ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ, ಮೇ 21ರಂದು ಇಡೀ ದಿನ ನಗರ ಪ್ರದಕ್ಷಿಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ, ಮೇ 21ರಂದು ಇಡೀ ದಿನ ನಗರ ಪ್ರದಕ್ಷಿಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಳಿದ್ದು ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು ಎಂದರು.

ಈವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣ

ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ. ಮಿ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಉದ್ದದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮಿ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ವತಿಯಿಂದ ಕೈಗೊಳ್ಳಲಾಗಿದ್ದು, ರಾಜಕಾಲುವೆ ಕಾರ್ಯ ಪ್ರಗತಿಯಲ್ಲಿದೆ. ರಾಜಕಾಲುವೆಗಳಾಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ನಗರದಲ್ಲಿ ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತು ಮಾಡಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಬಾಕಿ 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 24 ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಈ ಸಮಸ್ಯೆ ಬಹಳಷ್ಟು ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹಿಳೆ ಸಾವು: ಪರಿಹಾರ ಘೋಷಣೆ
ವೈಟ್ ಫೀಲ್ಡ್ ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳ ಪರಿಹಾರವನ್ನು ನೀಡುವುದಾಗಿ ಸಿಎಂ ಘೋಷಿಸಿದರು.

ರಾಜಕಾಲುವೆಗಳ ಕಾಮಗಾರಿ ಕೈಗೊಳ್ಳಲಾಗಿದೆ

ಸಂಚಾರಿ ಪೊಲೀಸರು 132 ಸ್ಥಳಗಳನ್ನು ಗುರುತಿಸಿದ್ದಾರೆ. ಈ ಪೈಕಿ 82 ಕಾಮಗಾರಿ ಪೂರ್ಣಗೊಂಡಿದ್ದು, 41 ಕಾಮಗಾರಿಗಳು ಬಾಕಿ ಇವೆ. ಈ ವರ್ಷ ಇಡೀ ಬೆಂಗಳೂರಿನ ರಾಜಕಾಲುವೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್, ಹೆಬ್ಬಾಳ ಜಂಕ್ಷನ್ ಬಳಿ ಅತಿ ಹೆಚ್ಚು ಮಳೆಯಾಗಿದ್ದು, ನೀರು ಹರಿದುಹೋಗುವಂತೆ ದಾರಿ ಮಾಡಲು ರೈಲ್ವೆಯವರಿಗೆ ಕೆಲಸವನ್ನು ವಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿವರಿಸಿದರು.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಮರಗಳು ತೆರವು
ಮರಗಳನ್ನು ಕೂಡಲೇ ತೆರವು ಮಾಡಲು ಖಾಯಂ ತಂಡಗಳಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು
ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಒಂದೇ. ಸರ್ಕಾರ ಶ್ರೀಮಂತರು, ಬಡವರು ಎಂದು ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಒತ್ತುವರಿಯಾಗದಂತೆ ತಡೆಯಲು ಸೂಚನೆ

4292 ಒತ್ತುವರಿಯಾಗಿದ್ದು , ಈ ಪೈಕಿ 2326 ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಒತ್ತಿವರಿಯಾಗದಂತೆ ನೋಡಿಕೊಳ್ಳಲು ಸೂಚನೆಯನ್ನು ನೀಡಲಾಗಿದೆ ಎಂದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version