ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಕ್ಕಳು ಮೊಬೈಲ್ ಪೀಡಿತರಗುತ್ತಿದ್ದಾರೆ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ – ಡಾ. ಜೋಗತಿ ಮಂಜಮ್ಮ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಮಕ್ಕಳು ಮೊಬೈಲ್ ಪೀಡಿತರಗುತ್ತಿದ್ದಾರೆ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ – ಡಾ. ಜೋಗತಿ ಮಂಜಮ್ಮ

ಹಾಸನ: ಪ್ರಸ್ತೂತದಲ್ಲಿ ಮಕ್ಕಳು ಮೊಬೈಲ್ ಪೀಡಿತರಗುತ್ತಿದ್ದು, ಇದರಿಂದ ಕಣ್ಣಿನ ದೃಷ್ಠಿ ಸಮಸ್ಯೆ ಜೊತೆಗೆ ತನ್ನ ಭವಿಷ್ಯವನ್ನೇ ಹಾಳು ಮಾಡುವ ಪರಿಸ್ಥಿತಿಗೆ ಬರುತ್ತದೆ. ಅದನ್ನು ತಪ್ಪಿಸಿ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕೆಂದು ಪದ್ಮಶ್ರೀ ವಿಜೇತರಾದ ಡಾ. ಜೋಗತಿ ಮಂಜಮ್ಮನವರು ಸಲಹೆ ನೀಡಿದರು.


ನಗರದ ಸಾಲಗಾಮೆ ರಸ್ತೆ ಬಳಿ ಇರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸ್ಕಾಲರ್ಸ್ ಶಾಲೆಯಲ್ಲಿ 13ನೇ ವರ್ಷದ ಸ್ಕಾಲರ್ಸ್ ಸಂಭ್ರಮ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹಾಲಿನಿಂದ ಬೆಣ್ಣೆಯ ತನಕ ಬೆಂಕಿ ಎಂಬ ಸಂಸ್ಕಾರ ಕೊಟ್ಟಾಗ ಮಾತ್ರ ಅದು ತುಪ್ಪವಾಗಲು ಸಾಧ್ಯ. ಹಾಗೆಯೇ ವಿದ್ಯೆ ಎಂಬ ಸಂಸ್ಕಾರ ಕೊಟ್ಟಾಗ ಮಾತ್ರ ಮಕ್ಕಳು ಸುಸಂಸ್ಕತರಾಗಲು ಸಾಧ್ಯ. ಶಾಲೆಯ ಶಿಕ್ಷಕರ ಜೊತೆಗೆ ಮನೆಯಲ್ಲೂ ಕೂಡ ಗುರು ಹಿರಿಯರನ್ನ ಗೌರವಿಸುವ ಉತ್ತಮ ಸಂಸ್ಕಾರವನ್ನು ನೀಡಬೇಕು. ಮಕ್ಕಳು ಮೊಬೈಲ್ ಪೀಡಿತರಾಗುತ್ತಿದ್ದಾರೆ ಅದನ್ನು ತಪ್ಪಿಸಿ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕೆಂಬ ಆಶಯವನ್ನು ವ್ಯಕ್ತಪಡಿಸಿದರು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸವ ವೇದಿಕೆಯೇ ಶಾಲಾ ವಾರ್ಷಿಕೋತ್ಸವ ಎಂದರು.


ಈ ಕಾರ್ಯಕ್ರಮದಲ್ಲಿ ಶಾಸಕರಾದ ಹೆಚ್.ಪಿ. ಸ್ವರೂಪ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಹೆಚ್.ಎಲ್. ಮಲ್ಲೇಶಗೌಡ, ನಗರಸಭಾ ಅಧ್ಯಕ್ಷರಾದ ಎಂ. ಚಂದ್ರೇಗೌಡ, ಶಾಲೆಯ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ನಾಗರಾಜ್, ಶಾಲೆಯ ಆಡಳಿತಾಧಿಕಾರಿಗಳಾದ ಡಾ. ಹೆಚ್ .ಎನ್ ಚಂದ್ರಶೇಖರ್, ಕಾರ್ಯದರ್ಶಿಗಳಾದ ಶ್ರೀಮತಿ ಮಮತಾ ಚಂದ್ರಶೇಖರ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸ್ಕಾಲರ್ಸ್ ಸಂಭ್ರಮಕ್ಕೆ ಮೆರುಗನ್ನು ತಂದು ಕೊಟ್ಟರು.

ವಿಷಯಗಳು: #karnataka #peepal #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು