ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ದುರಂತ: ಸಿಐಡಿ ತನಿಖೆ, ಕಮೀಷನರ್ ಬಿ. ದಯಾನಂದ ಸೇರಿ ಹಲವು ಪೊಲೀಸ್ ಅಧಿಕಾರಿಗಳ ಅಮಾನತು

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ದುರಂತ: ಸಿಐಡಿ ತನಿಖೆ, ಕಮೀಷನರ್ ಬಿ. ದಯಾನಂದ ಸೇರಿ ಹಲವು ಪೊಲೀಸ್ ಅಧಿಕಾರಿಗಳ ಅಮಾನತು

ಬೆಂಗಳೂರು, ಜೂನ್ 6, 2025: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ತಂಡದ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜೂನ್ 4ರಂದು ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ಘಟನೆಯ ಬಗ್ಗೆ ಗುರುವಾರ (ಜೂನ್ 5, 2025) ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಈ ಕಾಲ್ತುಳಿತ ಘಟನೆ ದುಃಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತೇನೆ. ಈ ದುರಂತದಲ್ಲಿ ಮೃತರಾದವರ ಕುಟುಂಬದವರ ಜೊತೆ ಸರ್ಕಾರವಿದೆ. ನಾನು ಶಾಸಕ, ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ” ಎಂದು ತಿಳಿಸಿದರು.

ಸಚಿವ ಸಂಪುಟ ಸಭೆಯ ಮುಖ್ಯ ತೀರ್ಮಾನಗಳು:

  • ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಈ ಆಯೋಗವು ಘಟನೆಯ ಸಮಗ್ರ ತನಿಖೆ ನಡೆಸಿ 30 ದಿನಗಳಲ್ಲಿ ವರದಿ ಸಲ್ಲಿಸಲಿದೆ.
  • ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಬಂಧಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಈ ಸಂಸ್ಥೆಗಳ ಮೇಲೆ ದುರ್ಮರಣಕ್ಕೆ ಕಾರಣವಾದ ಆರೋಪ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಹೊರಿಸಲಾಗಿದೆ.
  • ಈ ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಬೇಜವಾಬ್ದಾರಿತನ ಮತ್ತು ಅಲಕ್ಷ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಎ.ಕೆ. ಗಿರೀಶ್, ಆ ಭಾಗದ ಎಸಿಪಿ ಸಿ. ಬಾಲಕೃಷ್ಣ, ಸೆಂಟ್ರಲ್ ಡಿಸಿಪಿ ಶೇಖರ್ ಎಚ್. ತೇಕ್ಕಣ್ಣವರ್, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ಹಾಗೂ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ ಅವರನ್ನು ತಕ್ಷಣದಿಂದ ಅಮಾನತ್ತುಗೊಳಿಸಲಾಗಿದೆ.
  • ಈ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ.
  • ಜೂನ್ 4ರಂದು ಆದೇಶಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆ ಆರಂಭವಾಗಿದ್ದು, 15 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ.
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು