ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬಿತ್ತನೆ ಬೀಜಗಳ ಬೆಲೆ ಕಡಿಮೆಯಿದೆ: ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಉತ್ತರ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬಿತ್ತನೆ ಬೀಜಗಳ ಬೆಲೆ ಕಡಿಮೆಯಿದೆ: ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಉತ್ತರ

ಕರ್ನಾಟಕದಲ್ಲಿ ಮುಂಗಾರು ಆರಂಭಗೊಳ್ಳುತ್ತಿದ್ದಂತೆ ಬಿತ್ತನೆ ಬೀಜದ ವಹಿವಾಟೂ ಚುರುಕುಗೊಂಡಿದೆ. ಈ ನಡುವೆ ಈ ಬಾರಿ ಬಿತ್ತನೆ ಬೀಜಗಳ ಬೆಲೆ ದುಬಾರಿಯಾಗಿದೆಯೆಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ಕುರಿತು ವಿಪಕ್ಷ ನಾಯಕ ಆರ್‌ ಅಶೋಕ ಕೂಡಾ ಸರ್ಕಾರವನ್ನು ಟೀಕಿಸಿದ್ದರು.

ಪ್ರಸ್ತುತ ಈ ಕುರಿತು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಈಗಲೂ ಬೀಜಗಳ ಬೆಲೆ ಕಡಿಮೆಯೇ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ

ಅವರ ಪತ್ರಿಕಾ ಪ್ರಕಟಣೆ ತಿಳಿಸುವಂತೆ, “2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ.”

ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ.
ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ.

https://x.com/RAshokaBJP/status/1794636597318873415
ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ.

ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ.


ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ.


ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್‌-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ ಎಂದು ಮುಖ್ಯಮಂತ್ರಿ ಬೀಜಗಳ ಬೆಲೆಯೇರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ ಎಂದು ಪ್ರಕಟಣೆ ತಿಳಿಸಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು