ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಪ್ರತಿಭಾ ಪುರಸ್ಕಾರ ಅಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ: ಪ್ರೋತ್ಸಾಹ ಸಿಕ್ಕಾಗ ಮಕ್ಕಳು ಅರಳುತ್ತಾರೆ: ಕೆ.ವಿ.ಪ್ರಭಾಕರ್

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಪ್ರತಿಭಾ ಪುರಸ್ಕಾರ ಅಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ: ಪ್ರೋತ್ಸಾಹ ಸಿಕ್ಕಾಗ ಮಕ್ಕಳು ಅರಳುತ್ತಾರೆ: ಕೆ.ವಿ.ಪ್ರಭಾಕರ್

ಪ್ರತಿಭಾ ಪುರಸ್ಕಾರ ಎಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ. ಹೀಗೆ ಅರಳಿದ ಮಕ್ಕಳು ಸಂಸ್ಕಾರವಂತರಾಗಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರು ಮತ್ತು ಬಳಕೆದಾರರ ಸಹಕಾರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬ ಮಗುವೂ ಹುಟ್ಟುತ್ತಲೇ ಪ್ರತಿಭೆ ತುಂಬಿಕೊಂಡೇ ಜನಿಸುತ್ತದೆ. ಅವಕಾಶಗಳು, ಪ್ರೋತ್ಸಾಹ ಸಿಕ್ಕಾಗ ಪ್ರತಿಭೆ ಹೊರಗೆ ಬರುತ್ತದೆ. ಇವತ್ತು ಇಲ್ಲಿ ಪುರಸ್ಕಾರಗೊಂಡ ಮಕ್ಕಳಿಗೆ ಅವಕಾಶ ಸಿಕ್ಕಿದೆ. ಸಮಾಜ ಈ ಅವಕಾಶವನ್ನು ಒದಗಿಸಿರುವುದರ ಜೊತೆಗೆ ಪೋಷಕರು ತಮ್ಮ ವೈಯುಕ್ತಿಕ ಆಸೆ, ಆಕಾಂಕ್ಷೆಗಳನ್ನು ತ್ಯಾಗ ಮಾಡಿ ಮಕ್ಕಳಿಗೆ ಅಗತ್ಯ ಅವಕಾಶಕ್ಕೆ ನೀರು ಗೊಬ್ಬರ ಒದಗಿಸಿದ್ದಾರೆ. ಹೀಗಾಗಿ ನಿಮ್ಮೊಳಗಿನ ಪ್ರತಿಭೆಗೆ ಪುರಸ್ಕಾರ ಸಿಕ್ಕಿದೆ ಎಂದರು.

ಇಂದು ಇಲ್ಲಿ ಪುರಸ್ಕೃತಗೊಂಡ ಮಕ್ಕಳಲ್ಲಿ ನನ್ನದೊಂದು ನಿವೇದನೆ ಇದೆ. ಏನೆಂದರೆ, ನಿಮ್ಮ ಹಾಗೆಯೇ ಪ್ರತಿಭೆ ಇದ್ದೂ ಅವಕಾಶವಂಚಿತ ಮಕ್ಕಳು ಹೊರಗೆ ಸಾವಿರಾರು ಸಂಖ್ಯೆಯಲ್ಲಿದಗದಾರೆ. ಹೀಗಾಗಿ ನೀವುಗಳು ದೊಡ್ಡವರಾಗಿ ಬೇರೆ ಬೇರೆ ಒಳ್ಳೊಳ್ಳೆ ಹುದ್ದೆಗಳಿಗೆ ಹೋದಾಗ ಅವಕಾಶ ವಂಚಿತ ಮಕ್ಕಳ ರಾಯಭಾರಿಗಳಾಗಿ ಕೆಲಸ ಮಾಡಿ ಎಂದು ಕರೆ ನೀಡಿದರು.

ರಾಗಿಕಾಳಿಗೆ ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುವ ಶಕ್ತಿ ಇರಬಹುದು. ಆದರೆ, ರಾಗಿ ಮೊಳಕೆಯೊಡೆಯಲು ಹದವಾದ ಭೂಮಿ ಸಿಗಬೇಕು. ನೀರು, ಗೊಬ್ಬರ ಬೇಕು. ಪ್ರತಿಭೆ ಕೂಡ ಹಾಗೆಯೇ. ಹದವಾದ ಅವಕಾಶ ಸಿಕ್ಕಾಗ ಪ್ರತಿಭೆ ಅನಾವರಣಗೊಳ್ಳುತ್ತದೆ. ನೀವೂ ಮತ್ತೊಬ್ಬರ ಬದುಕು ಕಟ್ಟಿಕೊಳ್ಳಲು ಹದವಾದ ಭೂಮಿಯಂತಾಗಬೇಕು. ಅಗ ಸಮಾಜ ನಿಮಗೆ ಕೊಟ್ಟಿದ್ದನ್ನು ನೀವು ಸಮಾಜಕ್ಕೇ ವಾಪಾಸ್ ಕೊಟ್ಟಂತಾಗುತ್ತದೆ, ಸಮಾಜದ ಋಣ ತೀರಿಸಿದಂತಾಗುತ್ತದೆ ಎಂದು ವಿವರಿಸಿದರು.

ನಿಮ್ಮ ಹಾಗೆಯೇ ಪ್ರತಿಭೆ ಇರುವ ಹಾಗೂ ಅವಕಾಶ ಇಲ್ಲದ ಮಕ್ಕಳು ಸಮಾಜದಲ್ಲಿ ಲಕ್ಷಾಂತರ ಇದ್ದಾರೆ. ಶಾಲೆಗೆ ಹೋಗಲು ಸಾಧ್ಯವಿಲ್ಲದೆ ಬೆಳಗ್ಗೆ ಹಾಲು ಮಾರುತ್ತಾ, ಹೂ-ತರಕಾರಿ-ಹಣ್ಣು ಮಾರುತ್ತಾ, ಗ್ಯಾರೇಜ್ ಗಳಲ್ಲಿ, ಕಾರ್ಖಾನೆಗಳಲ್ಲಿ ದಿನಗೂಲಿಗಳಾಗಿ ದುಡಿಯುತ್ತಿರುವ ಮಕ್ಕಳು ಇದ್ದಾರೆ. ಅವರ ಪಾಲಿನ ಅವಕಾಶ ಅವರಿಗೂ ಸಿಗಬೇಕು. ಅವರ ಪರವಾಗಿಯೂ ನೀವು ಅವಕಾಶ ಸೃಷ್ಟಿಸುವವರಾಗಿ ಎಂದು ಕರೆ ನೀಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು