ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬರಗಾಲ ಘೋಷಣೆಯ ಮಾನದಂಡಗಳನ್ನು ಬದಲಿಸುವಂತೆ ಕೇಂದ್ರಕ್ಕೆ CM ಪತ್ರ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಬರಗಾಲ ಘೋಷಣೆಯ ಮಾನದಂಡಗಳನ್ನು ಬದಲಿಸುವಂತೆ ಕೇಂದ್ರಕ್ಕೆ CM ಪತ್ರ

ಬೆಂಗಳೂರು : ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಸಡಿಲಿಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಮುಂಗಾರುಮಳೆ ವಾಡಿಕೆಗಿಂತ ಕಡಿಮೆಯಾಗಿದ್ದು, ಮಳೆ ಕೊರತೆಯನ್ನು ಎದುರಿಸುವಂತಾಗಿದೆ.

ಈಗಿರುವ ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಬರ ಪರಿಸ್ಥಿತಿ ಘೋಷಣೆ ಮಾಡಲು ಅಡ್ಡಿಯಾಗುತ್ತಿದ್ದು, ಆಯಾ ರಾಜ್ಯದ ಸ್ಥಳೀಯ ಪರಿಸ್ಥಿತಿಗನುಗುಣವಾಗಿ ಬರ ಘೋಷಣೆಗೆ ಅನುಕೂಲವಾಗುವಂತೆ ಮಾರ್ಗಸೂಚಿಗಳನ್ನು ಸಡಿಲ ಮಾಡುವಂತೆ ಮುಖ್ಯಮಂತ್ರಿ ಕೋರಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಿಂಗ್ ಅವರಿಗೆ ಸುದೀರ್ಘ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಪ್ರಸ್ತುತ ರಾಜ್ಯದಲ್ಲಿ ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದರೂ ಬರಗಾಲ ಘೋಷಣೆ ಮಾಡಲು ನಿಯಮಗಳನ್ನು ಬದಲಾವಣೆ ಮಾಡಬೇಕಾದ ಅನಿವಾರ್ಯತೆಯಿದೆ ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಅಸಮರ್ಪಕ ಮುಂಗಾರಿನಿಂದಾಗಿ ಆಗಸ್ಟ್ ತಿಂಗಳಿನ ಮಧ್ಯಭಾಗದವರೆಗೂ ವಾಡಿಕೆ ಪ್ರಮಾಣದ ಮಳೆ ಬಂದಿಲ್ಲ. ರಾಜ್ಯದಲ್ಲಿ ಕೆಲವೆಡೆ ಬಿತ್ತನೆಯೂ ಆಗಿಲ್ಲ. ಹಲವಾರು ವರ್ಷಗಳಿಂದ ಬರಗಾಲ ಘೋಷಣೆಗೆ ನಿಗದಿಪಡಿಸಿರುವ ಮಾನದಂಡಗಳನ್ನು ಬದಲಾವಣೆ ಮಾಡಬೇಕೆಂಬುದು ನಮ್ಮ ಒತ್ತಾಯವಾಗಿತ್ತು. ತಕ್ಷಣವೇ ರಾಜ್ಯದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಕರ್ನಾಟಕದ ನೆರವಿಗೆ ಧಾವಿಸಬೇಕೆಂದು ಸಿದ್ದರಾಮಯ್ಯ ಅವರು ಕೋರಿದ್ದಾರೆ.

