ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರ ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು 30ರಿಂದ 20 ಶೇಕಡಾಕ್ಕೆ ಇಳಿಸಿ, ಜನ ಸಾಮಾನ್ಯರ ತೆರಿಗೆ ಪ್ರಮಾಣ ವಿಪರೀತ ಹೆಚ್ಚಿಸಿತು: ಸಿಎಂ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕೇಂದ್ರ ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು 30ರಿಂದ 20 ಶೇಕಡಾಕ್ಕೆ ಇಳಿಸಿ, ಜನ ಸಾಮಾನ್ಯರ ತೆರಿಗೆ ಪ್ರಮಾಣ ವಿಪರೀತ ಹೆಚ್ಚಿಸಿತು: ಸಿಎಂ

ಕೇಂದ್ರ ಸರ್ಕಾರ Corporate tax ನ್ನು 30 ರಿಂದ 20% ಗೆ ಇಳಿಸಿದ್ದು ನಿಜವಲ್ಲವೇ? ಯಡಿಯೂರಪ್ಪನವರು 2008 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಾಲ ಮನ್ನಾ ಮಾಡಲು‘ ನೋಟ್ ಪ್ರಿಂಟ್ ಮಾಡುವ ಮಿಷನ್’ ನಮ್ಮಲ್ಲಿ ಇಲ್ಲ ಎಂದಿರುವುದು ದಾಖಲೆಯಲ್ಲಿ ಇದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯಾಗಿರುವಾಗ 50 ಸಾವಿರದವರೆಗಿನ ಸೊಸೈಟಿ ಸಾಲ ಮನ್ನಾ ಮಾಡಿದ್ದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 72 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು.

ಆದರೆ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಲಿಲ್ಲ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ.

ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ತಾನಗಳೂ ಸೇರಿದಂತೆ ಹಲವು ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದರು ಎಂದು ಅವರು ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಜಾರಿಮಾಡಿರುವ ಐದು ಗ್ಯಾರಂಟಿಗಳನ್ನು ಬಡವರಿಗೆ ಸಾಮಾಜಿಕ , ಆರ್ಥಿಕವಾಗಿ ಶಕ್ತಿತುಂಬಿದ ಯೋಜನೆಗಳನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಲಿ.
ಬಿಜೆಪಿಯವರು ಸುಳ್ಳು ಭಾಷಣ ಮಾಡುವುದರಲ್ಲಿ ನಿಸ್ಸೀಮರು ಎಂದು ಎಲ್ಲರಿಗೂ ತಿಳಿದಿದೆ.

ನಾನು ಉತ್ತರ ನೀಡುವಾಗ ಅಡ್ಡಿಪಡಿಸಿದರೆ, ನಾನು ಯಾರಿಗೂ ಹೆದರುವುದಿಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ತಪ್ಪು ಹುಡುಕಲು ಸಾಧ್ಯವಿಲ್ಲದ್ದರಿಂದ ಪ್ರತಿಪಕ್ಷಗಳು ಸುಳ್ಳು ಹೇಳುತ್ತಿದ್ದಾರೆ.

ಗ್ಯಾರಂಟಿ ಯೋಜನೆಗಳು ಶಕ್ತಿ ನೀಡುವುದಿಲ್ಲ ಎಂದು ವಿರೋಧಪಕ್ಷದ ನಾಯಕರು ಹೇಳಿದರು.

ಶಕ್ತಿ ಯೋಜನೆಯಡಿ 409 ಕೋಟಿ ಜನ ಉಚಿತವಾಗಿ ಓಡಾದಿದ್ದಾರೆ. ಇದು ಮಹಿಳೆಯರಿಗೆ ಸಾಮಾಜಿಕ ಆರ್ಥಿಕ ಶಕ್ತಿ ನೀಡಿದ ಕಾರ್ಯಕ್ರಮ.1.26 ಕೋಟಿ ಅನ್ನಭಾಗ್ಯ ದಡಿ 170 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. 4 ಕೋಟಿಗೂ ಹೆಚ್ಚು ಜನ , ಗ್ಯಾರಂಟಿಗಳಿಂದ ಲಾಭ ಪಡೆದಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಜೀವನ ಸುಧಾರಿಸಿರುವ ಉದಾಹರಣೆಗಳಿವೆ. ಗೃಹಲಕ್ಷ್ಮಿಯ ಫಲಾನುಭವಿಯೊಬ್ಬರು , ಈ ಯೋಜನೆಯಿಂದ 10 ರಿಂದ 20 ಸಾವಿರ ಉಳಿಸಿ , ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿ, ಸೊಸೆಗೆ ಬಳೆ ಅಂಗಡಿ ಇಟ್ಟುಕೊಟ್ಟಿದ್ದೇನೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದರು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು