ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಮಿಷನರ್‌ ಅಮಾನತು | ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ: ಸಿಎಂ ಸಿದ್ದರಾಮಯ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ಕಮಿಷನರ್‌ ಅಮಾನತು | ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜೂನ್ -06 : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು.ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಬೆಂಗಳೂರು ಇರುವ ಮಾಜಿ ಮುಖ್ಯಮಂತ್ರಿ ರವರದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರ ಪುಣ್ಯ ತಿಥಿಯಂದು ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿಕೊಂಡಿದೆ ಎಂದರು.

ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು
ಅವರಿಂದಾಗಿ ಬಡತನ ನಿರ್ಮೂಲನಾ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು ಎಂದರು.

ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಎಂದರು.

ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿದ್ದ ರಾಜಕಾರಣಿ
ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ , ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

ಕಾಲ್ತುಳಿತ ಪ್ರಕರಣ : ಬಿಜೆಪಿ ರಾಜಕೀಯ ಮಾಡುತ್ತಿದೆ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ.ಕುಮಾರಸ್ವಾಮಿ ಅವರು ಮತ್ತು ಬಿಜೆಪಿಯವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದಾರೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version