ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಚಿವ ಗಡ್ಕರಿ ಭೇಟಿಯಾದ ಸಿಎಂ: ಹೆದ್ದಾರಿ ಯೋಜನೆಗಳ ಕುರಿತು ಮಹತ್ವದ ಚರ್ಚೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸಚಿವ ಗಡ್ಕರಿ ಭೇಟಿಯಾದ ಸಿಎಂ:  ಹೆದ್ದಾರಿ ಯೋಜನೆಗಳ ಕುರಿತು ಮಹತ್ವದ ಚರ್ಚೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು .

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು, ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಸಚಿವರ ಗಮನ ಸೆಳೆದರು.

ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸುವುದು, ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು, ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ ನೀಡುವುದು, ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ ನೀಡುವುದು, ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡುವುದು ಸೇರಿದಂತೆ ಇನ್ನಿತರ ಪ್ರಮುಖ ಯೋಜನೆಗಳ ಕುರಿತು ಸಚಿವರಿಗೆ ವಿವರಿಸಲಾಯಿತು.

ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಅವರು ಸೇರಿ ಮೊದಲಾದವರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು