ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಿಳಾ ಅತಿಥಿ ಉಪನ್ಯಾಸಕರಿಗೆ, 3 ತಿಂಗಳು ಮಾತೃತ್ವ ರಜೆ ಘೋಷಣೆ – ಸಿ.ಎಂ ಸಿದ್ದರಾಮಯ್ಯ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಮಹಿಳಾ ಅತಿಥಿ ಉಪನ್ಯಾಸಕರಿಗೆ, 3 ತಿಂಗಳು ಮಾತೃತ್ವ ರಜೆ ಘೋಷಣೆ – ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : 2026–27ನೇ ಸಾಲಿನ ಬಜೆಟ್‌ (Karnataka Budget 2026) ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಈ ಕ್ರಮದಿಂದ ರಾಜ್ಯದ ಸಾವಿರಾರು ಮಹಿಳಾ ಅತಿಥಿ ಉಪನ್ಯಾಸಕರಿಗೆ ನೆರವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಇದುವರೆಗೆ ಅತಿಥಿ ಉಪನ್ಯಾಸಕರಿಗೆ ಮಾತೃತ್ವ ರಜೆಯ ಕುರಿತು ಸ್ಪಷ್ಟವಾದ ಸೌಲಭ್ಯ ಇರಲಿಲ್ಲ. ಈ ಕಾರಣದಿಂದ ಹಲವಾರು ಮಹಿಳಾ ಉಪನ್ಯಾಸಕರು ಉದ್ಯೋಗ ಮತ್ತು ಕುಟುಂಬ ಜವಾಬ್ದಾರಿಗಳನ್ನು ಸಮತೋಲನಗೊಳಿಸಲು ಕಷ್ಟ ಅನುಭವಿಸುತ್ತಿದ್ದರು. ಇದೀಗ ಸರ್ಕಾರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದಲೇ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಜಾರಿಗೆ ಬರಲಿದೆ.

ಇದರಿಂದ ಮಹಿಳಾ ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಭದ್ರತೆ ಜೊತೆಗೆ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸಲು ಸಹಾಯವಾಗಲಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಇದಕ್ಕೆ ಜೊತೆಗೆ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಅಜಿಂ ಪ್ರೇಮ್‌ಜೀ ಸಂಸ್ಥೆಯ ವತಿಯಿಂದ 2025–26ನೇ ಸಾಲಿನಲ್ಲಿ ಉನ್ನತ ಶಿಕ್ಷಣಕ್ಕಾಗಿ ಸುಮಾರು 37 ಸಾವಿರ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 30 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

ಈ ಯೋಜನೆಯ ವ್ಯಾಪ್ತಿಗೆ ಬಾರದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ‘ದೀಪಿಕಾ ವಿದ್ಯಾರ್ಥಿ ವೇತನ ಯೋಜನೆ’ ಅಡಿಯಲ್ಲಿ ಆರ್ಥಿಕ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು