ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧ, ಈ ಬಗ್ಗೆ ಅಪನಂಬಿಕೆ, ಅನುಮಾನ ಬೇಡ: ಸಿ ಎಮ್‌ ಸಿದ್ಧರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧ, ಈ ಬಗ್ಗೆ ಅಪನಂಬಿಕೆ, ಅನುಮಾನ ಬೇಡ: ಸಿ ಎಮ್‌ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.


ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ. ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ.


ಸಚಿವರಾದ ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿತು. ಒಳಮೀಸಲಾತಿ ಜಾರಿ ವಿಚಾರದಲ್ಲಿ ತನ್ನ ಬದ್ಧತೆಯನ್ನು ನಿಯೋಗಕ್ಕೆ ತಿಳಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ.


ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾವವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ ಎಂದು ಅವರು ಹೇಳಿದ್ದಾರೆ.


ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು