪಾರ್ಟಿಯು ʼʼಪರಿಶೋಧನಾ ಯಾತ್ರೆ ಹಮ್ಮಿಕೊಂಡಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ ಹಾಗೂ ಖರ್ಚಾಗಿರುವ ಮೊತ್ತದ ಕುರಿತು ಶಾಸಕರು ಲೆಕ್ಕ ನೀಡಬೇಕೆಂದು ಆಗ್ರಹಿಸಿ ಇಂದು ಬಸವನಗುಡಿಯ ರಾಮಕೃಷ್ಣ ಆಶ್ರಮ ಸಮೀಪದ ವಿವೇಕಾನಂದ ಪ್ರತಿಮೆ ಮುಂಭಾಗದಿಂದ ಯಾತ್ರೆ ನಡೆಸುತ್ತಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡ ಪ್ರಕಾಶ್‌ ನಾಗರಾಜ್‌, “ಸರ್ಕಾರವು ಕ್ಷೇತ್ರಕ್ಕೆ ಬಿಡುಗಡೆ ಮಾಡಿರುವ ಅನುದಾನವೆಷ್ಟು ಹಾಗೂ ಅದನ್ನು ಶಾಸಕರು ಹೇಗೆ ಖರ್ಚು ಮಾಡಿದ್ದಾರೆ ಎಂದು ತಿಳಿಯುವ ಹಕ್ಕು ಜನರಿಗೆ ಇದೆ. ಶಾಸಕರಿಂದ ಈ ಮಾಹಿತಿಯನ್ನು ಪಡೆದು ಜನರಿಗೆ ತಿಳಿಸುವ ಸಲುವಾಗಿ ಆಮ್‌ ಆದ್ಮಿ ಪಾರ್ಟಿಯು ಲೆಕ್ಕ ಕೇಳಿ ಪರಿಶೋಧನಾ ಯಾತ್ರೆಯನ್ನು ಕ್ಷೇತ್ರದಾದ್ಯಂತ ನಡೆಸಲಿದೆ ” ಎಂದು ತಿಳಿಸಿದರು.

ʼಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಅಧಿಕಾರಾವಧಿಯಲ್ಲಿ ಚಿಕ್ಕಪೇಟೆ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ. ಸ್ವಪಕ್ಷದ ಶಾಸಕರೆಂಬ ಕಾರಣಕ್ಕೆ ರಾಜ್ಯ ಸರ್ಕಾರವು ನೂರಾರು ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರೂ ಇಲ್ಲಿನ ರಸ್ತೆಗಳು, ಮೂಲಸೌಕರ್ಯಗಳು ಕಳಪೆಯಾಗಿವೆ. ಇಲ್ಲಿನ ಯಾವ ಸಮಸ್ಯೆಯನ್ನೂ ಶಾಸಕರು ಬಗೆಹರಿಸಿಲ್ಲ. ಹಾಗಾದರೆ ಆ ಹಣವು ಎಲ್ಲಿಗೆ ಹೋಯಿತು ಎಂಬ ಪ್ರಶ್ನೆಯು ಜನರನ್ನು ಕಾಡುತ್ತಿದೆ. ಮತ ನೀಡಿ ಗೆಲ್ಲಿಸಿದ ಕ್ಷೇತ್ರದ ಜನತೆಗೆ ಈ ಸಂಬಂಧ ಮಾಹಿತಿ ನೀಡುವ ಜವಾಬ್ದಾರಿಯಿಂದ ಶಾಸಕರು ನುಣುಚಿಕೊಳ್ಳಬಾರದುʼಎಂದು ಪ್ರಕಾಶ್‌ ನಾಗರಾಜ್‌ ಹೇಳಿದರು.

ʼಚಿಕ್ಕಪೇಟೆ ಕ್ಷೇತ್ರದ ಹಲವು ಸರ್ಕಾರಿ ಶಾಲೆಗಳು ಶೋಚನೀಯ ಸ್ಥಿತಿಯಲ್ಲಿವೆ. ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಸೇವೆಗಳು ದೊರೆಯುತ್ತಿಲ್ಲ. ಕ್ಷೇತ್ರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಟ್ಟಣೆ ಸಮಸ್ಯೆಯಿಂದ ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಶಾಸಕರು ಇವ್ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದೇ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ವಂಚಿಸುತ್ತಿದ್ದಾರೆʼ ಎಂದು ಪ್ರಕಾಶ್‌ ನಾಗರಾಜ್‌ ಹೇಳಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು