ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಮಿಷನ್ ಹೆಸರಲ್ಲಿ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕಮಿಷನ್ ಹೆಸರಲ್ಲಿ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿರುವುದರಿಂದ, ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪೋಷಕರಿಂದ ತಿಂಗಳಿಗೆ 100 ರೂಪಾಯಿ ಪಡೆಯುವ ಹಂತಕ್ಕೆ ತಲುಪಿದ್ದು ಈ  ಕುರಿತು ಸಿದ್ದರಾಮಯ್ಯ  ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ʼಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ. ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತುʼ ಎಂದು ಟೀಕಿಸಿದ್ದಾರೆ.

ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ‌ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼನಮ್ಮ ಸರ್ಕಾರ ವಿದ್ಯಾಸಿರಿ, ಅರಿವು,‌ ಶೂ ಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆʼ ಎಂದು ಸರ್ಕಾರದ ವಿರುದ್ದ ಅಸಮಾಧಾನ ಪಟ್ಟಿದ್ದಾರೆ.

ʼಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆʼ ಎಂದು ಒತ್ತಾಯ  ಮಾಡಿದ್ದಾರೆ.

https://youtu.be/k0-AgA8lpt8


PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು