ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಐಪಿಎಲ್ ಕಪ್ ತಮ್ಮದಾಗಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆ ತಿಳಿಸಿದ ಸಿಎಂ, ಡಿಸಿಎಂ

P
ಐಪಿಎಲ್ ಕಪ್ ತಮ್ಮದಾಗಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆ ತಿಳಿಸಿದ ಸಿಎಂ, ಡಿಸಿಎಂ

ಐಪಿಎಲ್ ನ 18 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಐಪಿಎಲ್ ಕಪ್ ತಮ್ಮದಾಗಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಲ್ಲೆಡೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ವಿಶೇಷವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಅಹಮದಾಬಾದ್ ನ ಕ್ರೀಡಾಂಗಣದಲ್ಲಿ ಕಿಕ್ಕಿರಿದ ಪ್ರೇಕ್ಷಕರ ನಡುವೆ ಸಂಘಟನಾತ್ಮಕ ಹೋರಾಟ ಕೊಟ್ಟು, ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ 6 ರನ್ ಅಂತರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಮುಡಿಗೇರಿಸಿಕೊಂಡದ್ದು ನಮ್ಮ ಹೆಮ್ಮೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣ್ಣಿಸಿದ್ದಾರೆ.

ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಸಲಾ ಕಪ್ ನಮ್ದೇ! ಐಪಿಎಲ್ ಫೈನಲ್ ನಲ್ಲಿ ಈ ಮರೆಯಲಾಗದ, ಐತಿಹಾಸಿಕ ಗೆಲುವಿಗಾಗಿ ಆರ್.ಸಿ.ಬಿ.ಗೆ ಗೆ ಭಾರಿ ಅಭಿನಂದನೆಗಳು. 18 ವರ್ಷಗಳ ಉತ್ಸಾಹ, ನಿಷ್ಠೆ ಮತ್ತು ಎಂದಿಗೂ ಬಿಟ್ಟುಕೊಡದಿರುವುದು – ಮತ್ತು ಇಂದು ರಾತ್ರಿ, ಎಲ್ಲವೂ ಒಟ್ಟಿಗೆ ಬಂದವು! ನೀವು ಪ್ರತಿಯೊಬ್ಬ ಕನ್ನಡಿಗನ ಕನಸನ್ನು ನನಸಾಗಿಸಿದ್ದೀರಿ! ಇದು ಗೆಲುವಿಗಿಂತ ಹೆಚ್ಚಿನದು – ಇದು ಇಡೀ RCB ಸೈನ್ಯಕ್ಕೆ ಭಾವನಾತ್ಮಕ ಕ್ಷಣ. ಕರ್ನಾಟಕ ಹೆಮ್ಮೆಯಿಂದ ಘರ್ಜಿಸುತ್ತದೆ! ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

https://twitter.com/siddaramaiah/status/1929961964186546346?t=TJ7ydqkcLcZHnqqKY3e8_A&s=19

https://twitter.com/DKShivakumar/status/1929959968968716774?t=dy4AXBgjT8_knP0e43a-yg&s=19

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version