ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾವೇರಿ ವಿಚಾರ: ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ಪತ್ರ ಬರೆದ ಮುಖ್ಯಮಂತ್ರಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕಾವೇರಿ ವಿಚಾರ: ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ಪತ್ರ ಬರೆದ ಮುಖ್ಯಮಂತ್ರಿ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವ ವಿಷಯದ ಕುರಿತು ಈಗಾಗಲೇ ಸರ್ವ ಪಕ್ಷಗಳ ಸಭೆ ಕರೆಯುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಸಹ ಭೇಟಿಯಾಗುವುದಾಗಿ ತಿಳಿಸಿದ್ದರು.

ಈ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿಯವರು ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗದಿರುವ ಕರ್ನಾಟಕದ ಅಸಹಾಯಕತೆಯನ್ನು ವಿವರಿಸಿ ಕೇಂದ್ರ ಜಲ ಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಈ ಪತ್ರದಲ್ಲಿ ಅವರು ಕಾವೇರಿ ನದಿ ನೀರನ್ನು ರೈತರು ಕೃಷಿಗೆ, ಜನಸಾಮಾನ್ಯರು ಮತ್ತು ಜಾನುವಾರುಗಳು ಕುಡಿಯುವ ಸಲುವಾಗಿ ನಂಬಿಕೊಂಡಿದ್ದು, ಈ ಹಂತದಲ್ಲಿ ನೀರು ಬಿಟ್ಟರೆ ರಾಜ್ಯದ ಈ ಭಾಗದ ಜನರಿಗೆ ನೀರಿನ ಕೊರತೆ ಕಾಡಲಿದೆ ಎಂದು ತಿಳಿಸಿದ್ದಾರೆ.

ಹೀಗಿರುವಾಗ ಪ್ರಾಧಿಕಾರದ ಆದೇಶಕ್ಕೆ ಅನುಗುಣವಾಗಿ ನೀರು ಬಿಡುವುದು ಅಸಾಧ್ಯವಾಗಿದ್ದು. ಕಾವೇರಿ ನದಿ ನೀರು ನಿಯಂತ್ರಣ ಸಮಿತಿಗೆ ತನ್ನ ಆದೇಶವನ್ನು ಪರಿಶೀಲಿಸುವಂತೆ ಕೋರಬೇಕೆಂದು ಮುಖ್ಯಮಂತ್ರಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟವು ಇದುವರೆಗೆ ಪ್ರಾಧಿಕಾರದ ಎಲ್ಲಾ ಆದೇಶಗಳನ್ನು ಪಾಲಿಸಿದ್ದು, ಪ್ರಸ್ತುತ ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿ ಬರದ ವಾತಾವರಣವಿದೆ. ಹೀಗಿರುವಾಗ ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಲಿದೆ ಎಂದು ಸಿ ಎಮ್‌ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಾಧಿಕಾರವು ಮುಂದಿನ 15 ದಿನಗಳ ತನಕ ನೀರು ಬಿಡುವಂತೆ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಮನವಿ ಸಲ್ಲಿಸಬೇಕೆಂದು ಕೋರಲಾಗಿದೆ.

ಈ ನಡುವೆ ಇಂದು ಮಂಡ್ಯ ಸುತ್ತಮುತ್ತ ಕಾವೇರಿ ನೀರಿನ ಕುರಿತಾಗಿ ಬಿರುಸಿನ ಹೋರಾಟಗಳು ನಡೆದವು. ಪ್ರಸ್ತುತ ವಿವಾದದ ಚೆಂಡು ಹೋಗಿ ಕೇಂದ್ರದ ಅಂಗಳದಲ್ಲಿ ಬಿದ್ದಿದ್ದು ಅದರ ನಿಲುವು ಏನೆನ್ನುವುದರ ಮೇಲೆ ಕಾವೇರಿ ನದಿ ನೀರಿನ ವಿಷಯ ನಿರ್ಧಾರವಾಗಲಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು