ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ವೈಮಾನಿಕ ಸಮೀಕ್ಷೆಗೆ ಮುಂದಾದ ಸಿಎಂ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ವೈಮಾನಿಕ ಸಮೀಕ್ಷೆಗೆ ಮುಂದಾದ ಸಿಎಂ

ಬೆಂಗಳೂರು : ಉತ್ತರ ಕರ್ನಾಟಕದ ಭಾಗಗಳಲ್ಲಿ ಭಾರೀ ಪ್ರವಾಹ ಆಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇದೀಗ ಪ್ರವಾಹದಿಂದಾಗಿ (Flood) ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

ಸಿಎಂ ಭೇಟಿ ಮಾಡಿದ ಸಚಿವರು
ಇಂದು ಸಿಎಂ ಸಿದ್ದರಾಮಯ್ಯ ಅವರನ್ನ ಬೀದರ್‌ನ ಉಸ್ತುವಾರಿ ಸಚಿವರಾದ ಈಶ್ವರ್‌ ಖಂಡ್ರೆ ಅವರು ಸಚಿವ ರಹೀಂಖಾನ್ ಜೊತೆಯಲ್ಲಿ ಭೇಟಿ ಮಾಡಿದ್ದು, ಬೀದರ್ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ  ಧಾರಾಕಾರ ಮಳೆ ಸರಿಯುತ್ತಿದೆ. ಇದರಿಂದಾಗಿ ದೊಡ್ಡ ಮಟ್ಟದಲ್ಲಿ ಪ್ರವಾಹ ಆಗಿದೆ. ಈ ಮಳೆಯ ಕಾರಣದಿಂದ ಮನೆಗಳಿಗೆ ಹಾಗೂ ಜಮೀನುಗಳಿಗೆ ಹಾನಿ ಆಗಿದೆ. ಹಾಗಾಗಿ ಈ ಹಾನಿಗಳ ಬಗ್ಗೆ ವೈಮಾನಿಕ ಸಮೀಕ್ಷೆ ಮಾಡಿ, ಜಿಲ್ಲೆಗಳಿಗೆ ವಿಶೇಷವಾದ ಪ್ಯಾಕೇಜ್‌ ಕೊಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಉತ್ತಮವಾದ ರೀತಿಯಲ್ಲಿ ಸ್ಪಂದನೆ ಕೊಟ್ಟಿದ್ದು, ಮುಂದಿನ ಮೂರು ದಿನಗಳಲ್ಲಿ ಸಮೀಕ್ಷೆ ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ.

ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ ಈಶ್ವರ್‌ ಖಂಡ್ರೆ
ಇನ್ನು ಈ ಬಗ್ಗೆ ಸಚಿವ ಈಶ್ವರ್‌ ಖಂಡ್ರೆ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದ್ದು, ಅದರಲ್ಲಿಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಕಾರಣದಿಂದ ಈ ರೀತಿ ಸಮಸ್ಯೆಗಳಾಗುತ್ತಿದೆ. ಇದರಿಂದಾಗಿ ಬೀದರ್‌ ಜಿಲ್ಲೆಯಲ್ಲಿ ಸಮಸ್ಯೆ ಆಗುತ್ತಿದೆ. ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ಕಾರಣದಿಂದ ಇಲ್ಲಿನ ಜನರು ಕೃಷಿಯನ್ನ ಅವಲಂಬಿಸಿ ಜೀವನ ಮಾಡುತ್ತಾರೆ. ಈ ರೀತಿ ಜೋರಾದ ಮಳೆ ಹಾಗೂ ಪ್ರವಾಹದಿಂದ ಜಮೀನುಗಳ ಬೆಳೆ ನಾಶವಾಗಿದೆ. ಇದರಿಂದ ರೈತರ ಪರಿಸ್ಥಿತಿ ದುಸ್ತರವಾಗಿದೆ ಎಂದು ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವರು ಭೇಟಿ
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಕೃಷ್ಣ  ಮತ್ತು ಭೀಮಾ ನದಿಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದೀಗ ವಿಜಯಪುರ ಉಸ್ತುವಾರಿ ಸಚಿವರಾದ ಎಂ ಬಿ ಪಾಟೀಲ್‌ ಹಾಗೂ ಕಲಬುರಗಿ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಜನರಿಗೆ ಧೈರ್ಯ ಹೇಳಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಿದ್ದಾರೆ.

ಇಂದು ವಿಜಯಪುರ ಉಸ್ತುವಾರಿ ಸಚಿವರಾದ ಎಂ ಬಿ ಪಾಟೀಲ್‌ ಅವರು ಆಲಮೇಲ ತಾ. ಕುಮಸಗಿ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ಕೊಟ್ಟಿದ್ದು, ಮೂಲ ಸೌಕರ್ಯಗಳನ್ನ ಪರಿಶೀಲನೆ ಮಾಡಿ, ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಕಲಬುರ್ಗಿ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಳಗಿ ತಾಲೂಕಿನ ಹಳೆ ಹೆಬ್ಬಾಳ, ಕಣಸೂರು ಹಾಗೂ ಮಲಘಾಣ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಜನರಿಗೆ ಪ್ರತಿ ಹಂತದಲ್ಲೂ ಜೊತೆ ಇರುವುದಾಗಿ ಭರವಸೆ ಕೊಟ್ಟಿದ್ದಾರೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು