ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬುಧವಾರದವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಮುಂದುವರೆಯುವ ನಿರೀಕ್ಷೆ: ಐಎಂಡಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಬುಧವಾರದವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಮುಂದುವರೆಯುವ ನಿರೀಕ್ಷೆ: ಐಎಂಡಿ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೊರಡಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬುಧವಾರದವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಲಘು ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಮಾಂಡೌಸ್ ಚಂಡಮಾರುತ ಈ ವಾರದಲ್ಲಿ ಕಡಿಮೆಯಾಗಲಿದೆ. ತದನಂತರ ಬೆಂಗಳೂರಿನಲ್ಲಿ ಮೋಡಕವಿದ ವಾತವರಣ ಕಡಿಮೆಯಾಗುವ ಸಾಧ್ಯತೆಯಿದೆ.  ಹೀಗಾಗಿ ಮುಂದಿನ ಕೆಲವು ದಿನಗಳಲ್ಲಿ ಕೆಲವು ಪ್ರದೇಶಗಳಲ್ಲಿ ಮಂಜು ಕವಿದ ವಾತವರಣ ಮುಂದುವರೆಯುವ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಮೇಲ್ಮೈ ಮಾರುತಗಳು ಬಲವಾಗಿರುತ್ತವೆ, ಆಗ ತಾಪಮಾನವು 25 ಡಿಗ್ರಿ ಸೆಲ್ಸಿಯಸ್ ಅಥವಾ 18 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯ ವಿಪತ್ತು ಉಸ್ತುವಾರಿ ಕೋಶದ ಪ್ರಕಾರ, ಬೆಂಗಳೂರು ನಗರ ಜಿಲ್ಲೆಯ ಕೊಟ್ಟಿಗೆಪಾಳ್ಯದಲ್ಲಿ ಭಾನುವಾರ 64.5 ಮಿ.ಮೀ ಮಳೆಯಾಗಿದೆ. ನಗರದ ಇತರ ಭಾಗಗಳಲ್ಲಿಯೂ ಸಾಧಾರಣ ಮಳೆಯಾಗಿದೆ. ಶನಿವಾರ ದಾಖಲಾದ ನಿರಂತರ ತುಂತುರು ಮಳೆಗೆ ಹೋಲಿಸಿದರೆ, ಸಣ್ಣ ಪ್ರಮಾಣದ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ .

ಕರ್ನಾಟಕದ ಕರಾವಳಿ ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಂಗಳವಾರದವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ. ಬುಧವಾರ ಮಳೆ ಸಾಕಷ್ಟು ವ್ಯಾಪಕವಾಗಿರುವ ನಿರೀಕ್ಷೆಯಿದೆ ಮತ್ತು ಗುರುವಾರ ಮಳೆ ಮಿರಾಮ ನೀಡುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ಉಸ್ತುವಾರಿ ಕೋಶ ತಿಳಿಸಿದೆ.

ಈ ವರ್ಷದ ಅಕ್ಟೋಬರ್ ವೇಳೆಗೆ ಬೆಂಗಳೂರಿನಲ್ಲಿ ಸುಮಾರು 1,704 ಮಿ.ಮೀ ಮಳೆಯಾಗಿದೆ. ಈಶಾನ್ಯ ಮಾನ್ಸೂನ್ ಋತುವಿನಲ್ಲಿಯೂ ಉತ್ತಮ ಮಳೆಯಾಗಿದ್ದರಿಂದ 2022 ರ ಡಿಸೆಂಬರ್ ಅಂತ್ಯದ ವೇಳೆಗೆ ನಗರದ ಒಟ್ಟು ಮಳೆ 2,000 ಮಿ.ಮೀ.ಗೆ ತಲುಪುವ ನಿರೀಕ್ಷೆಯಿದೆ ಎನ್ನಲಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು