ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದ್ಯಾರ್ಥಿಗಳು ಮೊಬೈಲ್ ಫೋನ್ ಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು: ಕೆ.ವಿ.ಪ್ರಭಾಕರ್

P

Peepal Media • ರಾಜ್ಯ

• 1 ನಿಮಿಷದ ಓದು

ವಿದ್ಯಾರ್ಥಿಗಳು ಮೊಬೈಲ್ ಫೋನ್ ಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು: ಕೆ.ವಿ.ಪ್ರಭಾಕರ್

ಬೆಂಗಳೂರು ಜು 12: ಮೊಬೈಲ್ ಫೋನ್ ಒಂದು ಉಪಯುಕ್ತ ಸಾಧನ. ಆದರೆ ಒಳಿತು ಕೆಡುಕು ಆಯ್ಕೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆದ್ದರಿಂದ, ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮೊಬೈಲ್ ಫೋನ್ ಬಳಸುವುದನ್ನು ತಿಳಿದಿರಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ತಿಳಿಸಿದರು.

ಶುಕ್ರವಾರ ನಗರದ ಬಾಲ್ಡ್‌ವಿನ್‌ ಬಾಲಕಿಯರ ಶಾಲೆಯಲ್ಲಿ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಬಹುಮಾನ ಪ್ರಮಾಣ ಪತ್ರ ನೀಡುವ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

“ಶಾಲಾ ಶಿಕ್ಷಣವು ಹೈಟೆಕ್ ಆಗಿ ಮಾರ್ಪಟ್ಟಿದೆ, ಮತ್ತು ಅನೇಕರು ಮೊಬೈಲ್ ತಂತ್ರಜ್ಞಾನಕ್ಕೆ ವ್ಯಸನಿಯಾಗಿದ್ದಾರೆ. ನಾನು ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕೆಂದು ಎಂದು ಹೇಳುವುದಿಲ್ಲ. ಆದರೆ ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಾರದು. ಮೊಬೈಲ್‌ನ ದುಷ್ಪರಿಣಾಮಗಳ ಬಗ್ಗೆ ನಾವು ಪ್ರತಿದಿನ ಓದುತ್ತೇವೆ. ಆದ್ದರಿಂದ ಮೊಬೈಲ್ ಅನ್ನು ಅಗತ್ಯ ಕೆಲಸಕ್ಕೆ ಮಾತ್ರ ಬಳಸಿ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಪೋಷಕರ ಕನಸುಗಳನ್ನು ಈಡೇರಿಸುವುದು ಕರ್ತವ್ಯವಾಗಿದೆ. ನೀವು ಯಾವ ವೃತ್ತಿಯನ್ನು ಆರಿಸಿಕೊಂಡರೂ, ಮೊದಲು ಉತ್ತಮ ಮನುಷ್ಯನಾಗಲು ಶ್ರಮಿಸಿ ಮತ್ತು ಸಮಾಜಕ್ಕೆ ಧನಾತ್ಮಕವಾಗಿ ಕೊಡುಗೆ ನೀಡಿ ಎಂದರು.

ತಮ್ಮ ವೈಯಕ್ತಿಕ ಬದುಕಿನ ಅನುಭವಗಳನ್ನು ಹಂಚಿಕೊಂಡ ಅವರು, ”ನನ್ನ ತಂದೆ ನಾನು ಐಟಿಐ ಮಾಡಬೇಕೆಂದು ಬಯಸಿದ್ರು, ಆದರೆ ನನಗೆ ಬರವಣಿಗೆಯ ಉತ್ಸಾಹವಿತ್ತು, ಆದ್ದರಿಂದ ನಾನು ಪತ್ರಿಕೋದ್ಯಮವನ್ನು ಆರಿಸಿದೆ. ಎಪಿಜೆ ಅಬ್ದುಲ್ ಕಲಾಂ ಅವರಂತೆ ನಾನು ಮನೆ ಮನೆಗಳಿಗೆ ಪತ್ರಿಕೆಗಳನ್ನು ಹಂಚಿದ್ದೇನೆ. ಮಾಧ್ಯಮ ಸಲಹೆಗಾರನಾಗಿ ಸೇವೆ ಸಲ್ಲಿಸುತ್ತಿರುವ ನನ್ನ ಯಶಸ್ಸಿನ ಪಯಣವು ಹಂತಹಂತವಾಗಿ ಗುರಿ ಮುಟ್ಟಿರುವುದು. ಈ ಸಮಾಜಕ್ಕೆ ಧನಾತ್ಮಕವಾಗಿ ಕೊಡುಗೆ ನೀಡುವುದು ನನ್ನ ಆಶಯ ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಆಶಾ ಮಾರ್ಗರೇಟ್ ದಾಸ್, ಉಪ-ಪ್ರಾಂಶುಪಾಲೆ ಶ್ರೀಮತಿ ಸುಜಾತಾ ಕ್ಯಾಥರೀನ್ ಮತ್ತು HR ಮುಖ್ಯಸ್ಥೆ ಶ್ರೀಮತಿ ಅನಿತಾ ಐಸಾಕ್, ಎಂ. ಜೋಶುವಾ ಸ್ಯಾಮ್ಯುಯೆಲ್ (ಕಾರ್ಯದರ್ಶಿ, BMES), ವಿಶೇಷ ಅಥಿತಿಗಳಾಗಿ ದಿವ್ಯಾ ರಂಗೇನಹಳ್ಳಿ ಸಂಸ್ಥಾಪಕರು, ಮೀಡಿಯಾ ಕನೆಕ್ಟ್ , ಸಚಿವ ಜಮೀರ್ ಅಹಮದ್ ಖಾನ್ ಅವರ ಮಾಧ್ಯಮ ಸಂಯೋಜಕ ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version