ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿ ವೈ ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎನ್ನುವ ಅನ್ವರ್ ಮಾಣಿಪ್ಪಾಡಿ ಆರೋಪವನ್ನು ಮೋದಿ ಸಿಬಿಐ ತನಿಖೆ ಮಾಡಿಸಲಿ: ಮುಖ್ಯಮಂತ್ರಿ

P

Peepal Media • ರಾಜ್ಯ

• 1 ನಿಮಿಷದ ಓದು

ಬಿ ವೈ ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎನ್ನುವ ಅನ್ವರ್ ಮಾಣಿಪ್ಪಾಡಿ ಆರೋಪವನ್ನು ಮೋದಿ ಸಿಬಿಐ ತನಿಖೆ ಮಾಡಿಸಲಿ: ಮುಖ್ಯಮಂತ್ರಿ

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version