ಈಗಿರುವ ಬರ ಕೈಪಿಡಿಯಿಂದ ರಾಜ್ಯಸರ್ಕಾರಕ್ಕೆ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ. ಬರಗಾಲವನ್ನು ಘೋಷಿಸಲು ಕೇಂದ್ರವು ಬರಕೈಪಿಡಿಯನ್ನು ಹೊಂದಿದೆ. ಹಿಂದಿನ ಕೈಪಿಡಿಯನ್ನು 2016ರಲ್ಲಿ ಬಿಡುಗಡೆ ಮಾಡಲಾಗಿತ್ತು. ಈಗಿನ ವಾಸ್ತವಿಕತೆಗೂ ಅಂದಿನ ವಾಸ್ತವಿಕತೆಗೂ ವ್ಯತ್ಯಾಸವಾಗುತ್ತಿರುವುದರಿಂದ ಇದು ತುರ್ತಾಗಿ ಬದಲಾಗಬೇಕೆಂದು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಬರ ಪರಿಹಾರಕ್ಕೆ ಕೇಂದ್ರ ಶೇ. 75ರಷ್ಟು ಅನುದಾನ ನೀಡಿದರೆ, ರಾಜ್ಯ ಸರ್ಕಾರ ಶೇ. 25ರಷ್ಟು ಅನುದಾನ ನೀಡಲಿದೆ. ಹೀಗಾಗಿ ಕೇಂದ್ರದ ಷರತ್ತುಗಳನ್ನು ಪಾಲನೆ ಮಾಡಬೇಕಾದ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ 336 ಮಿ.ಮೀ. ವಾಡಿಕೆ ಮಳೆ ಬದಲು 234 ಮಿ.ಮೀ. ಮಳೆ ಆಗಿದೆ. ಸುಮಾರು ಶೇ. 34 ಮಳೆಯ ಕೊರತೆಯಾಗಿದೆ. ವಿಳಂಬ ಮುಂಗಾರಿನಿಂದ ಜೂನ್ ತಿಂಗಳಲ್ಲಿ ಸುಮಾರು ಶೇ.56 ಮಳೆಯ ಕೊರತೆ ಉಂಟಾಗಿದೆ. ಕಠಿಣ ಮಾನದಂಡಗಳಿಂದ ಹಲವು ತಾಲೂಕುಗಳಲ್ಲಿ ಬರ ಎಂದು ಘೋಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿz?ದÁರೆ ಎಂದು ಸಿಎಂ ವಿವರಿಸಿದ್ದಾರೆ.

ರಾಜ್ಯದ ಹಲವೆಡೆ ಎದುರಾಗಿರುವ ಬರಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಗಂಭೀರವಾಗಿ ಪ್ರಯತ್ನಿಸುತ್ತಿದೆ. ರಾಜ್ಯದ ಕೆಲವು ತಾಲೂಕುಗಳಲ್ಲಿ ಬರದ ಛಾಯೆ ಇದೆ. ಕೇಂದ್ರದ ಮಾನದಂಡಗಳ ಪ್ರಕಾರ ಶೇ. 60ರಷ್ಟು ಮಳೆಯ ಕೊರತೆ ಆಗಿರಬೇಕು ಮತ್ತು ಕನಿಷ್ಠ ಮೂರು ವಾರ ಸತತವಾಗಿ ಮಳೆಯಾಗಬಾರದು. ಇದರ ಬದಲಿಗೆ ರಾಜ್ಯದ ಸಮಗ್ರ ಚಿತ್ರಣವನ್ನು ನೋಡಿ ಘೋಷಣೆಗೆ ಅವಕಾಶ ಮಾಡಿಕೊಡಬೇಕು. ಶೇ. 60ರಷ್ಟು ಮಳೆಯ ಕೊರತೆಯನ್ನು ಶೇ. 30ಕ್ಕೆ ಇಳಿಕೆ ಮಾಡಬೇಕು ಮತ್ತು ಮೂರು ವಾರ ಸತತವಾಗಿ ಮಳೆ ಆಗಿರಬಾರದು ಎಂಬ ಮಾನದಂಡವನ್ನು ಬದಲಿಸಿ ಅದನ್ನು ಎರಡು ವಾರಕ್ಕೆ ಇಳಿಕೆ ಮಾಡಬೇಕು ಎಂಬ ಸಲಹೆಯನ್ನು ಪತ್ರದಲ್ಲಿ ಮಾಡಲಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು