ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿವಿಲ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ – ಉತ್ತರ ಕರ್ನಾಟಕ ಭಾಗದಲ್ಲಿ ಸಂಜೆ ಎಕ್ಸಾಂ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಸಿವಿಲ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ – ಉತ್ತರ ಕರ್ನಾಟಕ ಭಾಗದಲ್ಲಿ ಸಂಜೆ ಎಕ್ಸಾಂ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ಬೃಹತ್ ನೇಮಕಾತಿ ಪ್ರಕ್ರಿಯೆಯ ಅಂಗವಾಗಿ, 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (police constable) ಹುದ್ದೆಗಳ ಲಿಖಿತ ಪರೀಕ್ಷೆ ಆಗಸ್ಟ್ 2ರಂದು ನಡೆಯಲಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ಸಚಿವರು, ನೇಮಕಾತಿಯಲ್ಲಿ ಉಳಿಕೆ ಮೂಲ ವೃಂದದ 3,395 ಹಾಗೂ ಕಲ್ಯಾಣ ಕರ್ನಾಟಕ ವೃಂದದ 596 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರೀಕ್ಷೆಯನ್ನು ನಡೆಸುತ್ತಿದ್ದು, ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10.00ರಿಂದ 11.30ರವರೆಗೆ ರಾಜ್ಯದಾದ್ಯಂತ 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯ ಸಮಯವನ್ನು ಮಧ್ಯಾಹ್ನ 2.30ರ ಬದಲು ಸಂಜೆ 4.00ರಿಂದ 5.30ರವರೆಗೆ ನಿಗದಿಪಡಿಸಲಾಗಿದ್ದು, ಇದಕ್ಕಾಗಿ 186 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭ ಹಾರೈಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ನಿಮ್ಮ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸಿದ್ಧತೆಗೆ ತಕ್ಕ ಯಶಸ್ಸು ದೊರೆಯಲಿ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿ, ಆತ್ಮಸ್ಥೈರ್ಯದಿಂದ ಪರೀಕ್ಷೆಯನ್ನು ಎದುರಿಸಿ” ಎಂದು ಕರೆ ನೀಡಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ವಿಶ್ವಾಸಾರ್ಹವಾಗಿ ನಡೆಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ವಂಚನೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವರು, ಅಕ್ರಮ ಎಸಗಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಪರೀಕ್ಷೆಯಲ್ಲಿ ಅಕ್ರಮದಲ್ಲಿ ಭಾಗಿಯಾಗುವ ಅಭ್ಯರ್ಥಿಗಳಿಗೆ ಭವಿಷ್ಯದ ಯಾವುದೇ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಶಾಶ್ವತ ನಿಷೇಧ ವಿಧಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಪ್ರಾಮಾಣಿಕವಾಗಿ ಸಿದ್ಧತೆ ನಡೆಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ನ್ಯಾಯ ಒದಗಿಸುವುದು ಸರ್ಕಾರದ ಬದ್ಧತೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಹಾರ್ದಿಕ ಶುಭಾಶಯಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು