ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕಸ ವಿಂಗಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ದಾಳಿ – ಬಂಧನ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕಸ ವಿಂಗಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ದಾಳಿ – ಬಂಧನ

ದಾವಣಗೆರೆ : ಸಾಮಾನ್ಯವಾಗಿ ಹಸಿ ಕಸ (Wet waste), ಒಣ ಕಸ (Dry waste) ವಿಂಗಡಿಸಿ ಎಂದು ಹೇಳೋದು ಸಾಮಾನ್ಯ. ಆದರೆ ಕಸ ವಿಂಗಡಿಸಿ ಕೊಡುವಂತೆ ಹೇಳಿದ್ದಕ್ಕೆ ಪೌರಕಾರ್ಮಿಕನ (Civil servent) ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆಯೊಂದು ದಾವಣಗೆರೆ (Davangere) ಜಿಲ್ಲೆಯ ಮೆಹಬೂಬ್ ನಗರದಲ್ಲಿ ನಡೆದಿದೆ.

ದಾವಣಗೆರೆಯಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದ ಅಜ್ಜು ಮತ್ತು ನೂರ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಹಸಿ ಕಸ, ಒಣ ಕಸ ವಿಂಗಡಿಸಿ ಹಾಗೂ ಮಗುವಿನ ಡೈಪರ್ ಕವರ್​ಗೆ ಹಾಕಿಕೊಡಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿ ಆರೋಪಿಗಳು ಅಟ್ಟಹಾಸ ಮೆರೆದಿದ್ರು.ಪೌರ ಕಾರ್ಮಿಕರು ಬೆಳಗ್ಗೆ ಕಸ ಸಂಗ್ರಹಿಸಲು ವಾಹನದೊಂದಿಗೆ ಮೆಹಬೂಬ್ ನಗರಕ್ಕೆ ಹೋಗಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ಹಸಿ, ಕಸ ಹಾಗೂ ಒಣ ಕಸವನ್ನು ಜತೆಗೇ ತಂದಿದ್ದಾನೆ. ಇದೇ ವೇಳೆ ಮಹಿಳೆಯೊಬ್ಬರು ಕಸದೊಂದಿಗೆ ಮಗುವಿನ ಡೈಪರ್ ಕೂಡ ತಂದಿದ್ದಾರೆ. ಈ ವೇಳೆ ಪೌರ ಕಾರ್ಮಿಕರು ‘ಮಗುವಿನ ಡೈಪರ್ ಅನ್ನು ಪ್ರತ್ಯೇಕವಾಗಿ ಕೊಡಿ’ ಎಂದು ಕೇಳಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಪೌರಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು, ವಿಕೋಪಕ್ಕೆ ತಿರುಗಿದೆ. ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ.ಜಗಳ ವಿಕೋಪಕ್ಕೆ ತಿರುಗಿದಾಗ ಆರೋಪಿಗಳು ಕಸದ ವಾಹನ ಚಾಲಕ ಕರಿಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ಪುಂಡರು, ಕರಿಬಸಪ್ಪ ಅವರ ಟೀ ಶರ್ಟ್ ಹರಿದು ಹಾಕಿ ಎಳೆದಾಡಿದ್ದಾರೆ.

ಇಷ್ಟಕ್ಕೆ ಸುಮ್ಮನಾಗದೇ ಸ್ಥಳದಲ್ಲಿದ್ದ ಪೌರಕಾರ್ಮಿಕ ಮಹಿಳೆ ರಾಜೇಶ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಹಲ್ಲೆ ಮಾಡಿದ ಅರೋಪಿಗಳನ್ನು ಬಂಧನ ಮಾಡುವವರೆಗೂ ಸ್ಥಳದಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ನಮ್ಮ ಮೇಲೆ ಪದೇ ಪದೇ ಹಲ್ಲೆಯಾಗುತ್ತಿದೆ. ನಮಗೆ ಭದ್ರತೆ ಇಲ್ಲದಂತಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

‘04ನೇ ವಾರ್ಡ್ ಮೆಹಬೂಬ್ ನಗರದಲ್ಲಿ ನಾವು ಕೆಲಸ ಮಾಡುತ್ತೇವೆ. ಹಸಿ ಕಸ ಒಣ ಕಸ ಬೇರ್ಪಡಿಸಬೇಕು ಎಂಬ ಕಾನೂನು ಇದೆ. ಅದನ್ನು ಬೇರ್ಪಡಿಸದೇ ಕಸ ಕೊಟ್ಟು ಹಲ್ಲೆ ಮಾಡಿದ್ದಾರೆ. ಎಲ್ಲ ರೀತಿಯ ಮಿಶ್ರಿತ ಕಸ ಅವರು ನೀಡಿದ ಚೀಲದಲ್ಲಿತ್ತು’ ಎಂದು ಹಲ್ಲೆಗೆ ಒಳಗಾದ ಕರಿಬಸಪ್ಪ ಹೇಳಿದ್ದಾರೆ.ಪ್ರಕರಣದ ಗಂಭೀರತೆ ಅರಿತ ಆಜಾದ್ ನಗರ ಠಾಣೆ ಪಿಐ ವಸಂತ್ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಅಜ್ಜು ಮತ್ತು ನೂರ್ ಎಂಬುವರಿಂದ ಪೌರ ಕಾರ್ಮಿಕನ ಮೇಲೆ ಹಲ್ಲೆ ಆಗಿದೆ. ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಹಲ್ಲೆಗೆ ಒಳಗಾದ ಕರಿಬಸಪ್ಪ ದೂರು ನೀಡಿದ್ದರು. ಇಬ್ಬರನ್ನು ಬಂಧಿಸಿದ್ದೇವೆ. ಇದರ ಸಂಬಂಧ ಎಫ್ಐಆರ್ ಆಗಿದೆ’ ಎಂದು ಆಜಾದ್ ನಗರ ಠಾಣೆಯ ಪಿಐ ವಸಂತ್​ ತಿಳಿಸಿದ್ದಾರೆ.

ವಿಷಯಗಳು: #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು